AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 1.29 ಕೋಟಿ ಮೌಲ್ಯದ ಅಕ್ರಮ ಚಿನ್ನ ಸಾಗಾಟ; 12 ಆರೋಪಿಗಳ ಬಂಧನ

ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್​ಪೋರ್ಟ್ ​(Kempegowda International Airport)ನಲ್ಲಿ 1.29 ಕೋಟಿ ರೂ. ಮೌಲ್ಯದ ಚಿನ್ನ(Gold)ವನ್ನು ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 12 ಜನ ಪ್ರಯಾಣಿಕರನ್ನು ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದಿದ್ದು, 2 ಕೆಜಿ 86 ಗ್ರಾಂ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ 1.29 ಕೋಟಿ ಮೌಲ್ಯದ ಅಕ್ರಮ ಚಿನ್ನ ಸಾಗಾಟ; 12 ಆರೋಪಿಗಳ ಬಂಧನ
ಚಿನ್ನ ಸಾಗಾಟ
ನವೀನ್ ಕುಮಾರ್ ಟಿ
| Edited By: |

Updated on: Jan 05, 2024 | 5:06 PM

Share

ಬೆಂಗಳೂರು ಗ್ರಾಮಾಂತರ, ಜ.05: ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್​ಪೋರ್ಟ್ ​(Kempegowda International Airport)ನಲ್ಲಿ 1.29 ಕೋಟಿ ರೂ. ಮೌಲ್ಯದ ಚಿನ್ನ(Gold)ವನ್ನು ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 12 ಜನ ಪ್ರಯಾಣಿಕರನ್ನು ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದಿದ್ದು, 2 ಕೆಜಿ 86 ಗ್ರಾಂ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಮಸ್ಕಟ್ ಮತ್ತು ಮದೀನಾದಿಂದ ಕೆಐಎಬಿಗೆ ಬಂದಿದ್ದ ಪ್ರಯಾಣಿಕರು ಇವರಾಗಿದ್ದು,  ಮೈಮೇಲೆ ಬಂಗಾರ ಧರಿಸಿದರೆ ಕೇಳಲ್ಲ ಅಂದುಕೊಂಡಿದ್ದರಂತೆ. ಇದೀಗ ಚಿನ್ನಕ್ಕೆ ಸರಿಯಾದ ಬಿಲ್ ಟ್ಯಾಕ್ಸ್ ಇಲ್ಲದ ಹಿನ್ನೆಲೆ ವಶಕ್ಕೆ ಪಡೆಯಲಾಗಿದೆ.

ವ್ಯಾನಿಟಿ ಬ್ಯಾಗ್​​ನಲ್ಲಿದ್ದ 3 ಲಕ್ಷ ಮೌಲ್ಯದ ಚಿನ್ನ, ನಗದು ಕದ್ದವನ ಬಂಧನ

ಬೆಳಗಾವಿ: ಮದುವೆ ಮನೆಯಲ್ಲಿ ವ್ಯಾನಿಟಿ ಬ್ಯಾಗ್​​ನಲ್ಲಿದ್ದ 3 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ನಗದನ್ನು ಕಳ್ಳತನ ಮಾಡಿದವನನ್ನು ಮಾಳ ಮಾರುತಿ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ನಗರದ ವಿದ್ಯಾಧಿರಾಜ ಕಲ್ಯಾಣ ಮಂಟಪದಲ್ಲಿ ವ್ಯಾನಿಟಿ ಬ್ಯಾಗ್​​​ನಲ್ಲಿದ್ದ 3 ಲಕ್ಷದ 51 ಸಾವಿರ ರೂ. ಮೌಲ್ಯದ ಚಿನ್ನಾಭರಣದ ಜೊತೆಗೆ 3,500 ರೂಪಾಯಿಯನ್ನು  ಕಳ್ಳತನ ಮಾಡಿದ್ದ ಖದೀಮನನ್ನು 6 ಗಂಟೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಇಮ್ತಿಯಾಜ್ ಹುಬ್ಳಿವಾಲೆ ಬಂಧಿತ ಆರೋಪಿ.

ಇದನ್ನೂ ಓದಿ:ಚಿನ್ನದ ಕಳ್ಳಸಾಗಣೆ​​ಗೆ ಮತ್ತೊಂದು ಐಡಿಯಾ! ಆದರೆ ಕಸ್ಟಮ್ಸ್ ಅಧಿಕಾರಿಗಳ ಮುಂದೆ ನಡೆಯದ ಕಳ್ಳಾಟ

ಇತ ಪಂಚಾಕ್ಷರಿ, ಲತಾ ದಂಪತಿ ಮಕ್ಕಳ ಮದುವೆಗೆ ಹೋಗಿದ್ದ.​​ ಈ ವೇಳೆ ದಂಪತಿ ಚೇರ್​​ ಮೇಲೆ ವ್ಯಾನಿಟಿ ಬ್ಯಾಗ್​​​ ಬಿಟ್ಟು, ನವ ಜೋಡಿಯನ್ನು ಆಶೀರ್ವದಿಸಲು ತೆರಳಿದ್ದರು. ಈ ಸಂದರ್ಭದಲ್ಲಿ ಅಲ್ಲಿಯೇ ಇದ್ದ ವ್ಯಾನಿಟಿ ಬ್ಯಾಗ್​​ ತೆಗೆದುಕೊಂಡು ಇಮ್ತಿಯಾಜ್ ಪರಾರಿಯಾಗಿದ್ದ. ಈ ದೃಶ್ಯ ಕಲ್ಯಾಣ ಮಂಟಪದಲ್ಲಿನ ಸಿಸಿಕ್ಯಾಮರಾದಲ್ಲಿ ಸೆರೆಯಾಗಿತ್ತು. ಇದನ್ನೇ ಆಧರಿಸಿ ಹುಡುಕಾಟ ಆರಂಭಿಸಿದ ಮಾಳ ಮಾರುತಿ ಪೊಲೀಸರು, ಇದೀಗ ಕೇವಲ 6 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್