ಕೊರೊನಾ ಸೋಂಕಿತರ ಬಗ್ಗೆ ರಾಜ್ಯ ಸರ್ಕಾರ ತಪ್ಪು ಮಾಹಿತಿ ನೀಡುತ್ತಿದೆಯಾ?
ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ 45 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ ಡಿಕೆ ಸುರೇಶ್, ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಹಾಗೂ ಅಗತ್ಯ ಸೌಲಭ್ಯವಿಲ್ಲದ್ದಕ್ಕಾಗಿ ಹಲವಾರು ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಕೇವಲ ಕೊರೊನಾ ಸೋಂಕಿನ ಲಕ್ಷಣಗಳು ಇದ್ದವರಿಗೆ ಮಾತ್ರ ಟೆಸ್ಟ್ ಮಾಡಲಾಗುತ್ತಿದೆ. ಕೊರೊನಾ ಸೋಂಕಿನ ಗುಣಲಕ್ಷಣಗಳಿಲ್ಲದವರನ್ನು ಟೆಸ್ಟ್ ಮಾಡದೆ ನಿರ್ಲಕ್ಷ ಮಾಡಲಾಗುತ್ತಿದ್ದು ಇದರಿಂದ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ […]
ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ 45 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿಂದು ಮಾತನಾಡಿದ ಡಿಕೆ ಸುರೇಶ್, ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಹಾಗೂ ಅಗತ್ಯ ಸೌಲಭ್ಯವಿಲ್ಲದ್ದಕ್ಕಾಗಿ ಹಲವಾರು ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಕೇವಲ ಕೊರೊನಾ ಸೋಂಕಿನ ಲಕ್ಷಣಗಳು ಇದ್ದವರಿಗೆ ಮಾತ್ರ ಟೆಸ್ಟ್ ಮಾಡಲಾಗುತ್ತಿದೆ. ಕೊರೊನಾ ಸೋಂಕಿನ ಗುಣಲಕ್ಷಣಗಳಿಲ್ಲದವರನ್ನು ಟೆಸ್ಟ್ ಮಾಡದೆ ನಿರ್ಲಕ್ಷ ಮಾಡಲಾಗುತ್ತಿದ್ದು ಇದರಿಂದ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಆರೋಪಸಿದ್ದಾರೆ.
ಬೆಂಗಳೂರಿನ ಆಸ್ಪತ್ರೆಗಳಲ್ಲಿ 40,000 ಮಂದಿಗೆ ಟೆಸ್ಟ್ ಮಾಡಬಹುದು, ಆದರೆ ಕೇವಲ 20,000 ಜನಕ್ಕೆ ಮಾತ್ರ ಟೆಸ್ಟ್ ಮಾಡಲಾಗುತ್ತಿದೆ. ಇದರಿಂದ ಕೇವಲ ಬೆಂಗಳೂರಿನಲ್ಲಿ ಎರಡರಿಂದ 2,500 ಕೊರೊನಾ ಸೋಂಕಿತರನ್ನ ಗುರುತಿಸುತ್ತಿದ್ದಾರೆ. ಆದರೆ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಐದು ಸಾವಿರಕ್ಕೂ ಹೆಚ್ಚಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಆಸ್ಪತ್ರೆಗಳು ಸರಿಯಾದ ಮಾಹಿತಿ ನೀಡುತ್ತಿಲ್ಲ, ಇದರಿಂದ ಆಸ್ಪತ್ರೆಗಳ ಮೇಲೆ ಅನುಮಾನ ಮೂಡುತ್ತಿದೆ. ಜೊತೆಗೆ ಸಾವಿನ ಅಂಕಿ ಅಂಶಗಳನ್ನು ನೀಡುವಾಗ ತಪ್ಪುಮಾಹಿತಿ ನೀಡುತ್ತಿದ್ದಾರೆ . ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ರಾಮನಗರದವರೇ 25 ಮಂದಿ ಸಾವನ್ನಪ್ಪಿದ್ದಾರೆ. ಆದ್ರೆ ಆಸ್ಪತ್ರೆಯವರು ಕೊಡುತ್ತಿರುವ ಸತ್ತವರ ಸಂಖ್ಯೆ ವಸ್ತು ಸ್ಥಿತಿಗೆ ತಾಳೆಯಾಗುತ್ತಿಲ್ಲ ಎಂದು ಸಂಸದ ಡಿಕೆ ಸುರೇಶ್ ಆರೋಪಗಳ ಸುರಿಮಳೆಗೈದಿದ್ದಾರೆ.