ಪ್ರತೇಕ ಘಟನೆ: ಕಚೇರಿಯಲ್ಲೇ ನೋಡಲ್ ಅಧಿಕಾರಿ ಆತ್ಮಹತ್ಯೆ, ಮನೆಯಲ್ಲಿ ನೇಣಿಗೆ ಶರಣಾದ ಶಿಕ್ಷಕಿ
40 ವರ್ಷದ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದ್ದರೆ, ಮತ್ತೊಂದೆಡೆ ತಾಲೂಕು ಪಂಚಾಯಿತಿ ಮೋಡಲ್ ಅಧಿಕಾರಿ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದೊಡ್ಡಬಳ್ಳಾಪುರ, ಜುಲೈ 15): ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರು(Teacher) ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ(doddaballapura) ನಡೆದಿದೆ. 12 ವರ್ಷಗಳ ಕಾಲ ಬನವತಿ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದ ಜ್ಯೋತಿ(40) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ವಿವಾಹವಾಗಿ 13 ವರ್ಷಗಳಾದರೂ ಮಕ್ಕಳಾಗದಿದ್ದಕ್ಕೆ ಮಾನಸಿಕ ಖಿನ್ನತೆಗೆ ಒಳಗಾಗಿ ಜ್ಯೋತಿ ಇಂದು (ಜುಲೈ 15) ದೊಡ್ಡಬಳ್ಳಾಪುರದ ಸೋಮೇಶ್ವರ ಬಡಾವಣೆಯಲ್ಲಿರುವ ನಿವಾಸದ ಕಿಟಕಿಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
2 ವರ್ಷಗಳ ಕಾಲ ಬನವತಿ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದ ಜ್ಯೋತಿಗೆ ಕಳೆದ 9 ತಿಂಗಳ ಹಿಂದೆಯಷ್ಟೇ ತುರುವಿನಹಳ್ಳಿ ಶಾಲೆಗೆ ವರ್ಗಾವಣೆಯಾಗಿತ್ತು. ಆದರೂ ಸದ್ಯ ಮತ್ತೊಂದು ಶಾಲೆಗೆ ವರ್ಗಾವಣೆಗೆ ಪ್ರಯತ್ನಿಸುತ್ತಿದ್ದರು ಎನ್ನಲಾಗಿದೆ. ಈ ಎಲ್ಲಾ ವಿಚಾರದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಾ.ಪಂ. ನೋಡಲ್ ಅಧಿಕಾರಿ ಆತ್ಮಹತ್ಯೆ
ಧಾರವಾಡ: ಇನ್ನೊಂದೆಡೆ ಧಾರವಾಡದಲ್ಲಿ ತಾಲೂಕು ಪಂಚಾಯಿತಿ ನೋಡಲ್ ಅಧಿಕಾರಿ ಸಕ್ರೆಪ್ಪ ಚಿಕ್ಕೋಡಿ(40) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಧಾರವಾಡ ಜಿಲ್ಲೆ ನವಲಗುಂದ ತಾ.ಪಂ. ಕಚೇರಿಯಲ್ಲೇ ನೇಣಿ ಬಿಗಿದ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನೋಡಲ್ ಅಧಿಕಾರಿ ಸಕ್ರೆಪ್ಪ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ ನಡೆದಿದೆ.
Published On - 5:14 pm, Sat, 15 July 23