ದೊಡ್ಡಬಳ್ಳಾಪುರ: ಹಿಟ್ & ರನ್ಗೆ ಇಬ್ಬರು ಬೈಕ್ ಸವಾರರು ಬಲಿ
ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ. ಬೈಕ್ಗೆ ಹಿಂದಿನಿಂದ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ನಂತರ ವಾಹನ ಸಮೇತ ಚಾಲಕ ಎಸ್ಕೇಪ್ ಆಗಿದ್ದಾನೆ.
ಬೆಂಗಳೂರು, ಅಕ್ಟೋಬರ್ 28: ಹಿಟ್ & ರನ್ಗೆ ಇಬ್ಬರು ಬೈಕ್ ಸವಾರರು ಬಲಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ. ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಯುವಕರ ಸಾವನ್ನಪ್ಪಿದ್ದಾರೆ. ತೂಬಗೆರೆ ನಿವಾಸಿ ನಂದನ್ ಕುಮಾರ್(22) ಮತ್ತು ದೊಡ್ಡತಿಮ್ಮನಹಳ್ಳಿಯ ರವಿಕುಮಾರ್(24) ಮೃತ ಯುವಕರಾಗಿದ್ದು, ಮೃತರು ದೊಡ್ಡಬಳ್ಳಾಪುರ ನಗರದ ಎಲ್&ಟಿ ಕಂಪನಿ ಸಿಬ್ಬಂದಿ ಎಂಬುದು ಗೊತ್ತಾಗಿದೆ. ಬೈಕ್ಗೆ ಹಿಂದಿನಿಂದ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ವಾಹನ ಸಮೇತ ಚಾಲಕ ಎಸ್ಕೇಪ್ ಆಗಿದ್ದು, ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 28, 2025 11:29 AM
