AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡನ ಸಾವಿನ ಚಿಂತೆಯಲ್ಲೇ ಪ್ರಾಣಬಿಟ್ಟ ಮಹಿಳೆ: ಎರಡು ಪುಟ್ಟ ಮಕ್ಕಳು ಅನಾಥ

ಆಕೆಗೆ ಮುದ್ದಾದ ಎರಡು ಮಕ್ಕಳು. ಗಂಡನನ್ನ ಕಳೆದುಕೊಂಡ ಆಕೆ ಮಾನಸಿಕವಾಗಿ ಕುಗ್ಗಿದ್ದಳು. ದೇವರನ್ನ ನಂಬಿದ್ದ ಆಕೆಗೆ ಅದೇನಾಯ್ತೋ ಗೊತ್ತಿಲ್ಲ ಏನೂ ಕಾಣದ ಎರಡು ಮುದ್ದಾದ ಕಂದಮ್ಮಗಳನ್ನ ಅನಾಥ ಮಾಡಿ ಇಹಲೋಕ ತ್ಯಜಿಸಿದ್ದಾಳೆ. ಅಪ್ಪನಿಲ್ಲದ ಇಬ್ಬರು ಮಕ್ಕಳ ಜವಾಬ್ದಾರಿ ಹೊತ್ತು ಅವರ ಜೀವನ ರೂಪಿಸಬೇಕಿದ್ದ ತಾಯಿಯೇ ದುಡುಕಿನ ನಿರ್ಧಾರ ಕೈಗೊಂಡಿದ್ದು, ಇದೀಗ ತಂದೆ ತಾಯಿ ಇಲ್ಲದೇ ಪುಟ್ಟ ಪುಟ್ಟ ಮಕ್ಕಳು ಅನಾಥವಾಗಿವೆ.ಹಾಗಾದ್ರೆ, ಡೆತ್​​ ನೋಟ್​​ನಲ್ಲೇನಿದೆ? ಇಬ್ಬರು ಮಕ್ಕಳನ್ನ ಅನಾಥ ಮಾಡಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ಯಾಕೆ? ಎನ್ನುವ ವಿವರ ಇಲ್ಲಿದೆ.

ಗಂಡನ ಸಾವಿನ ಚಿಂತೆಯಲ್ಲೇ ಪ್ರಾಣಬಿಟ್ಟ ಮಹಿಳೆ: ಎರಡು ಪುಟ್ಟ ಮಕ್ಕಳು ಅನಾಥ
ಸೌಭಾಗ್ಯ
ರಮೇಶ್ ಬಿ. ಜವಳಗೇರಾ
|

Updated on: Dec 01, 2025 | 7:16 PM

Share

ನೆಲಮಂಗಲ (ಡಿಸೆಂಬರ್ 01): ಗಂಡನನ್ನು ಕಳೆದುಕೊಂಡು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ (Woman) ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. 31 ವರ್ಷದ ಸೌಭಾಗ್ಯ ಇಂದು (ಡಿಸೆಂಬರ್ 01) ತನ್ನಿಬ್ಬರು ಇಬ್ಬರು ಮಕ್ಕಳನ್ನು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಂಗಳೂರು ಉತ್ತರ (Bengaluru North) ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದೆ. ಎರಡು ವರ್ಷದ ಹಿಂದೆ ಗಂಡನನ್ನು ಕಳೆದುಕೊಂಡ ಬಳಿಕ ಮಾನಸಿಕವಾಗಿ ನೊಂದಿದ್ದ ಸೌಭಾಗ್ಯ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಇದರಿಂದಾಗಿ ಅಕೆಯ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ.

ಕೈವಾರ ಮೂಲದ ನಿವಾಸಿ ಬೆಂಗಳೂರಿನಲ್ಲಿ ವಾಸವಾಗಿದ್ದು, ತೋಟದಗುಡ್ಡದಹಳ್ಳಿಯ ಸಾಯಿ ರಾಮ ಲೇಔಟ್ ನಲ್ಲಿ ಸೌಭಾಗ್ಯ ತನ್ನಿಬ್ಬರು ಮಕ್ಕಳ ಜೊತೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ದೇವಸ್ಥಾನದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಮಕ್ಕಳನ್ನು ಸಾಕುತ್ತಿದ್ದರು. ದೇವಸ್ಥಾನ, ಮನೆ ಬಿಟ್ಟು ಸೌಭಾಗ್ಯ ಬೇರೆ ಕಡೆ ಎಲ್ಲೂ ಹೋಗುತ್ತಿರಲಿಲ್ಲ. ಆದ್ರೆ, ಗಂಡ ಸಾವಿನಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಡೆತ್ ನೋಟ್ ಬರೆದಿಟ್ಟು ಸೌಭಾಗ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು, ಕಾರಣ ನಿಗೂಢ

ಗಂಡ ಇಲ್ಲದಿದ್ದರೆ ಏನಂತೆ ಇಬ್ಬರು ಮುದ್ದಾದ ಮಕ್ಕಳಿಗೋಸ್ಕರವಾದರೂ ಸೌಭಾಗ್ಯ ಜೀವನ ಸಾಗಿಸಬೇಕಿತ್ತು. ಮಕ್ಕಳ ಅವರ ಮುಂದಿನ ಜೀವನ ರೂಪಿಸಬೇಕಿತ್ತು. ಆದ್ರೆ, ಸೌಭಾಗ್ಯ ದುಡುಕಿನ ನಿರ್ಧಾರ ಕೈಗೊಂಡು ಇದೀಗ ಪುಟ್ಟ ಮಕ್ಕಳನ್ನು ಅನಾಥ ಮಾಡಿದ್ದು ದುರಂತವೇ ಸರಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ