Bengaluru Rains: ಬೆಂಗಳೂರಿನಲ್ಲಿ ಮುಂದುವರೆದ ಮಳೆ: ಚಿನ್ನಸ್ವಾಮಿ ಸ್ಟೇಡಿಯಂ ಸೇರಿ ಹಲವೆಡೆ ಮಳೆ ಆರಂಭ

ಬೆಂಗಳೂರು ನಗರದಲ್ಲಿ ಕಳೆದೊಂದು ವಾರದಿಂದ ಮಳೆ ಸುರಿಯುತ್ತಿದೆ. ಅದೇ ರೀತಿಯಾಗಿ ಇಂದು ಕೂಡ ಕೆಂಗೇರಿ, ನಾಗರಬಾವಿ, ರಾಜಾಜಿನಗರ, ಮಲ್ಲೇಶ್ವರ, ಬಸವೇಶ್ವರನಗರ, ಮೆಜೆಸ್ಟಿಕ್​ನಲ್ಲಿ ಮಳೆ ಆಗಿದೆ. ಮಳೆರಾಯನ ಆರ್ಭಟಕ್ಕೆ ಜನರು ಪರದಾಡಿದ್ದಾರೆ. ಮಳೆರಾಯನ ಕಾಟ ಆರ್‌ಸಿಬಿ ಮತ್ತು ಸಿಎಸ್​ಕೆ ಪಂದ್ಯಕ್ಕೂ ತಟ್ಟಿದ್ದು, ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಕೂಡ ಮಳೆ ಆಗಿದೆ.

Bengaluru Rains: ಬೆಂಗಳೂರಿನಲ್ಲಿ ಮುಂದುವರೆದ ಮಳೆ: ಚಿನ್ನಸ್ವಾಮಿ ಸ್ಟೇಡಿಯಂ ಸೇರಿ ಹಲವೆಡೆ ಮಳೆ ಆರಂಭ
ಬೆಂಗಳೂರಿನಲ್ಲಿ ಮುಂದುವರೆದ ಮಳೆ: ಚಿನ್ನಸ್ವಾಮಿ ಸ್ಟೇಡಿಯಂ ಸೇರಿ ಹಲವೆಡೆ ಮಳೆ ಆರಂಭ
Follow us
ಗಂಗಾಧರ​ ಬ. ಸಾಬೋಜಿ
|

Updated on:May 18, 2024 | 8:39 PM

ಬೆಂಗಳೂರು, ಮೇ 18: ನಗರದಲ್ಲಿ ಕಳೆದೊಂದು ವಾರದಿಂದ ಮಳೆ (Rain) ಸುರಿಯುತ್ತಿದೆ. ಇಂದು ಕೂಡ ಕೆಂಗೇರಿ, ನಾಗರಬಾವಿ, ಸದಾಶಿವನಗರ, ಶೇಷಾದ್ರಿಪುರ, ವಸಂತ ನಗರ, ಬನಶಂಕರಿ, ನಾಯಂಡಹಳ್ಳಿ, ವಿಜಯನಗರ, ರಾಜಾಜಿನಗರ, ಮಲ್ಲೇಶ್ವರ, ಬಸವೇಶ್ವರನಗರ, ಕಾಮಾಕ್ಷಿಪಾಳ್ಯ, ಶಿವಾಜಿನಗರ, ಕೆಐಎಎಲ್ ವಿಮಾನ ನಿಲ್ದಾಣ ಬೆಂಗಳೂರು, ಮೆಜೆಸ್ಟಿಕ್​ ಪ್ರದೇಶಗಳಲ್ಲಿ ಗುಡುಗು, ಸಿಡಿಲು ಸಹಿತ ಜೋರು ಮಳೆ ಆಗಿದೆ. ಮಳೆರಾಯನ ಆರ್ಭಟಕ್ಕೆ ಜನರು ಪರದಾಡಿದ್ದಾರೆ. ಇಂದು ಆರ್‌ಸಿಬಿ ಮತ್ತು ಸಿಎಸ್​ಕೆ ಪಂದ್ಯ ಕೂಡ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಆ ಭಾಗದ ಸುತ್ತಮುತ್ತ ಕೂಡ ಮಳೆ ಆಗಿದೆ.

ಇನ್ನು ನಗರದಲ್ಲಿ ಬೆಳಿಗ್ಗೆಯಿಂದಲೇ ಹಲವೆಡೆ ಮೋಡ ಕವಿದ ವಾತಾವರಣವಿತ್ತು. ಮುಂದಿನ ಐದು ದಿನಗಳಲ್ಲಿ ರಾಜ್ಯಾದ್ಯಂತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು ಹೊರತುಪಡಿಸಿ ಇತರೆ ಜಿಲ್ಲೆಗಳಲ್ಲಿಯೂ ಮಳೆ ಆಗಿದೆ. ಗಡಿ ನಾಡು ಚಾಮರಾಜನಗರದಲ್ಲಿ  ವರುಣದೇವ ಧರೆಗಿಳಿದಿದ್ದು, ಜನರ ಮೊಗದ ಮೇಲೆ ಮಂದಹಾಸ ತಂದಿದ್ದಾನೆ. ನಗರದ ಹಲವೆಡೆ ಕಳೆದ ಅರ್ಧ ಗಂಟೆಯಿಂದಲೂ ಮಳೆ ಸುರಿದೆ. ಮಳೆಯಿಂದ ವಾಹನ ಸವಾರರು ಪರದಾಡಿದ್ದಾರೆ. ಕಳೆದ ವರ್ಷ ಮಳೆ ಬಾರದೆ ಕೆರೆ ಕಟ್ಟೆಗಳು ಬತ್ತಿ ಹೋಗಿದ್ದವು. ಈ ಭಾರಿ ಪೂರ್ವ ಮುಂಗಾರು ಆರಂಭ ಹಿನ್ನಲೆ ರೈತರಿಗೆ ಸಂತಸ ತಂದಿದೆ.

ಹಾಸನದಲ್ಲಿ ಮುಂದುವರೆದ ಮಳೆ

ಹಾಸನ ಜಿಲ್ಲೆಯ ಬಹುತೇಕ ಕಡೆ ಮಳೆ ಮುಂದುವರೆದಿದೆ. ಕಳೆದ ಮೂರು ದಿನಗಳಿಂದ ಜಿಲ್ಲೆಯ ವಿವಿಧೆಡೆ ಮಳೆ ಆಗುತ್ತಿದೆ. ಇಂದು ಮಧ್ಯಾಹ್ನವೇ ಸುಮಾರು ಅರ್ಧ ಗಂಟೆಯಿಂದ ಮಳೆ ಸುರಿದಿದೆ. ಅತಿಯಾದ ತಾಪಮಾನದಿಂದ ಕಂಗೆಟ್ಟಿದ್ದ ಜನರಿಗೆ ಖುಷಿ ಆಗಿದ್ದು, ಕೃಷಿ ಚಟುವಟಿಕೆಗಳನ್ನು ಜಿಲ್ಲೆಯ ರೈತರು ಚುರುಕುಗೊಳಿಸಿದ್ದಾರೆ.

ಇದನ್ನೂ ಓದಿ: ಹಾವೇರಿಯಲ್ಲಿ ಇಂದು ಸುರಿದ ಮಳೆ ಚಿಕ್ಕಮಗಳೂರುನಲ್ಲಿ ಎಂದಿನಂತೆ ಸುರಿಯುತ್ತಿದೆ; ಬೆಂಗಳೂರಲ್ಲಿ ಇವತ್ತು ಬೇಡ!

ಚಿಕ್ಕಬಳ್ಳಾಪುರದತ್ತ ಕೂಡ ವರುಣ ಮುಖ ಮಾಡಿದ್ದು, ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿದಿದೆ. ಜೋರು ಮಳೆಗೆ ಅವಾಂತರಗಳು ಸಂಭವಿಸಿದ್ದು, ಸಿ.ಎಸ್.ಐ.ಆಸ್ಪತ್ರೆ ರಸ್ತೆಯಲ್ಲಿ ವಿದ್ಯುತ್‍ ಕಂಬಗಳ ಮೇಲೆ ಮರ ಉರುಳಿಬಿದಿದ್ದೆ. ಅದೃಷ್ಟವಶಾತ್ ಅನಾಹುತ ತಪ್ಪಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:26 pm, Sat, 18 May 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್