ರಾಮೇಶ್ವರಂ ಕೆಫೆ ಬ್ಲಾಸ್ಟ್: ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಸಹಕರಿಸುವಂತೆ ಎನ್​​ಐಎ ಮನವಿ

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ಮತ್ತಷ್ಟು ಚುರುಕು ಪಡೆದುಕೊಂಡಿದೆ. ಎನ್​​ಐಎ ಎಲ್ಲಾ ಆಯಾಮದಲ್ಲೂ ಪ್ರಕರಣದ ತನಿಖೆ ಮಾಡುತ್ತಿದೆ. ಆದರೂ ಸಹ ಆರೋಪಿಗಳು ಪತ್ತಯಾಗಿಲ್ಲ. ಹೀಗಾಗಿ ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಸಹಕರಿಸುವಂತೆ ಸಾರ್ವಜನಿಕರಿಗೆ ಎನ್​ಐಎ ಮನವಿ ಮಾಡಿದೆ. 

ರಾಮೇಶ್ವರಂ ಕೆಫೆ ಬ್ಲಾಸ್ಟ್: ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಸಹಕರಿಸುವಂತೆ ಎನ್​​ಐಎ ಮನವಿ
ರಾಮೇಶ್ವರಂ ಕೆಫೆ, ಎನ್​ಐಎ
Follow us
Shivaprasad
| Updated By: ಗಂಗಾಧರ​ ಬ. ಸಾಬೋಜಿ

Updated on: Apr 05, 2024 | 7:32 PM

ಬೆಂಗಳೂರು, ಏಪ್ರಿಲ್​ 05: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ (Bengaluru Rameshwaram cafe blast Case) ತನಿಖೆ ಮತ್ತಷ್ಟು ಚುರುಕು ಪಡೆದುಕೊಂಡಿದೆ. ದೇಶದ 18 ಕಡೆ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದೆ. ಈಗಾಗಲೇ ಇಬ್ಬರು ಆರೋಪಿಗಳ ಸುಳಿವಿಗೆ ತಲಾ 10 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ. ಎನ್​​ಐಎ ಎಲ್ಲಾ ಆಯಾಮದಲ್ಲೂ ಪ್ರಕರಣದ ತನಿಖೆ ಮಾಡುತ್ತಿದೆ. ಆದರೂ ಸಹ ಆರೋಪಿಗಳು ಪತ್ತಯಾಗಿಲ್ಲ. ಹೀಗಾಗಿ ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಸಹಕರಿಸುವಂತೆ ಸಾರ್ವಜನಿಕರಿಗೆ ಎನ್​ಐಎ ಮನವಿ ಮಾಡಿದೆ.

ಈ ಕುರಿತಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಎನ್​​ಐಎ, ಬಾಂಬ್ ಇಟ್ಟ ಮುಸಾವೀರ್ ಹಾಗೂ ಇದಕ್ಕೆ ರೂಪುರೇಷೆ ಸಿದ್ದಪಡಿಸಿದ ಅಬ್ದುಲ್ ಮತೀನ್ ತಾಹ ಇಬ್ಬರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. ಇವರಿಗೆ ಸಹಾಯ ಮಾಡಿದ ಮುಜಾಮಿಲ್ ಷರೀಫ್ ಎಂಬಾತನನ್ನು ಬಂಧನ ಮಾಡಲಾಗಿದೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್: ಮತ್ತಿಬ್ಬರ ಫೋಟೋ ಬಿಡುಗಡೆ ಮಾಡಿದ NIA, ಸುಳಿವು ಕೊಟ್ಟವರಿಗೆ ಬಂಪರ್ ಬಹುಮಾನ

ತನಿಖೆಯ ಭಾಗವಾಗಿ ಆರೋಪಿಗಳ ಸಂಬಂಧಿಕರು, ಸ್ನೇಹಿತರು, ಬಂಧಿತ ಆರೋಪಿಗಳು ಎಲ್ಲರ ವಿಚಾರಣೆ ನಡೆಯುತ್ತಿದೆ. ಇದು ಭಯೋತ್ಪಾದಕ ಕೃತ್ಯ ಆಗಿರುವುದರಿಂದ ವಿಚಾರಣೆ ಮಾಡುವವರ ವಿವರಗಳನ್ನ ಬಹಿರಂಗಪಡಿಸುವುದು ತನಿಖೆಗೆ ಹಿನ್ನಡೆ ಆಗುತ್ತೆ. ಹೀಗಾಗಿ ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಸಹಕರಿಸಲು ಮನವಿ ಮಾಡಲಾಗಿದೆ.

ಇನ್ನು, ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ಆರೋಪಿಗಳಾದ ಅಬ್ದುಲ್​ ಮತೀನ್ ತಾಹ, ಮುಸಾವೀರ್​ ಪತ್ತೆಗೆ ಎನ್​ಐಎ ತಲೆ ಕೆಡಿಸಿಕೊಂಡಿದೆ. ಈಗಾಗಲೇ ಆರೋಪಿಗಳ ಬಗ್ಗೆ ಸುಳಿವು ನೀಡಿದರೆ 10 ಲಕ್ಷ ರೂ. ಬಹುಮಾನ ನೀಡೋದಾಗಿ ಎನ್​ಐಎ ಘೋಷಿಸಿದೆ.

ಬಿಜೆಪಿ ಮುಖಂಡನನ್ನೇ ವಶಕ್ಕೆ ಪಡೆದ ಎನ್‌ಐಎ

ಮಾರ್ಚ್‌ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟವಾಗಿತ್ತು. ಪ್ರಕರಣದ ತನಿಖೆಗೆ ಇಳಿದ ಎನ್‌ಐಎ ನೇರಾ, ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಗೆ ಎಂಟ್ರಿಯಾಗಿತ್ತು. ತೀರ್ಥಹಳ್ಳಿಯ ಮುಜಾಮಿಲ್‌ ಬಾಂಬರ್‌ ಅನ್ನೋದನ್ನ ಪತ್ತೆ ಹಚ್ಚಿದೆ. ವಿಷ್ಯ ಅಂದ್ರೆ ಈ ಕೇಸ್‌ನಲ್ಲಿ ಬಿಜೆಪಿ ಮುಖಂಡನನ್ನೇ ಎನ್‌ಐಎ ವಶಕ್ಕೆ ಪಡೆದಿದೆ. ತೀರ್ಥಹಳ್ಳಿಯ ಬಿಜೆಪಿ ‌ಮುಖಂಡ ಸಾಯಿಪ್ರಸಾದ್‌ ಎಂಬಾತನನ್ನು ಎನ್‌ಐಎ ಅಧಿಕಾರಿಗಳು ತೀರ್ಥಹಳ್ಳಿಯಿಂದ ಬೆಂಗಳೂರಿಗೆ ವಿಚಾರಣೆಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಉಗ್ರರು ಮಾಡಿದ ಖರ್ಚು 4,500 – 5 ಸಾವಿರ!

ಅಂದಹಾಗೆ, ಕಳೆದ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮನೆ ಹಾಗೂ ಮೊಬೈಲ್ ಶಾಪ್‌ಗಳ ಮೇಲೆ NIA ದಾಳಿ ನಡೆಸಿತ್ತು. ತನಿಖೆ ವೇಳೆ ಮೊಬೈಲ್ ಅಂಗಡಿ ಮಾಲೀಕನ ಜೊತೆ ಸಾಯಿ ಪ್ರಸಾದ್ ಸಂಪರ್ಕದಲ್ಲಿದ್ದ ಎಂಬ ಮಾಹಿತಿ ದೊರೆತಿದೆ. ಈ ಕಾರಣಕ್ಕೆ ಆತನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ