AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Stampede: ರಾಜ್ಯ ಸರ್ಕಾರದ ಅಮಾನತು ಪ್ರಶ್ನಿಸಿ ಸಿಎಟಿಗೆ ಐಪಿಎಸ್​ ಅಧಿಕಾರಿ ಅರ್ಜಿ

Bengaluru RCB Victory Celebrations Stampede: ಆರ್​ಸಿಬಿ ಗೆಲುವನ್ನು ಸಂಭ್ರಮಿಸಲು ಬುಧವಾರ (ಜೂ.03) ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವಿಜಯೋತ್ಸವ ಕಾರ್ಯಕ್ರಮ ವೀಕ್ಷಿಸಲು ಕ್ರೀಡಾಂಗಣಕ್ಕೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದರು. ಈ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಅವರನ್ನು ಅಮಾನತು ಮಾಡಿತ್ತು. ಈ ಅಮಾನತು ಪ್ರಶ್ನಿಸಿ ಐಪಿಎಸ್​ ಅಧಿಕಾರಿ ವಿಕಾಸ್​ ಕುಮಾರ್ ಅವರು ಸಿಎಟಿಗೆ ಅರ್ಜಿ ಸಲ್ಲಿಸಿದ್ದಾರೆ.

Bengaluru Stampede: ರಾಜ್ಯ ಸರ್ಕಾರದ ಅಮಾನತು ಪ್ರಶ್ನಿಸಿ ಸಿಎಟಿಗೆ ಐಪಿಎಸ್​ ಅಧಿಕಾರಿ ಅರ್ಜಿ
ಐಪಿಎಸ್​ ಅಧಿಕಾರಿ ವಿಕಾಸ್ ಕುಮಾರ್ ಅರ್ಜಿ
ರಾಚಪ್ಪಾಜಿ ನಾಯ್ಕ್
| Updated By: ವಿವೇಕ ಬಿರಾದಾರ|

Updated on: Jun 09, 2025 | 5:28 PM

Share

ಬೆಂಗಳೂರು, ಜೂನ್​ 09: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ (Chinnaswamy stadium Stampede) ಆರ್​ಸಿಬಿಯ 11 ಅಭಿಮಾನಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕರ್ತವ್ಯ ಲೋಪದ ಕಾರಣ ನೀಡಿ ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ (Vikas Kumar) ಸೇರಿದಂತೆ ಐವರು ಅಧಿಕಾರಿಗಳನ್ನು ಅಮಾನತು ಮಾಡಿತ್ತು. ಸರ್ಕಾರದ ಅಮಾನತು ಆದೇಶವನ್ನು ಪ್ರಶ್ನಿಸಿ ಐಪಿಎಸ್​ ಅಧಿಕಾರಿ ವಿಕಾಸ್ ಕುಮಾರ್ ಅವರು ಸಿಎಟಿ ಮೊರೆ ಹೋಗಿದ್ದಾರೆ. ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (CAT)ಗೆ ಅರ್ಜಿ ಸಲ್ಲಿಸಿದ್ದಾರೆ.

ಐವರು ಅಧಿಕಾರಿಗಳ ಅಮಾನತು

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಜೂನ್ 05) ರಾತ್ರಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ. ದಯಾನಂದ್‌​ , ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿಯಾಗಿದ್ದ ಹೆಚ್‌.ಟಿ.ಶೇಖರ್, ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿಯಾಗಿದ್ದ ಹೆಚ್‌.ಟಿ.ಶೇಖರ್, ಎಸಿಪಿ ಬಾಲಕೃಷ್ಣ, ಕಬ್ಬನ್‌ಪಾರ್ಕ್‌ ಇನ್ಸ್‌ಪೆಕ್ಟರ್‌ ಗಿರೀಶ್‌.ಎ.ಕೆ ಅವರನ್ನು ಅಮಾನತು ಮಾಡಲಾಗಿತ್ತು.

ಸಿಎಂ, ಡಿಸಿಎಂ ವಿರುದ್ಧ ದೂರು

ಅತೀ ಹಿಂದುಳಿದ ಮಠಾಧೀಶರ ಸಭಾ ಬೆಂಗಳೂರಿನ ಕಬ್ಬನ್​ಪಾರ್ಕ್​​ ಠಾಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​, ಗೃಹ ಸಚಿವ ಪರಮೇಶ್ವರ್ ಮತ್ತು ಆರ್​​ಸಿಬಿ ಆಡಳಿತ ಮಂಡಳಿ ವಿರುದ್ಧ ದೂರು ನೀಡಿದೆ. ಇವರ ನಿರ್ಲಕ್ಷ್ಯದಿಂದಲೇ ಆರ್​ಸಿಬಿಯ 11 ಅಭಿಮಾನಿಗಳ ಸಾವಾಗಿದೆ. ಹೀಗಾಗಿ ನಾಲ್ವರ ವಿರುದ್ಧ ಕ್ರಮ ಜರುಗಿಸುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ
Image
Stampede: ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಮೊತ್ತ ಹೆಚ್ಚಳ
Image
Stampede: ಕಾಲ್ತುಳಿತದಲ್ಲಿ ಗಾಯಗೊಂಡವರು 65 ಮಂದಿ ಆರ್​ಸಿಬಿ ಅಭಿಮಾನಿಗಳು
Image
ತನಿಖೆಗಿಳಿದ ಸಿಐಡಿ: ಸ್ಟೇಡಿಯಂಗೆ ಭೇಟಿ, ಇಂಚಿಂಚೂ ಮಾಹಿತಿ ಸಂಗ್ರಹ
Image
ಬೆಂಗಳೂರು ಕಾಲ್ತುಳಿತ ದುರಂತದ ವರದಿ ನೀಡುವಂತೆ ಕುನ್ಹಾ ಆಯೋಗಕ್ಕೆ ಸೂಚನೆ

ಇದನ್ನೂ ಓದಿ: RCB, KSCA ವಿರುದ್ಧ ಇಡಿಗೆ ದೂರು, ಇತ್ತ ಸಿಎಂ-ಡಿಸಿಎಂ ಮೇಲೆ ಕ್ರಮಕ್ಕೆ ಸ್ವಾಮೀಜಿಗಳು ಮನವಿ

ಪ್ರಕರಣ ರದ್ದು ಕೋರಿ ಹೈಕೋರ್ಟ್​​ಗೆ ರಿಟ್ ಅರ್ಜಿ

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಕೇಸ್​ ಅನ್ನು ರದ್ದುಪಡಿಸುವಂತೆ ಆರ್‌ಸಿಬಿ ಸಿಒಒ ರಾಜೇಶ್ ಮೆನನ್, ನಿಖಿಲ್ ಸೋಸಲೆ, ಡಿಎನ್‌ಎ ಇವೆಂಟ್‌ ಮ್ಯಾನೇಜೆಂಟ್‌ನ ಸುನೀಲ್‌ ಮ್ಯಾಥ್ಯೂ, ಕಿರಣ್‌ ಕುಮಾರ್, ಶಮಂತ್ ಮಾವಿನಕೆರೆ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರು ಅರ್ಜಿಗಳಲ್ಲಿ ಸರ್ಕಾರವನ್ನೇ ಹೊಣೆಗಾರರನ್ನಾಗಿ ಮಾಡಿದ್ದಾರೆ. ಕಾರ್ಯಕ್ರಮ ಆಯೋಜನೆಯಲ್ಲಿ ಸರ್ಕಾರದ ಪಾತ್ರ ಇದೆ. ಸಿಎಂ ಟ್ವೀಟ್, ಡಿಸಿಎಂ ಹೇಳಿಕೆಗಳನ್ನೇ ಆಧಾರವನ್ನಾಗಿಸಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್