Bengaluru: ಕಿಟಕಿ ಮೂಲಕ ನುಗ್ಗಿ ಮನೆಯಲ್ಲಿದ್ದ 15ಲಕ್ಷ ರೂ. ಬೆಲೆಬಾಳುವ ಚಿನ್ನಾಭರಣ ದೋಚಿದ ಖದೀಮರು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಾಗಲಗುಂಟೆ ಬಳಿಯ ಮಂಜುನಾಥನಗರದ ವಿನಾಯಕ್ ಸಿಂಧೆ ಎಂಬುವರ ಮನೆಯಲ್ಲಿ 15 ಲಕ್ಷ ಮೌಲ್ಯದ 300 ಗ್ರಾಂ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಿದ ಘಟನೆ ನಡೆದಿದೆ.

Bengaluru: ಕಿಟಕಿ ಮೂಲಕ ನುಗ್ಗಿ ಮನೆಯಲ್ಲಿದ್ದ 15ಲಕ್ಷ ರೂ. ಬೆಲೆಬಾಳುವ ಚಿನ್ನಾಭರಣ ದೋಚಿದ ಖದೀಮರು
ಬೆಂಗಳೂರಿನಲ್ಲಿ ಮನೆ ಕಳ್ಳತನ
Follow us
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 30, 2023 | 12:18 PM

ಬೆಂಗಳೂರು ಗ್ರಾಮಾಂತರ, ಜು.30: ಮಹಾನಗರದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದೆ. ಇತ್ತೀಚೆಗೆ ಓರ್ವ ಕಳ್ಳ ಮನೆಯಲ್ಲಿ ಯಾರು ಇಲ್ಲದ್ದನ್ನು ಖಚಿತ ಪಡಿಸಿಕೊಂಡು ಮನೆಗೆ ಕನ್ನ ಹಾಕಿ, ಪೊಲೀಸ್​ ಬಲೆಗೆ ಬಿದ್ದಿದ್ದ. ಇಂತಹ ಅನೇಕ ಪ್ರಕರಣಗಳು ದಿನನಿತ್ಯ ಬೆಳಕಿಗೆ ಬರುತ್ತಿದೆ. ಅದರಂತೆ ಬೆಂಗಳೂರು ಗ್ರಾಮಾಂತರ(Bengaluru Rural) ಜಿಲ್ಲೆಯ ಬಾಗಲಗುಂಟೆ ಬಳಿಯ ಮಂಜುನಾಥನಗರದ ವಿನಾಯಕ್ ಸಿಂಧೆ ಎಂಬುವರ ಮನೆಯಲ್ಲಿ 15 ಲಕ್ಷ ಮೌಲ್ಯದ 300 ಗ್ರಾಂ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಿದ ಘಟನೆ ನಡೆದಿದೆ. ಈ ಕುರಿತು ಬಾಗಲಗುಂಟೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮದುವೆ ಸಮಯದಲ್ಲಿ ಖರೀದಿಸಿದ ಚಿನ್ನಾಭರಣ ಕಳ್ಳತನ

ಹೌದು, ವಿನಾಯಕ್ ಸಿಂಧೆ ಅವರು ತಮ್ಮ ಮದುವೆಯಲ್ಲಿ ಖರೀದಿಸಿದ್ದ ಚಿನ್ನಾಭರಣಗಳು ಇದಾಗಿತ್ತು. 15 ದಿನದ ಹಿಂದೆ ವಿನಾಯಕ್​ ಅವರ ಪತ್ನಿ ತವರು ಮನೆಗೆ ಹೋಗಿದ್ದರು. ಇತ್ತ ವಿನಾಯಕ್​ ಕೂಡ ಕೆಲಸಕ್ಕೆ ತೆರಳಿದ್ದರು. ಈ ವೇಳೆ ಯಾರೂ ಇಲ್ಲದನ್ನು ನೋಡಿದ್ದ ಕಳ್ಳ, ಮನೆಯ ಕಿಟಕಿ ಮುರಿದು ಒಳಗೆ ನುಗ್ಗಿ ಚಿನ್ನದ ಬಳೆ, ಮಾಂಗಲ್ಯ, ಉಂಗುರು, ಓಲೆಗಳು, ನೆಕ್ಲೆಸ್, 1 ಡೈಮಂಡ್ ಎಗರಿಸಿದ್ದಾನೆ.

ಇದನ್ನೂ ಓದಿ:ಚಿಕ್ಕಮಗಳೂರಿನ ಪ್ರವಾಸಿ ಸ್ಥಳಗಳಿಗೆ ನಿರ್ಬಂಧ; ಕಳ್ಳ ದಾರಿಯಲ್ಲಿ ಮುಳ್ಳಯ್ಯನಗಿರಿಗೆ ಹೊರಟಿದ್ದ ಪ್ರವಾಸಿಗರಿಗೆ ಶಾಕ್ ನೀಡಿದ ಜಿಲ್ಲಾಡಳಿತ

KYC ಅಪ್ಡೇಟ್ ಮಾಡಬೇಕು ಅಪ್ಡೇಟ್​ ಮಾಡಬೇಕೆಂದು ಓಟಿಪಿ ಪಡೆದು ವೃದ್ದೆಗೆ ವಂಚನೆ

ಬೆಂಗಳೂರು ಗ್ರಾಮಾಂತರ: ಕೆವೈಸಿ ಅಪ್ಡೇಟ್ ಮಾಡಬೇಕು ಇಲ್ಲವಾದ್ರೆ, ಯಾವ ಸೌಲಭ್ಯಗಳು ನಿಮಗೆ ದೊರಕುವುದಿಲ್ಲವೆಂದು ವೃದ್ದೆಗೆ ಕರೆ ಮಾಡಿ OTP ಪಡೆದು ವಂಚನೆ ಮಾಡಿದ ಘಟನೆ ನಡೆದಿದೆ. ಹೌದು, ನೆಲಮಂಗಲದ ದೊಡ್ಡಬಿದರಕಲ್ಲುವಿನಲ್ಲಿರುವ ಜಯಮ್ಮ ಎಂಬ 65ವರ್ಷದ ವೃದ್ದೆಯ ಪಿಂಚಣಿ ಅಕೌಂಟ್​ನಲ್ಲಿದ್ದ 6 ಸಾವಿರ ರೂಪಾಯಿಗಳನ್ನು ದುಷ್ಕರ್ಮಿಗಳು ಎಗರಿಸಿದ್ದಾರೆ. ಈ ಘಟನೆ ಸಂಬಂಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ವೃದ್ದೆ ಜಯಮ್ಮ ದೂರು ದಾಖಲು ಮಾಡಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್