ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಉಗ್ರರು 10 ದಿನಗಳ ಕಾಲ ಎನ್ಐಎ ವಶಕ್ಕೆ

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬಂಧಿಸಿದ್ದಾರೆ. ಇಂದು (ಏ.13) ಎನ್​ಐಎ ಅಧಿಕಾರಿಗಳು ಉಗ್ರರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.

ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಉಗ್ರರು 10 ದಿನಗಳ ಕಾಲ ಎನ್ಐಎ ವಶಕ್ಕೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Apr 13, 2024 | 12:08 PM

ಬೆಂಗಳೂರು, ಏಪ್ರಿಲ್​ 13: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Blast case) ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ನ್ಯಾಯಾಧೀಶರು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ (NIA) ವಶಕ್ಕೆ ನೀಡಿ ಆದೇಶಿಸಿದ್ದಾರೆ.

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಗೊಳಿಸಿ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದ ಉಗ್ರರನ್ನು ಎನ್​​ಐಎ ಅಧಿಕಾರಿಗಳು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ಇಬ್ಬರು ಉಗ್ರರನ್ನು ಎನ್​ಐಎ ಅಧಿಕಾರಿಗಳು ಮಂಡಿವಾಳದ ಎಫ್​ಎಸ್​ಎಲ್​ ಸೆಂಟರ್​ ಬಳಿಯಿರುವ ಇಂಟ್ರಾಗೇಷನ್​​ ಸೆಲ್​ನಲ್ಲಿ ವಿಚಾರಣೆ ನಡೆಸಿದರು. ಬಳಿಕ ಬೆಳಿಗ್ಗೆ 10:30 ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮ ಸಮುಚ್ಚಯದಲ್ಲಿರುವ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಉಗ್ರರನ್ನು ಹಾಜರುಪಡಿಸಿದರು. ನ್ಯಾಯಾಧೀಶರು 10 ದಿನಗಳ ಕಾಲ ಎನ್​ಐಎ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​​​: ಬಂಧಿತ ಉಗ್ರರ ಬಳಿ ಇತ್ತು ಕರ್ನಾಟಕದ ಇಬ್ಬರ ನಕಲಿ ಆಧಾರ್ ಕಾರ್ಡ್​, ಹಿಂದೂ ಹೆಸರು ಇಟ್ಟುಕೊಂಡು ಓಡಾಟ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುದ್ದೆ ಬಡಾವಣೆ ನಿವಾಸಿಯಾಗಿರುವ ಉಗ್ರ ಅಬ್ದುಲ್ ಮತೀನ್ ತಾಹ, ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಓದಿದ್ದಾನೆ. ಅಬ್ದುಲ್ ಮತೀನ್​ ತಾಹ ISIS ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದಾನೆ. ಅಬ್ದುಲ್ ಮತೀನ್ ತಾಹ ಡಾರ್ಕ್ ವೆಬ್ ಮೂಲಕ ಬಾಂಬ್ ತಯಾರಿಸುವುದನ್ನು ಕಲಿತಿದ್ದನು. ಮಂಗಳೂರು ಕುಕ್ಕರ್ ಬಾಂಬ್, ರಾಮೇಶ್ವರಂ ಕೆಫೆ ಸ್ಫೋಟಗೊಳಿಸಲು ಈತನೆ ಬಾಂಬ್ ತಯಾರಿಸಲು ಪ್ಲಾನ್ ನೀಡಿದ್ದನು.

ಅಬ್ದುಲ್ ಮತೀನ್​ ತಾಹ ಮಾರ್ಗದರ್ಶನದಲ್ಲಿ ಬಾಂಬ್ ತಯಾರಿಸಿ‌, ತುಂಗಾ ತೀರದ ಟ್ರಯಲ್ ಬ್ಲಾಸ್ಟ್, ಮಂಗಳೂರು ಕುಕ್ಕರ್ ಬ್ಲಾಸ್ಟ್, ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಮಾಡಲಾಗಿದೆ. ಅಲ್ಲದೆ ಈತನು ಕ್ರಿಪ್ಟೋ ಕರೆನ್ಸಿ ಮೂಲಕ ಉಗ್ರ ಸಂಘಟನೆಗಳಿಗೆ ಹಣ ನೀಡುತ್ತಿದ್ದನು ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:07 pm, Sat, 13 April 24

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ