ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಬರೋಬ್ಬರಿ 23 ಕೋಟಿ ರೂ ಮೌಲ್ಯದ ಗಾಂಜಾ ವಶ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23 ಕೋಟಿ ರೂಪಾಯಿ ಮೌಲ್ಯದ 23 ಕೆಜಿ ಗಾಂಜಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬ್ಯಾಂಕಾಕ್‌ನಿಂದ ಬಂದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅವರು ಗಾಂಜಾವನ್ನು ಲಗೇಜ್‌ನಲ್ಲಿಟ್ಟುಕೊಂಡು ತಂದಿದ್ದರು. ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಬರೋಬ್ಬರಿ 23 ಕೋಟಿ ರೂ ಮೌಲ್ಯದ ಗಾಂಜಾ ವಶ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಬರೋಬ್ಬರಿ 23 ಕೋಟಿ ರೂ ಮೌಲ್ಯದ ಗಾಂಜಾ ವಶ
Edited By:

Updated on: Jan 16, 2025 | 3:12 PM

ಬೆಂಗಳೂರು, ಜನವರಿ 16: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಅಕ್ರಮವಾಗಿ ತಂದಿದ್ದ 23 ಕೋಟಿ ರೂ. ಮೌಲ್ಯದ ಗಾಂಜಾವನ್ನು (ganja) ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬ್ಯಾಂಕಾಕ್​ನಿಂದ ಅಕ್ರಮವಾಗಿ 23 ಕೆಜಿ ಗಾಂಜಾ ತಂದಿದ್ದ ಮೂವರನ್ನು ಬಂಧಿಸಿದ್ದು, ಎನ್​ಡಿಪಿಎಸ್​ ಖಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಲಾಗುತ್ತಿದೆ.

ಬಂಧಿತ ಮೂವರು ಬ್ಯಾಂಕಾಕ್​ನಿಂದ ಅಕ್ರಮವಾಗಿ 23 ಕೆಜಿಯ ಹೈಡ್ರೋಪೋನಿಕ್ಸ್, ಮೈರವಾನ್ ಮತ್ತು ಹೂ ಸೇರಿದಂತೆ ವಿವಿಧ ಬಗೆಯ ಗಾಂಜಾವನ್ನು ಪ್ರತ್ಯೇಕ ಕವರ್ಗಳಲ್ಲಿ  ಪ್ಯಾಕಿಂಗ್ ಮಾಡಿಕೊಂಡು ಲಗೇಜ್ ಬ್ಯಾಗ್​ನಲ್ಲಿಟ್ಟುಕೊಂಡು ಕೆಐಎಬಿಗೆ ಬಂದಿದ್ದರು.

ಇದನ್ನೂ ಓದಿ: ಬೀದರ್: ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು

ಈ ವೇಳೆ ಕೆಂಪೇಗೌಡ ಏರ್​ಪೋರ್ಟ್​ ಕಸ್ಟಮ್ಸ್​ ಅಧಿಕಾರಿಗಳು ಪರಿಶೀಲನೆ ವೇಳೆ ಗಾಂಜಾ ಸಮೇತ ಮೂವರನ್ನು ಬಂಧಿಸಿದ್ದಾರೆ. ಇನ್ನು ಹೈಡ್ರೋಪೋನಿಕ್ ಗಾಂಜಾ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆ ಬಾಳುತ್ತದೆ ಎನ್ನಲಾಗಿದೆ.

ಅಂತಾರಾಜ್ಯ ಬೈಕ್​​ ಕಳ್ಳನ ಬಂಧನ: 5,15,000 ರೂ. ಮೌಲ್ಯದ 16 ಬೈಕ್ ಜಪ್ತಿ 

ಹಾವೇರಿಯಲ್ಲಿ ಅಂತಾರಾಜ್ಯ ಬೈಕ್​​ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. 5,15,000 ರೂ. ಮೌಲ್ಯದ 16 ಬೈಕ್ ಜಪ್ತಿ ಮಾಡಿದ್ದಾರೆ. ರಾಣೇಬೆನ್ನೂರು ತಾಲೂಕಿನ ಕವಲೆತ್ತು ಗ್ರಾಮದ ನಿವಾಸಿ ಅಪ್ಪು‌ ನಾಗೇನಹಳ್ಳಿ(35) ಬಂಧಿತ ಆರೋಪಿ.

ಆರೋಪಿ ಜನಸಂದಣಿ ಪ್ರದೇಶದಲ್ಲಿ ನಕಲಿ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ. ಕದ್ದ ಬೈಕ್​​ಗಳನ್ನು ಮಾರಾಟ ಮಾಡಿ ಬಂದ ಹಣದಲ್ಲಿ ಮೋಜು ಮಸ್ತಿ ಮಾಡುತ್ತಿದ್ದ. ಹೆಚ್ಚುವರಿ ಎಸ್​​ಪಿ ಎಲ್​​ವೈ ಶೀರಕೋಳ ಮತ್ತು ಸಂತೋಷ ಪವಾರ ನೇತೃತ್ವದಲ್ಲಿ ಬೈಕ್ ಕಳ್ಳನನ್ನು ಬಂಧಿಸಲಾಗಿದ್ದು, ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕೆಎಸ್​ಆರ್​ಟಿಸಿ ಬಸ್​ ಹರಿದು ಬಾಲಕಿ ಸೇರಿ ಇಬ್ಬರು ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ಗೇಟ್​​ ಬಳಿ ಕೆಎಸ್​ಆರ್​ಟಿಸಿ ಬಸ್​ ಹರಿದು ಬಾಲಕಿ ಸೇರಿ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬೈಕ್ ಸವಾರ ವೆಂಕಟೇಶ್​ ಮೂರ್ತಿ(29), ಬಾಲಕಿ ಮೋಕ್ಷಿತಾ(8) ಮೃತರು. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ಬೈಕ್​ನ್ನ 60 ಮೀಟರ್ ಎಳೆದೊಯ್ದ ಕಾರು: ಎದೆ ಝಲ್​ ಎನಿಸುವ ಆ್ಯಕ್ಸಿಡೆಂಟ್​ ವಿಡಿಯೋ

ಬೈಕ್​ನಲ್ಲಿದ್ದ ಲಾವಣ್ಯ, ನರಸಮ್ಮಗೆ ಗಾಯ, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಊರಿನಿಂದ ಬೆಂಗಳೂರಿಗೆ ಬೈಕ್​​​​​​ನಲ್ಲಿ ನಾಲ್ವರು ತೆರಳುತ್ತಿದ್ದರು. ಬೈಕ್​​ ಅನ್ನು ಆಂಧ್ರ ಸಾರಿಗೆ ಬಸ್ ಓವರ್​ ಟೇಕ್​ ಮಾಡಿದ್ದು, ಈ ವೇಳೆ ಬಸ್​ ಟಚ್​ ಆಗಿ ಬೈಕ್​ನಲ್ಲಿದ್ದ ನಾಲ್ವರು ಬಿದಿದ್ದಾರೆ. ಹಿಂದಿನಿಂದ ಬರುತ್ತಿದ್ದ KSRTC ಬಸ್ ಹರಿದು ಇಬ್ಬರು ಮೃತಪಟ್ಟಿದ್ದಾರೆ. ಬಸ್​​​ಗಳ ಅತಿವೇಗವೇ​​​ ಘಟನೆಗೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us