Bengaluru Airport: ದಟ್ಟ ಮಂಜು, 34 ವಿಮಾನಗಳ ಹಾರಾಟ ವ್ಯತ್ಯಯ

| Updated By: ವಿವೇಕ ಬಿರಾದಾರ

Updated on: Jan 14, 2024 | 10:00 AM

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಮಂಜು ಆವರಿಸಿದ ಹಿನ್ನೆಲೆಯಲ್ಲಿ ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯವಾಗಿದೆ.

Bengaluru Airport: ದಟ್ಟ ಮಂಜು, 34 ವಿಮಾನಗಳ ಹಾರಾಟ ವ್ಯತ್ಯಯ
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ
Follow us on

ದೇವನಹಳ್ಳಿ, ಜನವರಿ 14: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ದೇವನಹಳ್ಳಿ (Devnahalli) ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport) ಸುತ್ತಮುತ್ತ ಮಂಜು ಆವರಿಸಿದ ಹಿನ್ನೆಲೆಯಲ್ಲಿ ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯವಾಗಿದೆ. ವಿಮಾನಗಳು ಕಳೆದ ಎರಡು ಗಂಟೆಗೂ ಅಧಿಕ ಕಾಲ ಟೇಕಾಫ್​ ಆಗಿಲ್ಲ. ಸುಮಾರು 34 ವಿಮಾನ ಟೇಕಾಫ್​ ಆಗದೆ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವಂತಾಯಿತು.

ದಟ್ಟ ಮಂಜಿನಿಂದ ರನ್ ವೇ ಕಾಣದ ಹಿನ್ನೆಲೆಯಲ್ಲಿ ವಿಮಾನ ಸಂಚಾರ ಸ್ಥಗಿತವಾಗಿದೆ. ಹೀಗಾಗಿ ಪ್ರಯಾಣಿಕರು ವಿಮಾನಗಳಲ್ಲೆ ಕುಳಿತ ಕಾಲಹರಣ ಮಾಡಿದರು. ಇದೀಗ 09 ಗಂಟೆ ನಂತರ ವಿಮಾನಗಳು ಟೇಕ್ ಆಪ್​ಗೆ ಸಿದ್ದವಾಗಿವೆ.

ಇದನ್ನೂ ಓದಿ: ಕೆಂಪೇಗೌಡ ವಿಮಾನ ನಿಲ್ದಾಣದಿಂದ ಪ್ರಯಾಣಿಸಿದ ಪ್ರಯಾಣಿಕರ ಸಂಖ್ಯೆ ಶೇ. 35ರಷ್ಟು ಏರಿಕೆ

ಪ್ರತಿ ವರ್ಷ ಚಳಿಗಾಲದಲ್ಲಿ ಮುಂಜಾನೆ ಈ ಸಮಸ್ಯೆ ತಲೆದೂರುತ್ತದೆ. ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿ ಪ್ರಯಾಣಿಕರು ಸಮಸ್ಯೆಗೆ ಸಿಲುಕುತ್ತಿದ್ದಾರೆ. ಚಳಿಗಾಲ ಮುಗಿಯುವವರೆಗೂ ಕನಿಷ್ಠ ಮೂರು ತಿಂಗಳು ಆಗಾಗ ಈ ಸಮಸ್ಯೆ ತಲೆದೋರುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ