ಕಾಲ್ತುಳಿತ ಬೆನ್ನಲ್ಲೇ ಪೊಲೀಸ್​ ಇಲಾಖೆಯಲ್ಲಿ ಮೇಜರ್​ ಸರ್ಜರಿ, ಗುಪ್ತಚರ ಇಲಾಖೆಗೆ ಹೊಸ ಮುಖ

Bengaluru RCB Victory Celebrations Stampede: ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಬೆನ್ನಲ್ಲೇ ರಾಜ್ಯ ಸರ್ಕಾರ ಪೊಲೀಸ್​ ಇಲಾಖೆಯಲ್ಲಿ ಮೇಜರ್​ ಸರ್ಜರಿ ಮಾಡಿದೆ. ಐಪಿಎಸ್​ ಶ್ರೇಣಿಯ ಕೆಲ ಅಧಿಕಾರಿಗಳನ್ನು ವರ್ಗಾಣೆಗೊಳಿಸಿದ್ದರೇ, ಕೆಲ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆ ನೀಡಲಾಗಿದೆ. ಇನ್ನು ವರ್ಗಾವಣೆಯಿಂದ ಖಾಲಿಯಾಗಿದ್ದ ಗುಪ್ತಚರ ಇಲಾಖೆಯ ಎಡಿಜಿಪಿ ಹುದ್ದೆಗೂ ನೇಮಕ ಮಾಡಲಾಗಿದೆ.

ಕಾಲ್ತುಳಿತ ಬೆನ್ನಲ್ಲೇ ಪೊಲೀಸ್​ ಇಲಾಖೆಯಲ್ಲಿ ಮೇಜರ್​ ಸರ್ಜರಿ, ಗುಪ್ತಚರ ಇಲಾಖೆಗೆ ಹೊಸ ಮುಖ
ಐಪಿಎಸ್​
Updated By: ವಿವೇಕ ಬಿರಾದಾರ

Updated on: Jun 06, 2025 | 9:25 PM

ಬೆಂಗಳೂರು, ಜೂನ್​ 06: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ (Chinnaswamy stampede) ಬೆನ್ನಲ್ಲೇ ಪೊಲೀಸ್​ ಇಲಾಖೆಯಲ್ಲಿ (Police Department) ಮೇಜರ್​ ಸರ್ಜರಿಯಾಗಿದೆ. ಐಪಿಎಸ್​ ಶ್ರೇಣಿಯ ಕೆಲ ಅಧಿಕಾರಿಗಳ ವರ್ಗಾವಣೆಯಾಗಿದ್ದರೇ, ಕೆಲವರಿಗೆ ಹೆಚ್ಚುವರಿ ಹೊಣೆ ನೀಡಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್​ ನಿಂಬಾಳ್ಕರ್ ಅವರನ್ನು ವಾರ್ತಾ ಮತ್ತು ಪ್ರಸಾರ ಇಲಾಖೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಖಾಲಿಯಾದ ಗುಪ್ತಚರ ಇಲಾಖೆಯ ಎಡಿಜಿಪಿ ಹುದ್ದೆಗೆ ಎಸ್​​.ರವಿ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆಗಿರುವ ಆರ್​​.ಹಿತೇಂದ್ರ ಅವರಿಗೆ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಎಡಿಜಿಪಿಯಾಗಿ ನೇಮಕ ಮಾಡುವ ಮೂಲಕ ಹೆಚ್ಚುವರಿ ಹೊಣೆ ನೀಡಲಾಗಿದೆ.

ಲಾಜಿಸ್ಟಿಕ್ಸ್ ಮತ್ತು ಮಾಡರ್ನೈಜೇಶನ್​​ ಎಡಿಜಿಪಿ ಆಗಿರುವ ಮುರುಗನ್ ಅವರಿಗೆ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ಹೆಚ್ಚುವರಿ ಹುದ್ದೆ ನೀಡಲಾಗಿದೆ. ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಕೆ.ವಿ.ಶರತ್ ಚಂದ್ರ ಅವರನ್ನು ಪೊಲೀಸ್ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ವರ್ಗಾವಣೆ ಮಾಡಲಾಗಿದೆ. ಜೊತೆಗೆ, ಇವರಿಗೆ ಪೊಲೀಸ್ ಗೃಹ ನಿರ್ಮಾಣ ಮತ್ತು ಅಭಿವೃದ್ಧಿ ನಿಗಮದ ಎಡಿಜಿಪಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ.

ಇದನ್ನೂ ಓದಿ
Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ವಿರುದ್ಧ ಬಿಜೆಪಿ ದೂರು
ಚಿನ್ನಸ್ವಾಮಿ ದುರಂತ; ವಿರಾಟ್ ಕೊಹ್ಲಿ ವಿರುದ್ದ ದೂರು ದಾಖಲು
RCB ಮಾರ್ಕೆಟಿಂಗ್​ ಮುಖಸ್ಥ​​​​​​​ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
Bengaluru Stampede: ಸುಮೋಟೋ ಕೇಸ್​ ​ದಾಖಲಿಸಿಕೊಂಡ ಮಾನವ ಹಕ್ಕುಗಳ ಆಯೋಗ

ಗುಪ್ತಚರ ಇಲಾಖೆ ಎಡಿಜಿಪಿಯಾಗಿದ್ದ ಹೇಮಂತ್​ ನಿಂಬಾಳ್ಕರ್ ಅವರನ್ನು ವಾರ್ತಾ ಮತ್ತು ಪ್ರಸಾರ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಗುಪ್ತಚರ ಇಲಾಖೆ ಎಡಿಜಿಪಿ ಆಗಿ ಎಸ್​​.ರವಿ ಅವರನ್ನು ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ; ಮೃತರ ಆತ್ಮಕ್ಕೆ ನ್ಯಾಯ ನೀಡುವುದು ಹೇಗೆ?

ಕಾಲ್ತುಳಿತ ಬೆನ್ನಲ್ಲೇ ಸರ್ಕಾರ ಕಬ್ಬನ್ ಪಾರ್ಕ್​ ಕಬ್ಬನ್ ಪಾರ್ಕ್ ಉಪವಿಭಾಗ ಎಸಿಪಿ ಮತ್ತು ಕಬ್ಬನ್ ಪಾರ್ಕ್ ಠಾಣೆ ಇನ್ಸ್​ಪೆಕ್ಟರ್ ಅವರನ್ನು ಅಮಾನತು ಮಾಡಲಾಗಿತ್ತು. ಖಾಲಿಯಾಗಿದ್ದ ಈ ಹುದ್ದೆಗಳಿಗೆ ಬೆಂಗಳೂರು ನಗರದ ನೂತನ ಪೊಲೀಸ್​ ಆಯುಕ್ತ ಸೀಮಂತ್ ಕುಮಾರ್ ಅವರು ಇಬ್ಬರು ಅಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ಕಬ್ಬನ್ ಪಾರ್ಕ್ ಉಪವಿಭಾಗ ಎಸಿಪಿ ಆಗಿ ರಾಮಚಂದ್ರ ಮತ್ತು ಕಬ್ಬನ್ ಪಾರ್ಕ್ ಠಾಣೆ ಇನ್ಸ್​ಪೆಕ್ಟರ್ ಆಗಿ ದೇವೇಂದ್ರಪ್ಪ ಅವರನ್ನು ಒಒಡಿ ಮೂಲಕ ನೇಮಕ ಮಾಡಿ ಕಮಿಷನರ್ ಆದೇಶ ಹೊರಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:22 pm, Fri, 6 June 25