ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಕರ್ನಾಟಕದ ಎಲ್ಲ ಬಸ್ಸು, ರೈಲು ನಿಲ್ದಾಣಗಳಲ್ಲಿ ಕಟ್ಟೆಚ್ಚರ

| Updated By: Ganapathi Sharma

Updated on: Mar 02, 2024 | 2:42 PM

Karnataka Railway Station: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಸಂಭವಿಸಿದ ನಂತರ ರಾಜ್ಯದಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸುತ್ತಿದ್ದಾರೆ. ಬೆಂಗಳೂರಿನ ಮೆಜೆಸ್ಟಿಕ್ ಬಸ್ಸು ನಿಲ್ದಾಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ಸೇರಿದಂತೆ ರಾಜ್ಯದ ಎಲ್ಲಾ ಬಸ್ಸು ಹಾಗೂ ರೈಲು ನಿಲ್ದಾಣಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಜನಸಂಚಾರ ಎಂದಿನಂತೆ ಮಾಮೂಲಿಯಾಗಿದೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಕರ್ನಾಟಕದ ಎಲ್ಲ ಬಸ್ಸು, ರೈಲು ನಿಲ್ದಾಣಗಳಲ್ಲಿ ಕಟ್ಟೆಚ್ಚರ
ಬೆಂಗಳೂರಿನ ಬಸ್​ ನಿಲ್ದಾಣಗಳಲ್ಲಿ ಕಟ್ಟೆಚ್ಚರ
Follow us on

ಬೆಂಗಳೂರು, ಮಾರ್ಚ್​ 2: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ (Bengaluru Rameshwaram Cafe Bomb Blast) ಪ್ರಕರಣದ ಬೆನ್ನಲ್ಲೇ ಅಲರ್ಟ್ ಆಗಿರುವ ಪೊಲೀಸರು (Karnataka Police) ರಾಜ್ಯ ವಿವಿಧ ಕಡೆಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಬೆಂಗಳೂರು ನಗರದ ಬಸ್ಸು ಮತ್ತು ರೈಲು ನಿಲ್ದಾಣಗಳಲ್ಲಿ (Bengaluru Railway Station) ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಅಷ್ಟೇ ಅಲ್ಲದೆ, ರಾಜ್ಯದ ಎಲ್ಲಾ ಬಸ್ಸು ಮತ್ತು ರೈಲು ನಿಲ್ದಾಣಗಳಲ್ಲೂ ನಿಗಾ ಇಡಲು ಸೂಚನೆ ನೀಡಲಾಗಿದೆ. ರೈಲು ನಿಲ್ದಾಣಗಳಲ್ಲಿ ಭದ್ರತೆಗೆ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ರೈಲು ನಿಲ್ದಾಣಗಳಲ್ಲಿ ಅನುಮಾನಾಸ್ಪದ ವಸ್ತುಗಳು ಕಂಡುಬಂದರೆ ಅಗತ್ಯ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಈ ಮಧ್ಯೆ, ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಎಂದಿನಂತೆ ಪ್ರಯಾಣಿಕರ ಸಂಚಾರ ಮುಂದುವರಿದಿದೆ.

ಕೆಎಸ್​​ಆರ್​​​ಟಿಸಿ ನಿಲ್ದಾಣದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಪ್ರಯಾಣಿಕರ ಬ್ಯಾಗುಗಳನ್ನು ಹೋಮ್ ಗಾರ್ಡ್ಸ್ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಯಾಣಿಕರ ಮೇಲೆ ಕೆಎಸ್​​ಆರ್​​ಟಿಸಿ ಅಧಿಕಾರಿಗಳು ಕೂಡ ನಿಗಾ ಇಟ್ಟಿದ್ದಾರೆ. ಅನುಮಾನಸ್ಪದ ವ್ಯಕ್ತಿಗಳು ಕಂಡುಬಂದರೆ ಅಂಥವರ ಮೇಲೆ ನಿಗಾ ಇಡುತ್ತಿದ್ದಾರೆ.

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಭದ್ರತೆ ಹೆಚ್ಚಿಸಲಾಗಿದೆ. ಟರ್ಮಿನಲ್ ಆವರಣಗಳಲ್ಲಿ ಕ್ಯಾಬ್ ಮತ್ತು ಪ್ರಯಾಣಿಕರನ್ನು ಕರೆದೊಯ್ಯುವ ಇತರ ವಾಹನಗಳ ಕಾಯುವಿಕೆ ಅವಧಿಯನ್ನು ಕಡಿಮೆ ಮಾಡಲಾಗಿದೆ. ವಿಮಾನ ನಿಲ್ದಾಣ ಮಾತ್ರವಲ್ಲದೆ, ಪ್ರಮುಖ ಪ್ರದೇಶಗಳಲ್ಲಿಯೂ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಬೆಂಗಳೂರಿನಲ್ಲಿ ನಡೆದಿತ್ತಾ ಟ್ರಯಲ್ ಬ್ಲಾಸ್ಟ್?

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸ್ಫೋಟಕ್ಕೂ ಮುನ್ನ ಟ್ರಯಲ್ ಬ್ಲಾಸ್ಟ್​ ನಡೆಸಿರುವ ಶಂಕೆ ಇದೀಗ ಪೊಲೀಸರಿಗೆ ವ್ಯಕ್ತವಾಗಿದೆ. ಶಂಕಿತ ಬಾಂಬರ್ ಹಾಗೂ ಆತನ ತಂಡ ಟ್ರಯಲ್ ಬ್ಲಾಸ್ಟ್​ ನಡೆಸಿರುವ ಸಾಧ್ಯತೆ ಇದೆ. ನಿರ್ಜನ ಪ್ರದೇಶ, ಕಾಡಿನಲ್ಲಿ ಟ್ರಯಲ್ ಬ್ಲಾಸ್ಟ್ ಮಾಡಿದ ಅನುಮಾನ ವ್ಯಕ್ತವಾಗಿದೆ. ಅತ್ಯಾಧುನಿಕ ಟೈಮರ್, ತಂತಿ, ಡಿಟೊನೇಟರ್ ಬಳಸಿ ಸ್ಫೋಟ ಮಾಡಿರಬಹುದು ಎನ್ನಲಾಗಿದೆ.

ಫಿಕ್ಸ್ ಮಾಡಿದ ಟೈಂನಲ್ಲೇ ಬಾಂಬ್ ಸ್ಫೋಟ ಆಗುತ್ತದೆಯೇ? ಅದರಿಂದ ಎಷ್ಟೆಲ್ಲ ಪರಿಣಾಮ ಆಗಬಹುದು ಎಂದೆಲ್ಲ ಪರಿಶೀಲನೆ ನಡೆಸಿರುವ ಸಾಧ್ಯತೆ ಇದೆ. ಆರೋಪಿ ಸಿಕ್ಕ ಬಳಿಕ ಟ್ರಯಲ್ ಬ್ಲಾಸ್ಟ್​ ಜಾಗ ಕೂಡ ಗೊತ್ತಾಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಸಿಸಿಬಿಗೆ ವರ್ಗಾವಣೆ

ಈ ಮಧ್ಯೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಗೃಹ ಸಚಿವ ಪರಮೇಶ್ವರ್, ಪೋಲಿಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಪೋಲಿಸ್ ಆಯುಕ್ತ ದಯಾನಂದ್, ಗುಪ್ತಚರ ಇಲಾಖೆ ಹಿರಿಯ ಪೋಲಿಸ್ ಅಧಿಕಾರಿಗಳೊಂದಿಗೆ ಸಿಎಂ ಸಮಾಲೋಚನೆ ನಡೆಸಿದ್ದಾರೆ. ನಂತರ ಸ್ಫೋಟ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:37 pm, Sat, 2 March 24