ನೆಲಮಂಗಲದಲ್ಲಿ ಉದ್ಯಮಿ ಮನೆ ಬಾಗಿಲು ಮುರಿದು 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು

ಬೆಂಗಳೂರು ಗ್ರಾಮಾಂತರ(Bangalore Rural) ಜಿಲ್ಲೆಯ ನೆಲಮಂಗಲ ಪಟ್ಟಣದಲ್ಲಿ ಉದ್ಯಮಿಯೊಬ್ಬರ ಮನೆ ಬಾಗಿಲು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ನಡೆದಿದೆ. ಈ ಕುರಿತು ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲದಲ್ಲಿ ಉದ್ಯಮಿ ಮನೆ ಬಾಗಿಲು ಮುರಿದು 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು
ನೆಲಮಂಗಲದಲ್ಲಿ ಉದ್ಯಮಿ ಮನೆ ಬಾಗಿಲು ಮುರಿದು 15 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು
Follow us
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 13, 2024 | 9:15 PM

ಬೆಂಗಳೂರು ಗ್ರಾಮಾಂತರ, ಅ.13: ಉದ್ಯಮಿಯೊಬ್ಬರ ಮನೆ ಬಾಗಿಲು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ(Bangalore Rural) ಜಿಲ್ಲೆಯ ನೆಲಮಂಗಲ ಪಟ್ಟಣದಲ್ಲಿ ನಡೆದಿದೆ. ಹೌದು, ಪಟ್ಟಣದ ಉದ್ಯಮಿ ಲಾಲಾರಾಮ್ ಎಂಬುವವರು ದಸರಾ ಹಬ್ಬದ ಪೂಜೆ ಹಾಗೂ ಭಜನೆ ಕಾರ್ಯಕ್ರಮಕ್ಕೆ ಕುಟುಂಬ ಸಮೇತ ತೆರಳಿದ್ದರು. ಈ ವೇಳೆ ಮನೆ ಬಾಗಿಲು ಮುರಿದು 15 ಲಕ್ಷ ರೂಪಾಯಿ ಮೌಲ್ಯದ 355 ಗ್ರಾಂ ಚಿನ್ನಾಭರಣ, 5 ಕೆಜಿ ಬೆಳ್ಳಿ ಹಾಗೂ 70 ಸಾವಿರ ನಗದು ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕದ್ದೊಯ್ದ ಖತರ್ನಾಕ್ ಕಳ್ಳರು

ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ಎರಡು ಬೈಕ್​ನ್ನು ಖತರ್ನಾಕ್ ಕಳ್ಳರು ಕದ್ದೊಯ್ದ ಘಟನೆ ಬೆಂಗಳೂರಿನ ಶಿವಾಜಿನಗರದಲ್ಲಿ ನಡೆದಿದೆ. ಕೇವಲ 10 ನಿಮಿಷದ ಅಂತರದಲ್ಲಿ 2 ಬೈಕನ್ನು ಕದ್ದೊಯ್ದಿದ್ದಾರೆ. ಕಳ್ಳರ ಕೃತ್ಯ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅ.10 ರಂದು ನಡೆದ ಈ ಕಳ್ಳತನದ ದೃಶ್ಯವನ್ನ ಪೊಲೀಸರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಲಾಗಿದೆ. ಈ ಕುರಿತು ಶಿವಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಐಷಾರಾಮಿ ಜೀವನಕ್ಕಾಗಿ ಕಳ್ಳತನದ ಹಾದಿ ಹಿಡಿದ ಕೇಂದ್ರ ಸರ್ಕಾರದ ಉದ್ಯೋಗಿ

ಕೆರೆಕೋಡಿ ಬಳಿ ಕಾರು ಪಲ್ಟಿಯಾಗಿ ಓರ್ವ ದುರ್ಮರಣ

ಶಿವಮೊಗ್ಗ: ತಾಲೂಕಿನ ಕುಂಸಿ ಸಮೀಪದ ಕೆರೆಕೋಡಿ ಬಳಿ ಕಾರು ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ನೆಲಮಂಗಲ ಮೂಲದ ಚಂದನ್‌(26) ದುರ್ಮರಣ. ಸಿಗಂದೂರಿಗೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಭತ್ತದ ಗದ್ದೆಯಲ್ಲಿ ಪಲ್ಟಿಯಾಗಿದೆ. ನಂದನ್‌, ಕೋದಂಡ, ಭರತ್‌ ಹಾಗೂ ಯೋಗೇಶ್​ ಎಂಬುವವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಈ ಕುರಿತು ಕುಂಸಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:03 pm, Sun, 13 October 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ