
ಬೆಂಗಳೂರು, (ಮಾರ್ಚ್ 28): ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಬ್ಲಾಸ್ಟ್ ಪ್ರಕರಣದ(Bengaluru Rameshwaram cafe blast Case) ಮೊದಲ ಆರೋಪಿಯನ್ನು ಬಂಧಿಸಲಾಗಿದೆ. ರಾಮೇಶ್ವರಂ ಕೆಫ್ ಬ್ಲಾಸ್ಟ್ ಆದ ಬಾಂಬ್ ತಯಾರಿಕೆಯ ಪ್ರಮುಖ ಆರೋಪಿ ಮುಜಾಮುಲ್ ಶರೀಫ್ ಎನ್ನುವಾತನನ್ನು ಇಂದು (ಮಾರ್ಚ್ 28) ಎನ್ಐಎ (NIA) ಅಧಿಕಾರಿಗಳು ಬಂಧಿಸಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮೂರು ರಾಜ್ಯಗಳ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ ನಂತರ ಪ್ರಮುಖ ಸಂಚುಕೋರನನ್ನು ಬಂಧಿಸಿದೆ. ಈ ಬಗ್ಗೆ ಎನ್ಐಎ ಟ್ವೀಟ್ ಮಾಡಿದ್ದು, ಪ್ರಮುಖ ಆರೋಪಿಯ ಬಂಧನದ ಬಗ್ಗೆ ಖಚಿತಪಡಿಸಿದೆ.
ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್ಐಎ ತಂಡಗಳು ದಾಳಿ ಮಾಡಿದ ನಂತರ ಮುಜಾಮಿಲ್ ಶರೀಫ್ ನನ್ನು ಬಂಧಿಸಲಾಗಿದೆ ಎಂದು ಎನ್ಐ ಟ್ವೀಟ್ನಲ್ಲಿ ತಿಳಿಸಿದೆ. ಪ್ರಕರಣದಲ್ಲಿ ಗುರುತಿಸಲಾದ ಇತರ ಇಬ್ಬರು ಆರೋಪಿಗಳಿಗೆ ಮುಜಾಮಿಲ್ ಶರೀಫ್ ಕೀ ಕಾಂನ್ಸಪರೇಟರ್ ಆಗಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಇನ್ನು ಬಂಧನದ ವೇಳೆ ಈತನ ಬಳಿ ಇದ್ದ ವಿವಿಧ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್ಐಎ ಮಾಹಿತಿ ನೀಡಿದೆ.
ಎನ್ಐಎ ಅಧಿಕಾರಿಗಳು ಕರ್ನಾಟಕ ಸೇರಿದಂತೆ ವಿವಿದೆಡೆ ಬಳಿಕ ಕೀ ಕಾಂನ್ಸಪರೇಟರ್ ಆಗಿದ್ದ ಆರೋಪಿ ಮುಜಾಮಿಲ್ ಶರೀಫ್ನನ್ನು ಬಂಧಿಸಿದ್ದಾರೆ. ಮುಜಾಮಿಲ್ ಶರೀಫ್ ಎನ್ನುವಾತ ರಾಮೇಶ್ವರಂ ಕೆಫ್ ಬ್ಲಾಸ್ಟ್ ಆದ ಬಾಂಬ್ ತಯಾರಿಕೆಯ ಪ್ರಮುಖ ಆರೋಪಿಯಾಗಿದ್ದಾನೆ. ಅಲ್ಲದೇ ಮುಸಾವೀರ್ ಹುಸೇನ್ಗೆ ತುಂಬಾ ಆಪ್ತನಾಗಿದ್ದ.
ಇನ್ನು ಪ್ರಮುಖವಾಗಿ ಮುಸಾವೀರ್ ಹುಸೇನ್ ಬಾಂಬ್ ಇಟ್ಟ ಉಗ್ರ ಎಂಬುದು ತನಿಖೆ ವೇಳೆ ಪತ್ತೆಯಾಗಿದೆ. ತನಿಖೆ ವೇಳೆ ಸಂಚು ರೂಪಿಸಿರುವುದು ಸಾಬೀತು ಆದ ಹಿನ್ನೆಲೆಯಲ್ಲಿ ಮುಜಾಮಿಲ್ ಶರೀಫ್ ನನ್ನು ಬಂಧನ ಮಾಡಿದ್ದಾರೆ. ಮುಸಾವೀರ್, ಅಬ್ದುಲ್ ಮತೀನ್ ಸೇರಿ ಬ್ಲಾಸ್ಟ್ಗೆ ಸಂಚು ರೂಪಿಸಿದ್ದರು. ಸದ್ಯ ಮುಸಾವೀರ್ ಹುಸೇನ್, ಮತೀನ್ ತಾಹಾ ತಲೆಮರೆಸಿಕೊಂಡಿದ್ದಾರೆ.
ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:48 pm, Thu, 28 March 24