ಮಾರಕ ವೈರಸ್​ಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದ 7 ಚಿರತೆ ಮರಿಗಳು ಬಲಿ

ಮಾರಕ ವೈರಸ್​ ಮೊದಲಿಗೆ ಆಗಸ್ಟ್ 22ರಂದು ಕಾಣಿಸಿಕೊಂಡಿದ್ದು, ಸೆಪ್ಟೆಂಬರ್ 5ರ ಒಳಗೆ ಈ ರೋಗಕ್ಕೆ ಏಳು ಚಿರತೆಗಳ ಸಾವಿಗೀಡಾದವು. ಈ ಹಿನ್ನೆಲೆಯಲ್ಲಿ 11 ಜನರ ತಂಡ ರಚಿಸಲಾಗಿದೆ.

ಮಾರಕ ವೈರಸ್​ಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದ 7 ಚಿರತೆ ಮರಿಗಳು ಬಲಿ
ಸಾಂದರ್ಭಿಕ ಚಿತ್ರ
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ Edited By: ವಿವೇಕ ಬಿರಾದಾರ

Updated on: Sep 17, 2023 | 2:33 PM

ಆನೇಕಲ್ ಸೆ.17: ಪೆಲಿನ್ ಪ್ಯಾನ್ಲೂಕೋಪೇನಿಯಾ ಎಂಬ ಮಾರಕ ವೈರಸ್​​ಗೆ ಬನ್ನೇರುಘಟ್ಟ (Bannerghatta) ಜೈವಿಕ ಉದ್ಯಾನವನದಲ್ಲಿನ ಏಳು ಚಿರತೆ ಮರಿಗಳು ಮೃತಪಟ್ಟಿವೆ. ರಾಜ್ಯದ ನಾನಾ ಭಾಗಗಳ ರೈತರ ಜಮೀನುಗಳ ಬಳಿ ಸಿಕ್ಕ ಚಿರತೆ ಮರಿಗಳನ್ನು ರಕ್ಷಣೆ ಮಾಡಿ ಬನ್ನೇರುಘಟ್ಟ ಜೈವಿಕ ಉದ್ಯಾನವನವಕ್ಕೆ ಕರೆತರಲಾಗಿತ್ತು. ಈ ಚಿರತೆ (Leopard) ಮರಿಗಳನ್ನು ಝೂನಲ್ಲಿ ಇರಿಸಲಾಗಿತ್ತು. ಆದರೆ ಈ ಚಿರತೆ ಮರಿಗಳು ಸೋಂಕಿಗೆ ಮೃತಪಟ್ಟಿವೆ. ಈ ಮಾರಕ ರೋಗ ಮೊದಲಿಗೆ ಆಗಸ್ಟ್ 22ರಂದು ಕಾಣಿಸಿಕೊಂಡಿದ್ದು, ಸೆಪ್ಟೆಂಬರ್ 5ರ ಒಳಗೆ ರೋಗಕ್ಕೆ ಏಳು ಚಿರತೆಗಳ ಸಾವಿಗೀಡಾದವು.

ಸೋಂಕು ತಗುಲಿದ ಬಳಿಕ ಜೀರ್ಣ ಕ್ರೀಯೆ ಆಗದೇ ರಕ್ತ ವಾಂತಿಯಾಗಿ ಪ್ರಾಣ ಬಿಟ್ಟಿವೆ. ಈ ಸೋಂಕು ಮನೆಯ ಸಾಕು ಬೆಕ್ಕುಗಳಿಂದ ಹರಡುತ್ತದೆ. ಮನೆಯಲ್ಲಿ ಬೆಕ್ಕು ಸಾಕಿದ್ದ ಅನಿಮಲ್ ಕೀಪರ್​​​ಗಳು ಊಟ ಪ್ರಾಣಿಗಳಿಗೆ ಆಹಾರ ನೀಡಲು ಹೋದಾಗ ಸೋಂಕು ಅಂಟಿರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕಾಗಿ ಡಾ.ಉಮಾಶಂಕರ್, ಡಾ. ಮಂಜುನಾಥ್ ನೇತೃತ್ವದಲ್ಲಿ 11 ಜನರ ತಂಡ ರಚಿಸಲಾಗಿದೆ.

ಇದನ್ನೂ ಓದಿ: ಕೇರಳದಲ್ಲಿ ನಿಫಾ ವೈರಸ್ ಸೋಂಕು ಹೆಚ್ಚಳ; ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹೈ ಅಲರ್ಟ್

ಈ ತಂಡ ಬೂಸ್ಟರ್ ಡೋಸ್ ನೀಡಿ ಪ್ರಾಣಿಗಳಿಗೆ ಸೋಂಕು ತಗುಲದಂತೆ ಕ್ರಮ ಕೈಗೊಂಡಿದೆ. ಇನ್ನು ಚಿರತೆ, ಹುಲಿ, ಸಿಂಹ ಸೇರಿದಂತೆ ಎಲ್ಲಾ ಕೇಜ್​ಗಳಿಗೆ ಬರ್ನಿಂಗ್ ಮಾಡಿ ಬಿಸಿಯಾಗಿ ಇರುವಂತೆ ನೋಡಿಕೊಳ್ಳಲಾಗುತ್ತದೆ. ಅಲ್ಲದೇ ಬ್ಲೀಚಿಂಗ್ ಪೌಡರ್, ಔಷಧಿ ಸಿಂಪಡನೆ ಮಾಡಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Loading...
Unable to load recommendations.
Follow Us