ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​​​: ಬಂಧಿತ ಉಗ್ರರ ಬಳಿ ಇತ್ತು ಕರ್ನಾಟಕದ ಇಬ್ಬರ ನಕಲಿ ಆಧಾರ್ ಕಾರ್ಡ್​, ಹಿಂದೂ ಹೆಸರು ಇಟ್ಟುಕೊಂಡು ಓಡಾಟ

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬಂಧಿಸಿದ್ದಾರೆ. ಉಗ್ರರರು ಹಿಂದೂ ಹೆಸರು ಇಟ್ಟುಕೊಂಡು ಓಡಾಡುತ್ತಿದ್ದರು.

ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​​​: ಬಂಧಿತ ಉಗ್ರರ ಬಳಿ ಇತ್ತು ಕರ್ನಾಟಕದ ಇಬ್ಬರ ನಕಲಿ ಆಧಾರ್ ಕಾರ್ಡ್​, ಹಿಂದೂ ಹೆಸರು ಇಟ್ಟುಕೊಂಡು ಓಡಾಟ
ಬಂಧಿತ ಉಗ್ರರು
Follow us
| Updated By: ವಿವೇಕ ಬಿರಾದಾರ

Updated on:Apr 13, 2024 | 12:13 PM

ಕಲಬುರಗಿ, ಏಪ್ರಿಲ್​ 13: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Blast case) ಪ್ರಕರಣದ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಬಂಧಿಸಿದ್ದು, ಉಗ್ರರ ಬಳಿ ಕರ್ನಾಟಕದ ಇಬ್ಬರ ನಕಲಿ ಆಧಾರ ಕಾರ್ಡ್​ ಪತ್ತೆಯಾಗಿವೆ. ಎನ್​ಐಎ ಅಧಿಕಾರಿಗಳು ಉಗ್ರರರನ್ನು ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಬಂಧಿಸಿದ್ದು, ಆರೋಪಿಗಳ ಬಳಿ ಕಲಬುರಗಿಯ ಓರ್ವ ಯುವಕನ ನಕಲಿ ಆಧಾರ ಕಾರ್ಡ್ ಪತ್ತೆಯಾಗಿದೆ.

ಕಲಬುರಗಿಯ ವರ್ದಾನಗರ ನಿವಾಸಿಯಾಗಿರುವ ಅನಮೂಲ ಕುಲಕರ್ಣಿ ಎಂಬ ಯುವಕನ ನಕಲಿ ಆಧಾರ‌ ಕಾರ್ಡ್​ ಉಗ್ರರ ಬಳಿ ಇತ್ತು. ಟೆಕ್ಕಿ ಅನಮೂಲ ಕುಲಕರ್ಣಿ ಸದ್ಯ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಉಗ್ರರಿಗೆ ಅನಮೂಲ ಕುಲಕರ್ಣಿ ಅವರ ಆಧಾರ ಕಾರ್ಡ್ ಸಿಕ್ಕಿದ್ದಾದರು ಹೇಗೆ? ಅನಮೂಲ ಕುಲಕರ್ಣಿ ಅವರ ಆಧಾರ ಕಾರ್ಡ್​​ ಅನ್ನು ಉಗ್ರರರು ಹೇಗೆ ಪಡೆದರು? ಹೀಗೆ ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ.

ಹಿಂದೂ ಹೆಸರು ಇಟ್ಟುಕೊಂಡು ಓಡಾಟ

ಕಳೆದ 12 ದಿನಗಳಿಂದ ಕಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದ ಉಗ್ರರು, ಕೊಲ್ಕತ್ತಾದ ಮಿಧಿನಾಪುರದ ಹಲವು ಲಾಡ್ಜ್ ನಲ್ಲಿ ತಂಗಿದ್ದರು. ಪ್ರತಿ 2-3 ದಿನಗಳಿಗೊಮ್ಮೆ ವಾಸ್ತ್ಯವ್ಯ ಬದಲಿಸುತ್ತಿದ್ದರು. ಉಗ್ರರು ಸಂಜಯ್ ಅಗರಲ್ ವಾಲ್, ಉದಯ್ ದಾಸ್, ಯಶು ಪಟೇಲ್, ವಿಘೇಶ ಅಂತ ಹೆಸರು ಬದಲಾಯಿಸಿಕೊಳ್ಳುತ್ತಿದ್ದರು. ಉಗ್ರರು ಕಲ್ಕತ್ತಾದ ಹೊಟೇಲ್ ಪ್ಯಾರಡೈಸ್, ಲೇನಿನ್ ಸೇರಾನಿ ಸೇರಿ ಹಲವು ಹೊಟೇಲ್​ಗಳಲ್ಲಿ ತಂಗಿದ್ದರು.

ಬಾಂಬರ್ ಮುಸ್ಸಾವಿರ್ ಹುಸೇನ್ ಮಾಹರಾಷ್ಟದ ಪಾಲ್ಗರ್ ಜಿಲ್ಲೆಯ ಆಧಾರ್ ಕಾರ್ಡ್ ಹೊಂದಿದ್ದನು. ಮುಸಾವೀರ್ ಹುಸೇನ್​ ಕರ್ನಾಟಕದ ವಿಷ್ನೇಶ್ ಹಾಗೂ ಅನಮೂಲ ಕುಲರ್ಕಣಿ ಎಂಬುವರ ನಕಲಿ ಆಧಾರ ಕಾರ್ಡ್​ ಹೊಂದಿದ್ದನು. ಉಗ್ರರು ಹೊಟೇಲ್‌ ಸಿಬ್ಬಂದಿ ಬಳಿ ತಮ್ಮ ಹೆಸರನ್ನು ಸಂಜಯ್ ಅಗರವಾಲ್ ಹಾಗೂ ಉದಯ್ ದಾಸ್ ಎಂದು ಹೇಳಿಕೊಂಡಿದ್ದರು. ಜಾರ್ಖಂಡ್ ಹಾಗೂ ತ್ರಿಪುರ ಮೂಲದವರು ಎಂದು ಹೊಟೇಲ್​ ಪರಿಚಯಿಸಿಕೊಂಡಿದ್ದರು.

ಬಾಂಬ್​ ತಯಾರಿಕೆ ಕಲಿತಿದ್ದ ಮತೀನ್​

ಉಗ್ರ ಅಬ್ದುಲ್ ಮತೀನ್ ತಾಹ ಮೂರಕ್ಕೂ ಹೆಚ್ಚು ಪ್ರಕರಣಗಳಲ್ಲಿ ಎನ್​ಐಎ ಅಧಿಕಾರಿಗಳಿಗೆ ಬೇಕಾಗಿದ್ದನು. ಉಗ್ರ ಅಬ್ದುಲ್ ಮತೀನ್ ತಾಹ 2019 ರಿಂದ ತಲೆಮರಿಸಿಕೊಂಡಿದ್ದನು. ಈತನಿಗಾಗಿ ಕಳೆದ ನಾಲ್ಕು ವರ್ಷಗಳಿಂದ ಎನ್​ಐಎ ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ಉಗ್ರ ಅಬ್ದುಲ್ ಮತೀನ್ ತಾಹ ಸುಳಿವು ನೀಡಿದವರಿಗೆ 3 ಲಕ್ಷ ಬಹುಮಾನ ನೀಡುವುದಾಗಿ ಎನ್​ಐಎ ಘೋಷಿಸಿತ್ತು. ಮಂಗಳೂರು ಕುಕ್ಕರ ಬಾಂಬ್​ ಬ್ಲಾಸ್ಟ್ ಬಳಿಕ‌ 5 ಲಕ್ಷ,   ರಾಮೇಶ್ವರಂ ಕೆಫೆ ಬ್ಲಾಸ್ಟ್ ಬಳಿಕ ತಾಹ‌ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್​​ಐಎ ಘೋಷಣೆ ಮಾಡಿತ್ತು.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬರ್ ಕೊಲ್ಕತ್ತಾದಲ್ಲಿರುವುದು NIAಗೆ​​ ಗೊತ್ತಾಗಿದ್ದೇಗೆ? ಸೆರೆ ಹಿಡಿದಿದ್ದೇ ರೋಚಕ!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುದ್ದೆ ಬಡಾವಣೆ ನಿವಾಸಿಯಾಗಿರುವ ಉಗ್ರ ಅಬ್ದುಲ್ ಮತೀನ್ ತಾಹ, ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಓದಿದ್ದಾನೆ. ಅಬ್ದುಲ್ ಮತೀನ್​ ತಾಹ ISIS ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದಾನೆ. ಅಬ್ದುಲ್ ಮತೀನ್ ತಾಹ ಡಾರ್ಕ್ ವೆಬ್ ಮೂಲಕ ಬಾಂಬ್ ತಯಾರಿಸುವುದನ್ನು ಕಲಿತಿದ್ದನು. ಮಂಗಳೂರು ಕುಕ್ಕರ್ ಬಾಂಬ್, ರಾಮೇಶ್ವರಂ ಕೆಫೆ ಸ್ಫೋಟಗೊಳಿಸಲು ಈತನೆ ಬಾಂಬ್ ತಯಾರಿಸಲು ಪ್ಲಾನ್ ನೀಡಿದ್ದನು.

ಅಬ್ದುಲ್ ಮತೀನ್​ ತಾಹ ಮಾರ್ಗದರ್ಶನದಲ್ಲಿ ಬಾಂಬ್ ತಯಾರಿಸಿ‌, ತುಂಗಾ ತೀರದ ಟ್ರಯಲ್ ಬ್ಲಾಸ್ಟ್, ಮಂಗಳೂರು ಕುಕ್ಕರ್ ಬ್ಲಾಸ್ಟ್, ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಮಾಡಲಾಗಿದೆ. ಅಲ್ಲದೆ ಈತನು ಕ್ರಿಪ್ಟೋ ಕರೆನ್ಸಿ ಮೂಲಕ ಉಗ್ರ ಸಂಘಟನೆಗಳಿಗೆ ಹಣ ನೀಡುತ್ತಿದ್ದನು ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:28 am, Sat, 13 April 24

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ