ಬೆಂಗಳೂರಿನಲ್ಲಿ 1 ಲಕ್ಷಕ್ಕೂ ಹೆಚ್ಚು ಸಕ್ರಿಯ ಸೋಂಕಿತರು; ತುಮಕೂರಿಗೆ ಎರಡನೇ ಸ್ಥಾನ

|

Updated on: Apr 24, 2021 | 9:53 AM

ಬೆಂಗಳೂರಿನಲ್ಲಿ ಸುಮಾರು 1 ಲಕ್ಷದ 49 ಸಾವಿರ ಸಕ್ರಿಯ ಸೋಂಕಿತರಿರುವ ಕಾರಣ ಇನ್ನೂ ಹೆಚ್ಚಿನವರಿಗೆ ಸೋಂಕು ಹಬ್ಬುವ ಸಾಧ್ಯತೆ ಇದೆ. ಜನರು ಎಚ್ಚೆತ್ತುಕೊಳ್ಳದಿದ್ದರೆ ಪರಿಸ್ಥಿತಿ ತೀರಾ ವಿಕೋಪಕ್ಕೆ ಹೋಗಲಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಇಂದು 17,597 ಸೋಂಕಿತರು ಪತ್ತೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ 1 ಲಕ್ಷಕ್ಕೂ ಹೆಚ್ಚು ಸಕ್ರಿಯ ಸೋಂಕಿತರು; ತುಮಕೂರಿಗೆ ಎರಡನೇ ಸ್ಥಾನ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಕಳೆದ 23 ದಿನಗಳ ಅವಧಿಯಲ್ಲಿ ಬೆಂಗಳೂರಿನಲ್ಲಿ 1,77,848 ಸೋಂಕಿತರು ಪತ್ತೆಯಾಗಿದ್ದಾರೆ. ಈ ಪೈಕಿ ಕೇವಲ 49,069 ಜನ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 23 ದಿನದಲ್ಲಿ 944 ಜ‌ನ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಅಂಕಿ ಅಂಶಗಳು ತಿಳಿಸಿವೆ.

ಬೆಂಗಳೂರಿನಲ್ಲಿ ಸುಮಾರು 1 ಲಕ್ಷದ 49 ಸಾವಿರ ಸಕ್ರಿಯ ಸೋಂಕಿತರಿರುವ ಕಾರಣ ಇನ್ನೂ ಹೆಚ್ಚಿನವರಿಗೆ ಸೋಂಕು ಹಬ್ಬುವ ಸಾಧ್ಯತೆ ಇದೆ. ಜನರು ಎಚ್ಚೆತ್ತುಕೊಳ್ಳದಿದ್ದರೆ ಪರಿಸ್ಥಿತಿ ತೀರಾ ವಿಕೋಪಕ್ಕೆ ಹೋಗಲಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. ಇಂದು 17,597 ಸೋಂಕಿತರು ಪತ್ತೆಯಾಗುವ ಸಾಧ್ಯತೆಯಿದ್ದು, ಸಾವಿನ ಸಂಖ್ಯೆಯಲ್ಲೂ ಏರಿಕೆಯಾಗಬಹುದು ಎಂದು ಅಂದಾಜಿಸಲಾಗಿದೆ. ನಿನ್ನೆ 124 ಜನ ಸೋಂಕಿತರು ಮೃತಪಟ್ಟಿದ್ದು, ಇಂದು ಸಾವಿನ ಸಂಖ್ಯೆ 100ರ ಗಡಿ ದಾಟುವ ಸಾಧ್ಯತೆ ಇದೆ.

ತುಮಕೂರು ಜಿಲ್ಲಾಸ್ಪತ್ರೆ ತುಂಬಾ ಕೊರೊನಾ ಸೊಂಕಿತರು
ತುಮಕೂರು: ಬೆಂಗಳೂರಿನ ನಂತರ ತುಮಕೂರಿನಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದು, ನಿನ್ನೆ 1004 ಕೊವಿಡ್ ಪ್ರಕರಣಗಳು ದಾಖಲಾಗಿವೆ. ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯೇ ಹೆಚ್ಚಾಗಿದ್ದು, ಇತರೆ ಕಾಯಿಲೆಗೆ ಚಿಕಿತ್ಸೆ ಪಡೆಯಲು ಬಂದವರಿಗೂ ಸೋಂಕು ತಗುಲುವ ಸಾಧ್ಯತೆ ಇದೆ. ಹೀಗಾಗಿ ಬೇರೆ ಸಮಸ್ಯೆಗಳಿಂದ ಆಸ್ಪತ್ರೆಗೆ ಬಂದವರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಗಳಲ್ಲಿ ಆಕ್ಸಿಜನ್, ವೆಂಟಿಲೇಟರ್, ಐಸಿಯು ಕೊರತೆ ಉಂಟಾಗಿರುವ ಕಾರಣ ಸಾವಿನ ಪ್ರಮಾಣದಲ್ಲೂ ಏರಿಕೆ ಆಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ.

(Bengaluru registers more than 1 lakh active corona cases and Tumkur is in 2nd place)

ಇದನ್ನೂ ಓದಿ:
ಕೊರೊನಾ ಕಠಿಣ‌ ನಿಯಮದ ಎಫೆಕ್ಟ್; ಊಟವನ್ನು ಹೊಳೆಗೆ ಸುರಿದ ವ್ಯಾಪಾರಿಗಳು 

ಮೃತ ಸೋಂಕಿತರ ಆಭರಣ, ಬೆಲೆಬಾಳುವ ವಸ್ತು, ಮೊಬೈಲ್​ ಮಾಯ; ಆಸ್ಪತ್ರೆಯಲ್ಲಿ ಕಳ್ಳತನ ನಡೆಯುತ್ತಿದೆ ಎಂಬ ಆರೋಪ

Published On - 8:52 am, Sat, 24 April 21