ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಬಲ್ ಸೆಕ್ಯೂರಿಟಿ ಸಿಸ್ಟಮ್, ಕರ್ನಾಟಕದಲ್ಲಿ ಎಷ್ಟು ಮತದಾರರು? ಇಲ್ಲಿದೆ ವಿವರ

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಗೇರಿದ್ದು, ಇದೇ ಏಪ್ರಿಲ್ 26ರಂದು 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆದರೆ, ಇನ್ನುಳಿದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಹಾಗಾದ್ರೆ, ಈ ಬಾರಿ ಕರ್ನಾಟಕದಲ್ಲಿ ಎಷ್ಟು ಮತದಾರರು ಇದ್ದಾರೆ? ಯಾವ ಲೋಕಸಭಾ ಕ್ಷೇತ್ರದಲ್ಲಿ ಎಷ್ಟು ಮತದಾರರು ಇದ್ದಾರೆ? ಇದಲ್ಲದೆ, ಮತದಾರರು ಯಾವ ದಾಖಲೆಗಳನ್ನು ತರಬೇಕು? ಮತದಾನ ಪ್ರಕ್ರಿಯೆಯಲ್ಲಿನ ನಿಯಮಗಳು ಏನು? ಕೊನೆಯ 48 ಗಂಟೆಯ ಶೂನ್ಯ ಅವಧಿಗೆ ಸಂಬಂಧಪಟ್ಟಂತೆ ಇರುವ ನಿಯಮಗಳೇನು? ಎಂಬಿತ್ಯಾದಿ ಅಂಶಗಳನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು, ಅದು ಈ ಕೆಳಗಿನಂತಿದೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಬಲ್ ಸೆಕ್ಯೂರಿಟಿ ಸಿಸ್ಟಮ್, ಕರ್ನಾಟಕದಲ್ಲಿ ಎಷ್ಟು ಮತದಾರರು? ಇಲ್ಲಿದೆ ವಿವರ
ಮನೋಜ್ ಕುಮಾರ್ ಮೀನಾ, ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Apr 24, 2024 | 3:29 PM

ಬೆಂಗಳೂರು, (ಏಪ್ರಿಲ್ 24): ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇದೇ ಏಪ್ರಿಲ್‌ 26ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಇನ್ನು ಅತಿ ಸೂಕ್ಷ್ಮ ಲೋಕಸಭಾ ಕ್ಷೇತ್ರವೆಂದು ಪರಿಗಣಿಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ (Bangalore Rural Lok Sabha constituency) ಡಬಲ್ ಸೆಕ್ಯೂರಿಟಿ ಸಿಸ್ಟಮ್ ಅನ್ನು ಅಳವಡಿಕೆ ಮಾಡಲಾಗಿದೆ. ಇಲ್ಲಿಗೆ ಒಟ್ಟು 7 ಪ್ಯಾರಾ ಮಿಲಿಟರಿ ತುಕಡಿಯನ್ನು (Para military contingent) ನಿಯೋಜನೆ ಮಾಡಲಾಗಿದೆ. ಅಲ್ಲದೆ, 28 ಲೋಕಸಭಾ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ, ಮತದಾನ ಪ್ರಕ್ರಿಯೆಯ ನಿಯಮಗಳನ್ನು ಸಹ ಚುನಾವಣಾ ಆಯೋಗವು ಪ್ರಕಟಿಸಿದೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ವೆಬ್ ಕಾಸ್ಟಿಂಗ್

ಈ ಬಗ್ಗೆ ಇಂದು (ಏಪ್ರಿಲ್ 24) ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಎಲ್ಲ ಮತಗಟ್ಟೆಯಲ್ಲಿ ಶೇಕಡಾ 100 ವೆಬ್ ಕಾಸ್ಟಿಂಗ್ ಮಾಡಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಅಕ್ರಮಗಳು ನಡೆಯಬಹುದು. ಈ ಕ್ಷೇತ್ರದಲ್ಲಿ ಪ್ರಭಾವಿ ಎದುರಾಳಿಗಳು ಆಡಳಿತಯಂತ್ರವನ್ನು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಹೆಚ್ಚಿನ ಭದ್ರತೆ ಹಾಗೂ ಅರೆ ಸೇನಾ ಪಡೆಯನ್ನು ನಿಯೋಜನೆ ಮಾಡುವಂತೆ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್.‌ ಮಂಜುನಾಥ್ ಅವರು ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ರಾಜ್ಯ ಚುನಾವಣಾ ಆಯೋಗವು ಈ ಮನವಿಯನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ರವಾನೆ ಮಾಡಿತ್ತು. ಅಲ್ಲಿಂದ ಜಿಲ್ಲಾಧಿಕಾರಿಗೆ ಸೂಚನೆಯನ್ನು ನೀಡಲಾಗಿತ್ತು. ಅದರನ್ವಯ ಈಗ ಕ್ರಮ ವಹಿಸಲಾಗಿದೆ. ಚುನಾವಣಾಧಿಕಾರಿಗಳ ಕೋರಿಕೆಯಂತೆ ಹೆಚ್ಚು ಭದ್ರತೆ ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Lok Sabha Elections: ಕರ್ನಾಟಕದಲ್ಲಿ 38 ದಿನಗಳಲ್ಲಿ 406.73 ಕೋಟಿ ರೂ. ಮೌಲ್ಯದ ನಗದು, ಮದ್ಯ ಜಪ್ತಿ

ಒಟ್ಟು 5.47 ಕೋಟಿ ಮತದಾರರು

ಕರ್ನಾಟಕದ 28 ಲೋಕಸಭಾ ಕ್ಷೇತ್ರದಲ್ಲಿ ಒಟ್ಟಾರೆ ಮತದಾರರ ಸಂಖ್ಯೆಯನ್ನು ಸಹ ಚುನಾವಣಾ ಆಯೋಗವು ಬಿಡುಗಡೆ ಮಾಡಿದೆ. ಇದರ ಅನುಸಾರ ಒಟ್ಟು 5,47,36,835 ಮತದಾರರು ಈ ಬಾರಿ ಸಂಸತ್‌ ಚುನಾವಣೆಯ ಭವಿಷ್ಯವನ್ನು ಬರೆಯಲಿದ್ದಾರೆ. ಇದಲ್ಲದೆ, ಮತದಾರರು ಯಾವ ದಾಖಲೆಗಳನ್ನು ತರಬೇಕು? ಮತದಾನ ಪ್ರಕ್ರಿಯೆಯಲ್ಲಿನ ನಿಯಮಗಳು ಏನು? ಕೊನೆಯ 48 ಗಂಟೆಯ ಶೂನ್ಯ ಅವಧಿಗೆ ಸಂಬಂಧಪಟ್ಟಂತೆ ಇರುವ ನಿಯಮಗಳೇನು? ಎಂಬಿತ್ಯಾದಿ ಅಂಶಗಳನ್ನು ಚುನಾವಣಾ ಆಯೋಗ ಪ್ರಕಟಿಸಿದೆ.

ಇದುವರೆಗೆ 23 ಕೇಸ್ ದಾಖಲು

ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಇದುವರೆಗೆ 23 ಕೇಸ್ ದಾಖಲಾಗಿದೆ. ಬಿಜೆಪಿ 12, ಕಾಂಗ್ರೆಸ್ 9, ಹಾಗೂ ಜೆಡಿಎಸ್ ಮೇಲೆ 2 ಪ್ರಕರಣಗಳು ದಾಖಲಾಗಿವೆ. ಇನ್ನಿತರ ನಾಯಕರ ಮೇಲೆ 5 ಕೇಸ್‌ಗಳು ದಾಖಲಾಗಿವೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವಿಚಾರವಾಗಿ ದೂರು ಸಲ್ಲಿಕೆಯಾಗಿದೆ. ಈ ಕುರಿತು ನಿಯಮ ಉಲ್ಲಂಘನೆ ಆಗಿರುವ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇವೆ. ಮೇಲ್ನೋಟಕ್ಕೆ ಸಾಬೀತಾದರೆ ಮುಂದಿನ ಕ್ರಮವನ್ನು ಜರುಗಿಸಲಾಗುವುದು ಎಂದು ಮನೋಜ್‌ ಕುಮಾರ್ ಮೀನಾ ತಿಳಿಸಿದರು.

ಆಂಬ್ಯಲೆನ್ಸ್‌ ನಿಯೋಜನೆ

ಈಗ ಬೇಸಿಗೆ ಕಾಲವಾಗಿದ್ದರಿಂದ ಬಿಸಿಲಿನ ಪ್ರಮಾನ ಹೆಚ್ಚಿದೆ. ಹೀಗಾಗಿ ಮತದಾನದ ವೇಳೆ ಬಿಸಿಲಿನ ಕಾರಣಕ್ಕಾಗಿ ಏನಾದರೂ ಸಮಸ್ಯೆಯಾಗಬಹುದು ಎಂಬ ಕಾರಣಕ್ಕಾಗಿ ಆಂಬ್ಯುಲೆನ್ಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ತುರ್ತು ಚಿಕಿತ್ಸೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮನೋಜ್‌ ಕುಮಾರ್ ಮೀನಾ ಮಾಹಿತಿ ನೀಡಿದರು.

28 ಲೋಕಸಭಾ ಕ್ಷೇತ್ರಗಳ ಮತದಾರರ ಸಂಖ್ಯೆ ವಿವರ

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ