AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಸಿಡಿದೆದ್ದ ಪೋಷಕರು, ಪರಿಸ್ಥಿತಿ ಉದ್ವಿಗ್ನ

ಶಾಲೆಗಳು ಪ್ರಾರಂಭವಾಗಿ ಒಂದು ತಿಂಗಳು ಆಗಿದೆ ಅಷ್ಟೇ ಆಗಲೇ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಾವು ಪ್ರಕರಣಗಳು ವರದಿಯಾಗುತ್ತಿವೆ. ಅಂತಹದ್ದೇ ಘಟನೆಯೊಂದು ಬೆಂಗಳೂರು ಉತ್ತರ ತಾಲೂಕಿನ ಕಾಡಯರಪ್ಪನಹಳ್ಳಿಯ ವಸತಿ ಶಾಲೆ ನಡೆದಿದೆ. ವಸತಿ ಶಾಲೆಯಲ್ಲಿ 12 ವರ್ಷದ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಶಾಲೆಗೆ ನೇರ ಹೊಣೆ ಎಂದು ಕುಟುಂಬಸ್ಥರು, ದೈಹಿಕ ಶಿಕ್ಷಕ ಹಲ್ಲೆ ಮಾಡಿದ್ದಾರೆ. ಅಲ್ಲದೇ ದೈಹಿಕ ಶಿಕ್ಷಕನ್ನ ಕೊಲ್ಲುವವರೆಗೂ ಬಿಡಲ್ಲ ಎಂದು ಪಟ್ಟು ಹಿಡಿದಿದ್ದು, ಇದರಿಂದ ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಸಿಡಿದೆದ್ದ ಪೋಷಕರು, ಪರಿಸ್ಥಿತಿ ಉದ್ವಿಗ್ನ
ನವೀನ್ ಕುಮಾರ್ ಟಿ.
| Edited By: |

Updated on:Jul 08, 2026 | 2:35 PM

Share

ಮುಖ್ಯಾಂಶಗಳು

  • ವಸತಿ ಶಾಲೆಯ ವಿದ್ಯಾರ್ಥಿ ಗುರುಕಿರಣ್ ಅನುಮಾನಾಸ್ಪದ ರೀತಿ ಸಾವು
  • ಬೆಂಗಳೂರು ಉತ್ತರ ತಾಲೂಕಿನ ಕಾಡಯರಪ್ಪನಹಳ್ಳಿಯ ವಸತಿ ಶಾಲೆಯಲ್ಲಿ ಘಟನೆ
  • ವಸತಿ ಶಾಲೆ ಬಳಿ ಮುಂದುವರಿದ ವಿದ್ಯಾರ್ಥಿ ಪೋಷಕರ ಪ್ರತಿಭಟನೆ

ಬೆಂಗಳೂರು, (ಜುಲೈ 08): ಬೆಂಗಳೂರು ಉತ್ತರ ತಾಲೂಕಿನ ಕಾಡಯರಪ್ಪನಹಳ್ಳಿಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೋರ್ವ (Student)  ಅನುಮಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಕಾಡಯರಪ್ಪನಹಳ್ಳಿಯ ಸ್ಟ್ರಲಿಂಗ್ ಇಂಗ್ಲೀಷ್ ವಸತಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ಗುರು ಕಿರಣ್​ ಎಂಬ ವಿದ್ಯಾರ್ಥಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ. ಹುಷಾರಿಲ್ಲ ಎಂದು ಆಸ್ಪತ್ರೆಗೆ ಸೇರಿಸಿರೋದಾಗಿ ವಿದ್ಯಾರ್ಥಿ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾರೆ. ಆದ್ರೆ, ಪೋಷಕರು ಬರುವಷ್ಟರಲ್ಲೇ ವಿದ್ಯಾರ್ಥಿ ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ದೈಹಿಕ ಶಿಕ್ಷಕ ನಾರಾಯಣ ಹಲ್ಲೆ ಮಾಡಿದ್ದಕ್ಕೆ ಗುರುಕಿರಣ್​ ಸಾವನ್ನಪ್ಪಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ. ಇದರಿಂದ ಆಕ್ರೋಶಗೊಂಡಿರುವ ಪೋಷಕರು, ಶಿಕ್ಷಕ ನಾರಾಯಣ ಮೇಲೆ ಹಲ್ಲೆ ಮಾಡಿದ್ದಾರೆ. ಅಲ್ಲದೇ ನಾರಾಯಣನನ್ನು ಸುಟ್ಟು ಹಾಕುವುದಾಗಿ ಪೆಟ್ರೋಲ್ ತಂದಿದ್ದಾರೆ. ಇದರಿಂದ ಸ್ಥಳಕ್ಕೆ ಉದ್ವಿಗ್ನಗೊಂಡಿದೆ.

ಘಟನೆ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ಸಹಪಾಠಿ

ಇನ್ನು ಈ ಬಗ್ಗೆ ಟಿವಿ9ಗೆ ಇದೇ ವಸತಿ ಶಾಲೆಯ ವಿದ್ಯಾರ್ಥಿಯೋರ್ವ ಮಾತನಾಡಿದ್ದು, ಇಂದು (ಜುಲೈ 08) ಬೆಳಗ್ಗೆ ಎಂದಿನಂತೆ 5 ಗಂಟೆಗೆ ನಿದ್ದೆಯಿಂದ ಎದ್ದಿದ್ದ. ಗ್ರೌಂಡ್ಗೆ ಬರುವ ಮುನ್ನ ಶೌಚಾಲಯಕ್ಕೆ ಅಂತ ಗುರು ಕಿರಣ್ ಹೋಗಿದ್ದ. ಶೌಚಾಲಯಕ್ಕೆ ಹೋಗಿದ್ದಕ್ಕೆ ದೈಹಿಕ ಶಿಕ್ಷಕ ನಾರಾಯಣ್ ಅವರು ಹೊಡೆದಿದ್ದಾರೆ. ಗುರುಕಿರಣ್ ಕುತ್ತಿಗೆ ಮೇಲೆ ತಲ್ಲೆ ಬಗ್ಗಿಸಿ ಹೊಡೆದರು. ಹೊಡೆದ ನಂತರ ಗ್ರೌಂಡ್ಗೆ ಕರೆಸಿ ಎರಡು ರೌಂಡ್ ಓಡುವಂತೆ ಹೇಳಿದ್ದರು. ಅದರಂಯೆ ಓಡುವ ವೇಳೆ ಗುರುಕಿರಣ್ ಕುಸಿದು ಬಿದ್ದ ಎಂದು ಘಟನೆ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾನೆ.

ಯಾವಾಗಲೂ ಸಣ್ಣ ವಿಚಾರಕ್ಕೂ ದೈಹಿಕ ಶಿಕ್ಷಕರು ಮಕ್ಕಳನ್ನ ಹೊಡೆಯುತ್ತಾರೆ. ರಾಡ್ ಮತ್ತು ಬಿದರಿನಿಂದ ಹೊಡೆಯುತ್ತಾರೆ. ರೂಂ ನಲ್ಲಿ ಕೂಡಿಹಾಕಿ ಹೊಡೆದು ಟಾರ್ಚರ್ ಮಾಡುತ್ತಾರೆ. ಊಟದಲ್ಲಿ ಕಲ್ಲು ಕೂದಲು ಎಲ್ಲಾ‌ ಸಿಗುತ್ತದೆ ಎಂದು ಗಂಭೀರ ಆರೋಪ ಮಾಡಿದ್ದಾನೆ. ಇದರಿಂದ ಆಕ್ರೋಶಗೊಂಡ ಮೃತ ವಿದ್ಯಾರ್ಥಿ ಗುರುಕಿರಣ್ ಕುಟುಂಬಸ್ಥರು, ದೈಹಿಕ ಶಿಕ್ಷಕ ನಾರಾಯಣನ ಮೇಲೆ ಹಲ್ಲೆ ಮಾಡಿದ್ದಾರೆ.

ಶಾಲೆ ಬಳಿ ಉದ್ವಿಗ್ನಗೊಂಡ ಪರಿಸ್ಥಿತಿ

ಆಕ್ರೋಶಗೊಂಡಿರು ಪೋಷಕರು ದೈಹಿಕ ಶಿಕ್ಷಕ ನಾರಾಯಣನನ್ನು ಹಿಡಿದು ಥಳಿಸಿದ್ದಾರೆ.  ನಾರಾಯಣಗೌಡ ತಪ್ಪಿಸಿಕೊಂಡು ಓಡಿದರೂ ಸಹ ಬಿಡದೇ ಅಟ್ಟಾಡಿಸಿಕೊಂಡು ಹೋಗಿದ್ದಾರೆ. ಬಳಿಕ ಮಧ್ಯೆ ಪ್ರವೇಶಿಸಿದ ಬಾಗಲೂರು  ಪೊಲೀಸರು, ನಾರಾಯಣನ್ನು ರಕ್ಷಿಸಿ ಜೀಪ್​​​ನಲ್ಲಿ ಕೂರಿಸಿದ್ದಾರೆ. ಆದರೂ ಬಿಡದ ಪೋಷಕರು, ತಮ್ಮ ವಶಕ್ಕೆ ಕೊಡಿ ಎಂದು ಮತ್ತೆ ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೇ ದೈಹಿಕ ಶಿಕ್ಷಕನ್ನು ಸುಟ್ಟು ಹಾಕುತ್ತೇವೆಂದು ಪೆಟ್ರೋಲ್ ಹಿಡಿದುಕೊಂಡು ಬಂದಿದ್ದಾರೆ. ಇದರಿಂದ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆಯೇ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡು

ಲಾಠಿ ಚಾರ್ಜ್ ಮಾಡಿದರೂ  ಪಟ್ಟು ಬಿಡದ ಆಕ್ರೋಶ ಭರಿತ ಪೋಷಕರು, ಹೊಯ್ಸಳ ಜೀಪ್ಗೆ ಅಡ್ಡಲಾಗಿ  ಕುಳಿತು ಧರಣಿ ನಡೆಸಿದ್ದು, ನಾರಾಯಣನನ್ನು ತಮ್ಮ ವಶಕ್ಕೆ ನೀಡುವಂತೆ ಬಿಗಿಪಟ್ಟು ಹಿಡಿದಿದ್ದಾರೆ.  ಅಲ್ಲದೇ ದೈಹಿಕ ಶಿಕ್ಷಕನನ್ನ ಸಾಯಿಸುವ ವರೆಗೂ ಇಲ್ಲಿಂದ ಹೋಗಲ್ಲ ಅಂತ ಪಟ್ಟು ಹಿಡಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಸ್ಥಳಕ್ಕೆ ದೇವನಹಳ್ಳಿ ಎಸಿಪಿ ಶ್ರೀ ಹರ್ಷ ಹಾಗು ಡಿಸಿಪಿ ಮಿಥುನ್ ಕುಮಾರ್ ದೌಡಾಯಿಸಿದ್ದು, ಧರಣಿ ನಿರತ ಪೋಷಕರ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಕರ್ನಾಟಕದ ಮ್ತತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:31 pm, Wed, 8 July 26

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು
ಎಟಿಎಂನಲ್ಲಿ ಹೆಡೆ ಎತ್ತಿ ನಿಂತ ನಾಗರಹಾವು