ರಾಮೇಶ್ವರಂ ಕೆಫ್​ ಬಾಂಬ್​ ಬ್ಲಾಸ್ಟ್​ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್

Bengaluru Rameshwaram cafe blast Case ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಬ್ಲಾಸ್ಟ್ ಪ್ರಕರಣದ ಮೊದಲ ಆರೋಪಿಯನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಯ ಬಂಧನದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಟ್ವೀಟ್ ಮಾಡಿದ್ದು, ಬಾಸ್ಟ್ ಪ್ರಕರಣದ ​ ಕೀ ಕಾಂನ್ಸಪರೇಟರ್​​​ ಆಗಿದ್ದ ಎಂದು ತಿಳಿಸಿದೆ.

ರಾಮೇಶ್ವರಂ ಕೆಫ್​ ಬಾಂಬ್​ ಬ್ಲಾಸ್ಟ್​ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್
Follow us
| Updated By: ರಮೇಶ್ ಬಿ. ಜವಳಗೇರಾ

Updated on:Mar 28, 2024 | 8:12 PM

ಬೆಂಗಳೂರು, (ಮಾರ್ಚ್ 28): ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಬ್ಲಾಸ್ಟ್ ಪ್ರಕರಣದ(Bengaluru Rameshwaram cafe blast Case)  ಮೊದಲ ಆರೋಪಿಯನ್ನು ಬಂಧಿಸಲಾಗಿದೆ. ರಾಮೇಶ್ವರಂ ಕೆಫ್​ ಬ್ಲಾಸ್ಟ್​ ಆದ ಬಾಂಬ್​ ತಯಾರಿಕೆಯ ಪ್ರಮುಖ ಆರೋಪಿ ಮುಜಾಮುಲ್​ ಶರೀಫ್ ಎನ್ನುವಾತನನ್ನು ಇಂದು (ಮಾರ್ಚ್ 28) ಎನ್​ಐಎ (NIA) ಅಧಿಕಾರಿಗಳು ಬಂಧಿಸಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮೂರು ರಾಜ್ಯಗಳ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ ನಂತರ ಪ್ರಮುಖ ಸಂಚುಕೋರನನ್ನು ಬಂಧಿಸಿದೆ. ಈ ಬಗ್ಗೆ ಎನ್​ಐಎ ಟ್ವೀಟ್ ಮಾಡಿದ್ದು, ಪ್ರಮುಖ ಆರೋಪಿಯ ಬಂಧನದ ಬಗ್ಗೆ ಖಚಿತಪಡಿಸಿದೆ.

ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್‌ಐಎ ತಂಡಗಳು ದಾಳಿ ಮಾಡಿದ ನಂತರ ಮುಜಾಮಿಲ್​ ಶರೀಫ್​ ನನ್ನು ಬಂಧಿಸಲಾಗಿದೆ ಎಂದು ಎನ್​ಐ ಟ್ವೀಟ್​ನಲ್ಲಿ ತಿಳಿಸಿದೆ. ಪ್ರಕರಣದಲ್ಲಿ ಗುರುತಿಸಲಾದ ಇತರ ಇಬ್ಬರು ಆರೋಪಿಗಳಿಗೆ ಮುಜಾಮಿಲ್​ ಶರೀಫ್​ ಕೀ ಕಾಂನ್ಸಪರೇಟರ್​​​ ಆಗಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಇನ್ನು ಬಂಧನದ ವೇಳೆ ಈತನ ಬಳಿ ಇದ್ದ ವಿವಿಧ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್​ಐಎ ಮಾಹಿತಿ ನೀಡಿದೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಇಟ್ಟ ಶಂಕಿತ ಉಗ್ರನಿಗೆ ತೀರ್ಥಹಳ್ಳಿಯ ಲಿಂಕ್ ಇದೆ! ಪಿನ್​ ಟು ಪಿನ್ ಡೀಟೇಲ್ಸ್​ ಇಲ್ಲಿದೆ

ಎನ್​ಐಎ ಅಧಿಕಾರಿಗಳು ಕರ್ನಾಟಕ ಸೇರಿದಂತೆ ವಿವಿದೆಡೆ ಬಳಿಕ ಕೀ ಕಾಂನ್ಸಪರೇಟರ್​​​ ಆಗಿದ್ದ ಆರೋಪಿ ಮುಜಾಮಿಲ್​ ಶರೀಫ್​ನನ್ನು ಬಂಧಿಸಿದ್ದಾರೆ. ಮುಜಾಮಿಲ್​ ಶರೀಫ್ ಎನ್ನುವಾತ ರಾಮೇಶ್ವರಂ ಕೆಫ್​ ಬ್ಲಾಸ್ಟ್​ ಆದ ಬಾಂಬ್​ ತಯಾರಿಕೆಯ ಪ್ರಮುಖ ಆರೋಪಿಯಾಗಿದ್ದಾನೆ. ಅಲ್ಲದೇ ಮುಸಾವೀರ್​ ಹುಸೇನ್​ಗೆ ತುಂಬಾ ಆಪ್ತನಾಗಿದ್ದ.

ಇನ್ನು ಪ್ರಮುಖವಾಗಿ ಮುಸಾವೀರ್ ಹುಸೇನ್ ಬಾಂಬ್​ ಇಟ್ಟ ಉಗ್ರ ಎಂಬುದು ತನಿಖೆ ವೇಳೆ ಪತ್ತೆಯಾಗಿದೆ. ತನಿಖೆ ವೇಳೆ ಸಂಚು ರೂಪಿಸಿರುವುದು ಸಾಬೀತು ಆದ ಹಿನ್ನೆಲೆಯಲ್ಲಿ ಮುಜಾಮಿಲ್ ಶರೀಫ್ ನನ್ನು ಬಂಧನ ಮಾಡಿದ್ದಾರೆ. ಮುಸಾವೀರ್, ಅಬ್ದುಲ್ ಮತೀನ್ ಸೇರಿ ಬ್ಲಾಸ್ಟ್​ಗೆ ಸಂಚು ರೂಪಿಸಿದ್ದರು. ಸದ್ಯ ಮುಸಾವೀರ್ ಹುಸೇನ್, ಮತೀನ್ ತಾಹಾ ತಲೆಮರೆಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:48 pm, Thu, 28 March 24

Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ