ಬೆಂಗಳೂರು ಏರ್​ಪೋರ್ಟ್​​ನಲ್ಲಿ ಕೋಲ್ಕತ್ತಾ ಪ್ರಯಾಣಿಕನಿಂದ 30 ಚಿನ್ನದ ಬಿಸ್ಕೆಟ್​ ಜಪ್ತಿ!

Bangalore KIAL Airport: ಚಿನ್ನದ ಮಾಲಿನೊಂದಿಗೆ ಆಗಮಿಸಿದ್ದ ಪ್ರಯಾಣಿಕ ಕೋಲ್ಕತ್ತಾದಿಂದ ಕೆಂಪೇಗೌಡ ಏರ್​​ಪೋರ್ಟ್​ಗೆ ಬಂದಿಳಿದಿದ್ದ. ಈ ವೇಳೆ ಅನುಮಾನಗೊಂಡು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ. ಚಿನ್ನದ ಬಿಸ್ಕೆಟ್ ಸಮೇತ ವ್ಯಕ್ತಿಯನ್ನು ವಶಕ್ಕೆ ಪಡೆದು ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್​ಪೋರ್ಟ್​ನಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರು ಏರ್​ಪೋರ್ಟ್​​ನಲ್ಲಿ ಕೋಲ್ಕತ್ತಾ ಪ್ರಯಾಣಿಕನಿಂದ 30 ಚಿನ್ನದ ಬಿಸ್ಕೆಟ್​ ಜಪ್ತಿ!
ಬೆಂಗಳೂರು ಏರ್​ಪೋರ್ಟ್​​ನಲ್ಲಿ 30 ಚಿನ್ನದ ಬಿಸ್ಕೆಟ್​ ಜಪ್ತಿ!
Edited By: ಸಾಧು ಶ್ರೀನಾಥ್​

Updated on: Aug 16, 2023 | 9:46 AM

ದೇವನಹಳ್ಳಿ, ಆಗಸ್ಟ್​ 16: ಬೆಂಗಳೂರು ಏರ್​ಪೋರ್ಟ್​​ನಲ್ಲಿ 30 ಚಿನ್ನದ ಬಿಸ್ಕೆಟ್​ಗಳನ್ನು ಕೆಂಪೇಗೌಡ ಏರ್​ಪೋರ್ಟ್​​ (Bangalore KIAL Airport) ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವ್ಯಕ್ತಿಯೊಬ್ಬ ಕೋಲ್ಕತ್ತಾದಿಂದ ಅಕ್ರಮವಾಗಿ ಈ ಚಿನ್ನದ ಬಿಸ್ಕೆಟ್ ಸಾಗಿಸುತ್ತಿದ್ದ ಎಂದು ತಿಳಿದುಬಂದಿದೆ. ಒಟ್ಟು 36 ಲಕ್ಷ ರೂಪಾಯಿ ಮೌಲ್ಯದ 600 ಗ್ರಾಂ ತೂಕದ 30 ಚಿನ್ನದ ಬಿಸ್ಕೆಟ್​​ಗಳನ್ನು (gold biscuit) ಜಫ್ತಿ ಮಾಡಲಾಗಿದೆ.

ಸದರಿ ಚಿನ್ನದ ಮಾಲಿನೊಂದಿಗೆ ಆಗಮಿಸಿದ್ದ ಪ್ರಯಾಣಿಕ ಕೋಲ್ಕತ್ತಾದಿಂದ ಏರ್​​ಪೋರ್ಟ್​ಗೆ ಬಂದಿಳಿದಿದ್ದ (Kolkata passenger). ಈ ವೇಳೆ ಅನುಮಾನಗೊಂಡು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ.

Also read: ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ: ಲಾರಿ ಡಿಕ್ಕಿ ಹೊಡೆದು ಆಟೋದಲ್ಲಿದ್ದ ನಾಲ್ಕು ಮಂದಿ ಸಾವು

ಚಿನ್ನದ ಬಿಸ್ಕೆಟ್ ಸಮೇತ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್​ಪೋರ್ಟ್​ನಲ್ಲಿ ಈ ಘಟನೆ ನಡೆದಿದೆ.

ಕಳೆದ ಜುಲೈನಲ್ಲಿ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಸಿಕ್ಕಿತ್ತು 4 ಕೋಟಿ ರೂ. ಮೌಲ್ಯದ ಚಿನ್ನ

ದೇವನಹಳ್ಳಿ (ಬೆಂಗಳೂರು), ಜುಲೈ 14: ಕಳೆದ ತಿಂಗಳು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು. ಮಧ್ಯಪ್ರದೇಶದ ಇಂದೋರ್​ನಿಂದ ಇಂಡಿಗೋ 6E6744 ವಿಮಾನದಲ್ಲಿ ಬಂದ ಚೆನ್ನೈ ಮೂಲದ ವ್ಯಕ್ತಿ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದ. ಬಂಧಿತನಿಂದ ಬರೋಬ್ಬರಿ 4 ಕೋಟಿ ರೂ. ಮೌಲ್ಯದ 6.5 ಕೆಜಿ ತೂಕದ 7 ಚಿನ್ನದ ಬಿಸ್ಕೆಟ್​ಗಳನ್ನು ವಶಪಡಿಸಿಕೊಂಡಿದ್ದರು.

ಇನ್ನಷ್ಟು ಬೆಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us