AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಪಾರ್ಟ್​ಮೆಂಟ್​ನಲ್ಲಿ ಬರೋಬ್ಬರಿ 3 ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆ

ಬೆಂಗಳೂರಿನ ಆನೇಕಲ್ ತಾಲೂಕಿನ ಕರ್ಪೂರು ಗ್ರಾಮದಲ್ಲಿ 3 ಕೋಟಿ ರೂಪಾಯಿ ಮೌಲ್ಯದ 100 ಕೆಜಿ ಗಾಂಜಾ ಪತ್ತೆಯಾಗಿದೆ. ಪೊಲೀಸರು ಕೇರಳ ಮೂಲದ ಆರೋಪಿ ಸಚಿನ್​ ನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳು ಪರಾರಿಯಾಗಿದ್ದಾರೆ. ಬೆಂಗಳೂರು ಪೊಲೀಸರು ಕಳೆದ ಒಂದು ತಿಂಗಳಲ್ಲಿ ಡ್ರಗ್ ಕೇಸ್‌ಗಳಲ್ಲಿ 59 ಜನರನ್ನು ಬಂಧಿಸಿದ್ದಾರೆ ಮತ್ತು ದೊಡ್ಡ ಪ್ರಮಾಣದ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಅಪಾರ್ಟ್​ಮೆಂಟ್​ನಲ್ಲಿ ಬರೋಬ್ಬರಿ 3 ಕೋಟಿ ರೂ. ಮೌಲ್ಯದ ಗಾಂಜಾ ಪತ್ತೆ
ಅಪಾರ್ಟ್​ಮೆಂಟ್​​ನಲ್ಲಿ ಸಿಕ್ಕ ಗಾಂಜಾ
ರಾಮು, ಆನೇಕಲ್​
| Updated By: ವಿವೇಕ ಬಿರಾದಾರ|

Updated on: May 09, 2025 | 3:36 PM

Share

ಬೆಂಗಳೂರು, ಮೇ 09: ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಕರ್ಪೂರು ಗ್ರಾಮದಲ್ಲಿನ ಅಪಾರ್ಟ್​ಮೆಂಟ್​ವೊಂದರಲ್ಲಿ 3 ಕೋಟಿ ಮೌಲ್ಯದ 100 ಕೆಜಿ ಗಾಂಜಾ ಪತ್ತೆಯಾಗಿದೆ. ಗಾಂಜಾ ಸಂಗ್ರಹಿಸಿದ್ದ ಕೇರಳ ಮೂಲದ ಆರೋಪಿ ಸಚಿನ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳಿದ ಆರೋಪಿಗಳಾದ ರಾಶಿ, ಸಂಜು ಮತ್ತು ಉಮೇದ್ ಪರಾರಿಯಾಗಿದ್ದಾರೆ. ಆರೋಪಿ ಸಚಿನ್​ ಕೂಡ ಮೊದಲ ಮಹಡಿಯಿಂದ ಹಾರಿ ಪರಾರಿಯಾಗಲು ಯತ್ನಿಸಿದನು.

ಆದರೆ, ಕಾಲು ಮುರಿದು ಕುಸಿದು ಬಿದ್ದಿದ್ದಾನೆ. ಗಾಯಾಳು ಆರೋಪಿ ಸಚಿನ್​ನನ್ನು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನೇಕಲ್ ಠಾಣೆ ಪೊಲೀಸರು ಅಪಾರ್ಟ್​ಮೆಂಟ್​ನಲ್ಲಿ ಶೋಧ ಮುಂದುವರೆಸಿದ್ದಾರೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸಿ ಕೆ ಬಾಬಾ, ಆನೇಕಲ್ ಉಪವಿಭಾಗದ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆರೋಪಿಗಳು ಹೊರರಾಜ್ಯಗಳಿಂದ ಗಾಂಜಾ ತರಿಸಿ, ಅಪಾರ್ಟ್ಮೆಂಟ್​ನಲ್ಲಿ ಸಣ್ಣ ಸಣ್ಣ ಪ್ಯಾಕೆಟ್​ಗಳಲ್ಲಿ ಪ್ಯಾಕ್ ಮಾಡುತ್ತಿದ್ದರು. ಬಳಿಕ ಆರೋಪಿಗಳು ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳು ಇದ್ದ ಕೊಠಡಿಯಲ್ಲಿ ವೇಯಿಂಗ್ ಸ್ಕೇಲ್, ಪ್ಯಾಕಿಂಗ್ ಟೇಪ್, ರಾಶಿ ರಾಶಿ ಗಾಂಜಾ ಪಾಕೇಟ್ಗಳು ಪತ್ತೆಯಾಗಿವೆ.

ಇದನ್ನೂ ಓದಿ
Image
ಸುಳ್ಳು ಸುದ್ದಿಗಳನ್ನ ಹರಡುವವರ ವಿರುದ್ಧ ಕ್ರಮ: ದಯಾನಂದ್ ಎಚ್ಚರಿಕೆ
Image
ಬೆಂಗಳೂರು ಹೆಚ್​ಎಎಲ್​ನಲ್ಲಿ ಹೈ ಅಲರ್ಟ್, ಸಿಬ್ಬಂದಿ ರಜೆ ರದ್ದು
Image
ಪಾಕ್​ಗೆ ತೆರಳಲು ಸಮಯ ಕೋರಿದ್ದ ಅರ್ಜಿ ವಜಾ, ಕೋರ್ಟ್ ಹೇಳಿದ್ದೇನು?
Image
ಬೆಂಗಳೂರು: ಪಕ್ಕದ ಮನೆಯವರ ಮೇಲಿನ ದ್ವೇಷಕ್ಕೆ ಬಾಲಕನನ್ನ ಅಪಹರಿಸಿ ಹತ್ಯೆ

ಡ್ರಗ್​ ಕೇಸ್​ನಲ್ಲಿ 59 ಆರೋಪಿಗಳು ಅರೆಸ್ಟ್​

ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಳೆದ 1 ತಿಂಗಳಲ್ಲಿ ಡ್ರಗ್​ ಕೇಸ್​ನಲ್ಲಿ 59 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳ ಬಳಿ ಇದ್ದ 208 ಕೆಜಿ ಗಾಂಜಾ, 22 ಗ್ರಾಂ ಹೆರಾಯಿನ್, 1 ಕೆಜಿ ಎಂಡಿಎಂಎ, 32 ಟೈಡಲ್ ಮಾತ್ರೆಗಳು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಹೈಅಲರ್ಟ್: 3 ಗಂಟೆ ಮುಂಚಿತವಾಗಿ ಬರಲು ಪ್ರಯಾಣಿಕರಿಗೆ ಸೂಚನೆ

ಗ್ಯಾಮ್ಲಿಂಗ್ ಸಂಬಂಧ 55 ಕೇಸ್ ದಾಖಲಿಸಿಕೊಂಡು 205 ಆರೋಪಿಗಳನ್ನು ಬಂಧಿಸಿದ್ದಾರೆ. ಕ್ರಿಕೆಟ್ ಬೆಟ್ಟಿಂಗ್ ಸಂಬಂಧ 23 ಕೇಸ್ ದಾಖಲಿಸಿ 30 ಜನರನ್ನು ಬಂಧಿಸಿದ್ದಾರೆ. ಅಕ್ರಮ ಮಾನವ ಕಳ್ಳಸಾಗಣೆ 8 ಕೇಸ್ ದಾಖಲು, 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ 9 ಮಂದಿ ಆರೋಪಿಗಳು ಅರೆಸ್ಟ್ ಮಾಡಲಾಗಿದೆ. ಹಾಗೇ ವಿವಿಧ ಸೆಕ್ಷನ್ ಅಡಿಯಲ್ಲಿ 1 ತಿಂಗಳಲ್ಲಿ ಒಟ್ಟು 188 ಕೇಸ್ ದಾಖಲಾಗಿದ್ದು, 366 ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ