
ನೆಲಮಂಗಲ (ಡಿಸೆಂಬರ್ 01): ಗಂಡನನ್ನು ಕಳೆದುಕೊಂಡು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ (Woman) ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. 31 ವರ್ಷದ ಸೌಭಾಗ್ಯ ಇಂದು (ಡಿಸೆಂಬರ್ 01) ತನ್ನಿಬ್ಬರು ಇಬ್ಬರು ಮಕ್ಕಳನ್ನು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೆಂಗಳೂರು ಉತ್ತರ (Bengaluru North) ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದೆ. ಎರಡು ವರ್ಷದ ಹಿಂದೆ ಗಂಡನನ್ನು ಕಳೆದುಕೊಂಡ ಬಳಿಕ ಮಾನಸಿಕವಾಗಿ ನೊಂದಿದ್ದ ಸೌಭಾಗ್ಯ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಇದರಿಂದಾಗಿ ಅಕೆಯ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ.
ಕೈವಾರ ಮೂಲದ ನಿವಾಸಿ ಬೆಂಗಳೂರಿನಲ್ಲಿ ವಾಸವಾಗಿದ್ದು, ತೋಟದಗುಡ್ಡದಹಳ್ಳಿಯ ಸಾಯಿ ರಾಮ ಲೇಔಟ್ ನಲ್ಲಿ ಸೌಭಾಗ್ಯ ತನ್ನಿಬ್ಬರು ಮಕ್ಕಳ ಜೊತೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ದೇವಸ್ಥಾನದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಮಕ್ಕಳನ್ನು ಸಾಕುತ್ತಿದ್ದರು. ದೇವಸ್ಥಾನ, ಮನೆ ಬಿಟ್ಟು ಸೌಭಾಗ್ಯ ಬೇರೆ ಕಡೆ ಎಲ್ಲೂ ಹೋಗುತ್ತಿರಲಿಲ್ಲ. ಆದ್ರೆ, ಗಂಡ ಸಾವಿನಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಡೆತ್ ನೋಟ್ ಬರೆದಿಟ್ಟು ಸೌಭಾಗ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಗಂಡ ಇಲ್ಲದಿದ್ದರೆ ಏನಂತೆ ಇಬ್ಬರು ಮುದ್ದಾದ ಮಕ್ಕಳಿಗೋಸ್ಕರವಾದರೂ ಸೌಭಾಗ್ಯ ಜೀವನ ಸಾಗಿಸಬೇಕಿತ್ತು.
ಮಕ್ಕಳ ಅವರ ಮುಂದಿನ ಜೀವನ ರೂಪಿಸಬೇಕಿತ್ತು. ಆದ್ರೆ, ಸೌಭಾಗ್ಯ ದುಡುಕಿನ ನಿರ್ಧಾರ ಕೈಗೊಂಡು ಇದೀಗ ಪುಟ್ಟ ಮಕ್ಕಳನ್ನು ಅನಾಥ ಮಾಡಿದ್ದು ದುರಂತವೇ ಸರಿ.