ಬೆಂಗಳೂರು ಗ್ರಾಮಾಂತರ, ಮಾ.07: ನೆಲಮಂಗಲ ನಗರದ ಆಸರೆ ಆಸ್ಪತ್ರೆ (Aasare Hospital)ಯಲ್ಲಿ 74 ಭ್ರೂಣ ಹತ್ಯೆ (Foeticide) ಪ್ರಕರಣಕ್ಕೆ ಸಂಬಂಧಿಸಿದಂತೆ ಆಸರೆ ಆಸ್ಪತ್ರೆಯಲ್ಲಿ ಆರೋಗ್ಯಾಧಿಕಾರಿಗಳು ಸೇರಿದಂತೆ ಪೊಲೀಸರು ಪರಿಶೀಲನೆ ನಡೆಸಿದ್ದು, ಆಸ್ಪತ್ರೆಯಲ್ಲಿ ಕೆಲ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಳಿಕ ಸಂಗ್ರಹಿಸಿದ ದಾಖಲೆಗಳೊಂದಿಗೆ ನ್ಯಾಯಾಲಯಕ್ಕೆ ತೆರಳಿದ್ದಾರೆ. ಇನ್ನು ತನಿಖಾ ಕಾರ್ಯಚರಣೆ ಮುಕ್ತಾಯವಾಗುವವರೆಗೂ ಆಸರೆ ಅಸ್ಪತ್ರೆಯನ್ನ ಮುಚ್ಚಲಾಗಿದೆ.
ಭ್ರೂಣ ಹತ್ಯೆ ತಡೆಗೆ ನಿಷೇಧ ಹೇರಲಾಗಿದೆ. ಆದರೂ ಕೂಡ ಅಲ್ಲಲ್ಲಿ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುತ್ತದೆ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿರುವ ಡಾಕ್ಟರ್ ರವಿಕುಮಾರ್ ಎಂಬುವವರಿಗೆ ಸೇರಿದ ಆಸರೆ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ನಡೆಯುತ್ತಿದ್ದು, ವೈದ್ಯರು ಬರೋಬ್ಬರಿ 74 ಭ್ರೂಣಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. MTPಕಾಯ್ದೆ ಪರವಾನಗಿ ಪಡೆಯದೇ ಬೇಕಾಬಿಟ್ಟಿಯಾಗಿ ಗರ್ಭಪಾತ ಮಾಡಿಸಲಾಗುತ್ತಿದೆ. ಇದರ ಪೂರ್ಣಾವಧಿ ತಲುಪುವ ಮೊದಲು ಅಬಾರ್ಶನ್ ಮಾಡಿಸಲಾಗುತ್ತಿದೆ. ಅವಶ್ಯಕವಾಗಿ ಬೇಕಾದ ಸ್ಕ್ಯಾನಿಂಗ್ ರಿಪೋರ್ಟ್ ಇಲ್ಲ. ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಸಣ್ಣದಾಗಿ ನಮೂದಿಸಿದ್ದು ಸರಿಯಾಗಿ ರೆಕಾರ್ಡ್ ಕೂಡ ನಿರ್ವಹಣೆ ಮಾಡಿಲ್ಲ.
ಇದನ್ನೂ ಓದಿ:ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿ 74 ಭ್ರೂಣಹತ್ಯೆ ಆರೋಪ; ಆಸ್ಪತ್ರೆ ಮೇಲೆ ಆರೋಗ್ಯಾಧಿಕಾರಿ ದಾಳಿ, ದೂರು ದಾಖಲು
ಈ ಹಿನ್ನಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಮಂಜುನಾಥ್, ಆಸರೆ ಆಸ್ಪತ್ರೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ನೆಲಮಂಗಲ ಟೌನ್ ಠಾಣೆಯಲ್ಲಿ ಡಾ.ರವಿಕುಮಾರ್ ವಿರುದ್ಧ ಮೊಕದ್ದಮೆ ಹೂಡಲಾಗಿತ್ತು. ಜೊತೆಗೆ ಐಪಿಸಿ ಸೆಕ್ಷನ್ 312, 313, 315, 316ರಡಿ ಕೇಸ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಇನ್ನು ಇದರ ಮಧ್ಯೆ ಇಂದು ಆರೋಗ್ಯಾಧಿಕಾರಿಗಳು ಸೇರಿದಂತೆ ಪೊಲೀಸರು ಪರಿಶೀಲನೆ ನಡೆಸಿದ್ದು, ಆಸ್ಪತ್ರೆಯಲ್ಲಿನ ಕೆಲ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ