AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್​​ಪೋರ್ಟ್​​​ನಲ್ಲಿ 2.75 ಕೆಜಿ ಚಿನ್ನ ಜಪ್ತಿ: ಟ್ರಾವೆಲ್ ಫುಡ್​ ಸರ್ವಿಸ್​​ ಸಿಬ್ಬಂದಿ ಸೇರಿ ಮೂವರು ವಶಕ್ಕೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, 2.75 ಕೆಜಿ ಅಕ್ರಮ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಸಿಂಗಾಪುರ ಮತ್ತು ದುಬೈನಿಂದ ಬಂದಿದ್ದ ಇಬ್ಬರು ಪ್ರಯಾಣಿಕರು ಹಾಗೂ ಏರ್ಪೋಟ್ ಸಿಬ್ಬಂದಿ ಸೇರಿ ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು ಏರ್​​ಪೋರ್ಟ್​​​ನಲ್ಲಿ 2.75 ಕೆಜಿ ಚಿನ್ನ ಜಪ್ತಿ: ಟ್ರಾವೆಲ್ ಫುಡ್​ ಸರ್ವಿಸ್​​ ಸಿಬ್ಬಂದಿ ಸೇರಿ ಮೂವರು ವಶಕ್ಕೆ
ಅಧಿಕಾರಿಗಳು ವಶಕ್ಕೆ ಪಡೆದಿರುವ ಪ್ರಯಾಣಿಕ
ನವೀನ್ ಕುಮಾರ್ ಟಿ.
| Edited By: |

Updated on:Oct 16, 2026 | 4:18 PM

Share

ಮುಖ್ಯಾಂಶಗಳು

  • ಕೆಐಎಬಿಯಲ್ಲಿ ಅಕ್ರಮವಾಗಿ ತಂದಿದ್ದ 2.75 ಕೆಜಿ ಚಿನ್ನ ಜಪ್ತಿ
  • ಅಕ್ರಮವಾಗಿ ಚಿನ್ನ ತಂದಿದ್ದ ಇಬ್ಬರು ಪ್ರಯಾಣಿಕರು, ಓರ್ವ ಸಿಬ್ಬಂದಿ ವಶಕ್ಕೆ
  • ಇಬ್ಬರು ಪ್ರಯಾಣಿಕರು ಶ್ರೀಲಂಕಾ ಪ್ರಜೆಗಳು‌

ದೇವನಹಳ್ಳಿ, ಅಕ್ಟೋಬರ್​​ 16: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎಬಿ) ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರು ಸೇರಿದಂತೆ ಓರ್ವ ಸಿಬ್ಬಂದಿಯನ್ನ ವಶಕ್ಕೆ ಪಡೆದಿದ್ದಾರೆ. ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 2.75 ಕೆಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

ಇಬ್ಬರು ಪ್ರಯಾಣಿಕರು ವಶಕ್ಕೆ

ಸಿಂಗಾಪುರದಿಂದ ಬೆಂಗಳೂರು ಮೂಲಕ ದುಬೈಗೆ ತೆರಳಲು ಬಂದಿದ್ದ ಮೊಹಮ್ಮದ್ ಅಖಿಲ್ ಹಾಗೂ ದುಬೈನಿಂದ ಬೆಂಗಳೂರು ಮೂಲಕ ಮಾಲ್ಡೀವ್ಸ್‌ಗೆ ತೆರಳುತ್ತಿದ್ದ ಮೊಹಮ್ಮದ್ ನಾಸಿರ್ ಎಂಬುವವರನ್ನು  ವಶಕ್ಕೆ ಪಡೆಯಲಾಗಿದೆ. ಇಬ್ಬರೂ ಶ್ರೀಲಂಕಾ ಪ್ರಜೆಗಳಾಗಿದ್ದು, ಟ್ರಾನ್ಸಿಕ್ ವಿಮಾನ ಮೂಲಕ ದುಬೈ ಮತ್ತು ಮಾಲ್ಡೀವ್ಸ್‌ಗೆ ತೆರಳಲು ಬಂದಿದ್ದರು.

ಟ್ರಾವೆಲ್ ಫುಡ್​ ಸರ್ವಿಸ್​ ಸಿಬ್ಬಂದಿಗೆ ಚಿನ್ನ ನೀಡಲು ಪ್ಲ್ಯಾನ್!

ಇನ್ನು ಈ ಪ್ರಯಾಣಿಕರು ಕೆಐಎಬಿಯಲ್ಲಿ ಟ್ರಾವೆಲ್ ಫುಡ್ ಸರ್ವಿಸ್‌ (ಟಿಎಫ್‌ಎಸ್‌) ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಎಬಿನ್ ಜೋಸ್ ಎಂಬಾತನಿಗೆ ಈ ಚಿನ್ನ ನೀಡಲು ಪ್ಲ್ಯಾನ್​ ಮಾಡಿದ್ದರು. ಆದರೆ, ಚಿನ್ನ ಹಸ್ತಾಂತರಿಸುವ ಮುನ್ನವೇ ಕಾರ್ಯಾಚರಣೆ ನಡೆಸಿದ ಡಿಆರ್‌ಐ ಅಧಿಕಾರಿಗಳು ಇಬ್ಬರು ಪ್ರಯಾಣಿಕರು ಹಾಗೂ ಸಿಬ್ಬಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

LIVE TV

ಕೋಟ್ಯಂತರ ರೂ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ ಜಪ್ತಿ: ನಾಲ್ವರ ಬಂಧನ

ಇನ್ನು ಇತ್ತೀಚೆಗೆ ಕೋಟ್ಯಂತರ ರೂ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ ತಂದಿದ್ದ ನಾಲ್ವರು ಪ್ರಯಾಣಿಕರು ಅಧಿಕಾರಿಗಳ ಕೈಗೆ ಲಾಕ್ ಆಗಿದ್ದರು. ಬ್ಯಾಂಕಾಕ್ ಮತ್ತು ವಿಯೆಟ್ನಾಂನಿಂದ ಬಂದಿದ್ದ ನಾಲ್ವರು ಪ್ರಯಾಣಿಕರ ಬ್ಯಾಗ್​ನಲ್ಲಿ 80 ಕೆಜಿ ಹೈಡ್ರೋಪೋನಿಕ್ಸ್ ಗಾಂಜಾ ಸಿಕ್ಕಿತ್ತು. ಮಾರುಕಟ್ಟೆ ಮೌಲ್ಯ 28 ಕೋಟಿ ರೂ ಅಂತ ಕಸ್ಟಮ್ಸ್ ಅಧಿಕಾರಿಗಳು ಅಂದಾಜಿಸಿದ್ದರು.

ಇದನ್ನೂ ಓದಿ: ಟ್ರಾಲಿಗಳ ಕೆಳಗೆ 1.2 ಕೆಜಿ ಚಿನ್ನ ಅಡಗಿಸಿ ಸಾಗಾಟ ಯತ್ನ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಇಬ್ಬರ ಬಂಧನ

ಜೊತೆಗೆ ಕೌಲಲಾಂಪುರ ಮತ್ತು ಅಬುಧಾಬಿಯಿಂದ ಬೆಂಗಳೂರಿಗೆ ಬಂದಿದ್ದ ಮತ್ತಿಬ್ಬರು ಪ್ರಯಾಣಿಕರು ಸಹ ತಮ್ಮ ಬ್ಯಾಗ್​ನಲ್ಲಿ ಅಕ್ರಮವಾಗಿ ಚಿನ್ನ ತಂದು ಸಿಕ್ಕಿಬಿದ್ದಿದರು. 1 ಕೋಟಿ 75 ಲಕ್ಷ ರೂ ಮೌಲ್ಯದ 1 ಕೆಜಿ 201 ಗ್ರಾಂ ಚಿನ್ನವನ್ನ ಬ್ಯಾಗ್​ನಲ್ಲಿ ಅಡಗಿಸಿಟ್ಟುಕೊಂಡು ಬಂದಿದ್ದು ಚಿನ್ನ ಸಮೇತ ಇಬ್ಬರು ಪ್ರಯಾಣಿಕರನ್ನ ವಶಕ್ಕೆ ಪಡೆದಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:16 pm, Fri, 16 October 26

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More