Bengaluru Airport: ದಟ್ಟ ಮಂಜು, 34 ವಿಮಾನಗಳ ಹಾರಾಟ ವ್ಯತ್ಯಯ
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಮಂಜು ಆವರಿಸಿದ ಹಿನ್ನೆಲೆಯಲ್ಲಿ ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯವಾಗಿದೆ.
ದೇವನಹಳ್ಳಿ, ಜನವರಿ 14: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ದೇವನಹಳ್ಳಿ (Devnahalli) ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport) ಸುತ್ತಮುತ್ತ ಮಂಜು ಆವರಿಸಿದ ಹಿನ್ನೆಲೆಯಲ್ಲಿ ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯವಾಗಿದೆ. ವಿಮಾನಗಳು ಕಳೆದ ಎರಡು ಗಂಟೆಗೂ ಅಧಿಕ ಕಾಲ ಟೇಕಾಫ್ ಆಗಿಲ್ಲ. ಸುಮಾರು 34 ವಿಮಾನ ಟೇಕಾಫ್ ಆಗದೆ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವಂತಾಯಿತು.
ದಟ್ಟ ಮಂಜಿನಿಂದ ರನ್ ವೇ ಕಾಣದ ಹಿನ್ನೆಲೆಯಲ್ಲಿ ವಿಮಾನ ಸಂಚಾರ ಸ್ಥಗಿತವಾಗಿದೆ. ಹೀಗಾಗಿ ಪ್ರಯಾಣಿಕರು ವಿಮಾನಗಳಲ್ಲೆ ಕುಳಿತ ಕಾಲಹರಣ ಮಾಡಿದರು. ಇದೀಗ 09 ಗಂಟೆ ನಂತರ ವಿಮಾನಗಳು ಟೇಕ್ ಆಪ್ಗೆ ಸಿದ್ದವಾಗಿವೆ.
ಇದನ್ನೂ ಓದಿ: ಕೆಂಪೇಗೌಡ ವಿಮಾನ ನಿಲ್ದಾಣದಿಂದ ಪ್ರಯಾಣಿಸಿದ ಪ್ರಯಾಣಿಕರ ಸಂಖ್ಯೆ ಶೇ. 35ರಷ್ಟು ಏರಿಕೆ
ಪ್ರತಿ ವರ್ಷ ಚಳಿಗಾಲದಲ್ಲಿ ಮುಂಜಾನೆ ಈ ಸಮಸ್ಯೆ ತಲೆದೂರುತ್ತದೆ. ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿ ಪ್ರಯಾಣಿಕರು ಸಮಸ್ಯೆಗೆ ಸಿಲುಕುತ್ತಿದ್ದಾರೆ. ಚಳಿಗಾಲ ಮುಗಿಯುವವರೆಗೂ ಕನಿಷ್ಠ ಮೂರು ತಿಂಗಳು ಆಗಾಗ ಈ ಸಮಸ್ಯೆ ತಲೆದೋರುವ ಸಾಧ್ಯತೆ ಇದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ