ಬಾರ್ ಮಾಲೀಕನಿಂದಲೇ ದುಪ್ಪಟ್ಟು ಬೆಲೆಗೆ ಮದ್ಯ ಮಾರಾಟ, ಇಬ್ಬರು ಪೊಲೀಸ್ ಬಲೆಗೆ
ಆನೇಕಲ್: ಲಾಕ್‌ಡೌನ್ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್ ಬಿದ್ದಿದ್ದು, ಅಕ್ರಮವಾಗಿ ದುಪ್ಪಟ್ಟು ಬೆಲೆಗೆ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಬೊಮ್ಮಸಂದ್ರದಲ್ಲಿ ನಡೆದಿದೆ. ತನ್ನ ಬಾರ್ನಲ್ಲಿಯೇ ಮದ್ಯ ಕದ್ದು ದುಪ್ಪಟ್ಟು ಬೆಲೆಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಾರ್ ಮಾಲೀಕ ಶ್ರೀನಿವಾಸ್ ಹಾಗೂ ಅವನ ಸ್ನೇಹಿತ ಶಾಮುಲುನ ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಲಕ್ಷೀಶ್ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ತನ್ನ ಬಾರ್ನಲ್ಲೇ ಮದ್ಯ ಕದ್ದು, ತನ್ನ ಸ್ನೇಹಿತ ಶಾಮುಲು ಜೊತೆ ಸೇರಿ ಮುನಿರೆಡ್ಡಿ ಲೇಔಟ್ನಲ್ಲಿರುವ […]
ಆನೇಕಲ್: ಲಾಕ್‌ಡೌನ್ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್ ಬಿದ್ದಿದ್ದು, ಅಕ್ರಮವಾಗಿ ದುಪ್ಪಟ್ಟು ಬೆಲೆಗೆ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಬೊಮ್ಮಸಂದ್ರದಲ್ಲಿ ನಡೆದಿದೆ.
ತನ್ನ ಬಾರ್ನಲ್ಲಿಯೇ ಮದ್ಯ ಕದ್ದು ದುಪ್ಪಟ್ಟು ಬೆಲೆಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಾರ್ ಮಾಲೀಕ ಶ್ರೀನಿವಾಸ್ ಹಾಗೂ ಅವನ ಸ್ನೇಹಿತ ಶಾಮುಲುನ ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಲಕ್ಷೀಶ್ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ತನ್ನ ಬಾರ್ನಲ್ಲೇ ಮದ್ಯ ಕದ್ದು, ತನ್ನ ಸ್ನೇಹಿತ ಶಾಮುಲು ಜೊತೆ ಸೇರಿ ಮುನಿರೆಡ್ಡಿ ಲೇಔಟ್ನಲ್ಲಿರುವ ತನ್ನ ಮನೆಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ. ಹಗಲು ರಾತ್ರಿ ಎನ್ನದೆ ಡಬಲ್ ರೇಟ್ಗೆ ಮದ್ಯ ಮಾರಾಟ ಮಾಡಿ ಸುಲಿಗೆ ಮಾಡುತ್ತಿದ್ದ.
ಇಂದು ಬೆಳಗಿನ ಜಾವ ನಾಲ್ಕು ಘಂಟೆಯ ಸುಮಾರಿಗೆ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ಶ್ರೀನಿವಾಸ್ ಮತ್ತು ಆತನ ಸ್ನೇಹಿತ ಶಾಮುಲು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸದ್ಯ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, 20 ಕೇಸ್ನಷ್ಟು ಮದ್ಯ ವಶಕ್ಕೆ ಪಡೆದಿದ್ದಾರೆ.