Accident: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ: ಅಪಘಾತದಲ್ಲಿ ಅಕ್ಕ-ತಮ್ಮ ದುರ್ಮರಣ

ಡಾಬಾ ಬಳಿ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಕ್ಕೆ ಕಾರು ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿಯಾಗ್ತಿದ್ದಂತೆ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

Accident: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ: ಅಪಘಾತದಲ್ಲಿ ಅಕ್ಕ-ತಮ್ಮ ದುರ್ಮರಣ
ಅಪಘಾತದಲ್ಲಿ ನುಜ್ಜು ಗುಜ್ಜಾದ ಕಾರು.
Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Aug 22, 2022 | 8:32 AM

ಬೆಂಗಳೂರು ಗ್ರಾಮಾಂತರ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ (Accident) ಹೊಡೆದ ಪರಿಣಾಮ ಕಾರಿನಲ್ಲಿದ್ದ ಅಕ್ಕ-ತಮ್ಮ ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅಟ್ಟೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ಶಾಜಿಯಾ ಭಾನು(26) ಇಬ್ರಾಹಿಂ ಸಾಬ್(16) ಮೃತರು. ಡಾಬಾ ಬಳಿ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಕ್ಕೆ ಕಾರು ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿಯಾಗ್ತಿದ್ದಂತೆ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಮುರುಗಮಲ್ಲ ದರ್ಗಾಗೆ ಹೋಗಿ, ಚಿಂತಾಮಣಿಯಿಂದ ಬೈಲನರಸಾಪುರಕ್ಕೆ ಬಂದು ಟೀ ಕುಡಿದು ನಂತರ ಕೋಲಾರ ಹೆದ್ದಾರಿ ಮೂಲಕ ಕಾರು ವಾಪಸಾಗುತ್ತಿದ್ದಾಗ ಅಪಘಾತ ನಡೆದಿದೆ. ಕಾರಿನಲ್ಲಿ ಒಂದೇ ಕುಟುಂಬದ 9 ಜನರು ಪ್ರಯಾಣಿಸುತ್ತಿದ್ದರು. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಅಸಭ್ಯ ವರ್ತನೆ ಬಗ್ಗೆ ಪೋಷಕರಿಗೆ ತಿಳಿಸಿದ್ದಕ್ಕೆ ಬಾಲಕಿಗೆ ಚಾಕು ಇರಿದು ಕೊಲೆ; ಆತ್ಮಹತ್ಯೆ ಮಾಡಿಕೊಂಡ ಆರೋಪಿ

ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ ಸವಾರ ಸಾವು

ತುಮಕೂರು: ಬೈಕ್​​ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿರುವಂತಹ ಘಟನೆ ತುಮಕೂರು ತಾಲೂಕಿನ ಅಜ್ಜಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಘಟನೆ ನಡೆದಿದೆ. ಮೃತನ ಗುರುತು ಪತ್ತೆಯಾಗಿಲ್ಲ. ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಇದನ್ನೂ ಓದಿ: Crime News: ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು, ಬೆಂಗಳೂರಿನಲ್ಲೊಂದು ಭೀಕರ ರಸ್ತೆ ಅಪಘಾತ

ಹಳಿಯಾಳ: ಅಪಘಾತ, ಇಬ್ಬರು ಸಾವು

ಧಾರವಾಡ: ಖಾಸಗಿ ಬಸ್, ಕ್ರೂಸರ್​ ಮುಖಾಮುಖಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಕಲಘಟಗಿ ತಾಲೂಕಿನ ಧಾರವಾಡ ಕ್ರಾಸ್ ಬಳಿ ನಡೆದಿದೆ. ಮೃತರು ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ನಂದಿಗದ್ದಿ ಗ್ರಾಮದವರು ಎಂದು ತಿಳಿದುಬಂದಿದೆ. ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ವಿವರಗಳು ತಿಳಿದುಬರಬೇಕಿದೆ.

ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಐವರು ಆರೋಪಿಗಳ ಬಂಧನ

ವಿಜಯನಗರ: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಐವರು ಆರೋಪಿಗಳನ್ನು ಹೊಸಪೇಟೆ ಟೌನ್​ ಠಾಣೆ ಪೊಲೀಸರು ಬಂಧಿಸಿದ್ದಾರೆ. 500 ರೂಪಾಯಿ ಮುಖಬೆಲೆಯ 312 ಖೋಟಾ ನೋಟುಗಳ ಜಪ್ತಿ ಮಾಡಲಾಗಿದೆ. ಕುಬೇರಪ್ಪ ತಳವಾರ, ರುದ್ರೇಶ ಎಸ್.ರಾಜೇಶ್, ಪ್ರಕಾಶ, ರವಿ ಬಂಧಿತ ಆರೋಪಿಗಳು.  ಆರೋಪಿಗಳು ವೆಂಕಟೇಶ್ವರ ಲಾಡ್ಜ್​ನಲ್ಲಿ ಖೋಟಾನೋಟು ಚಲಾವಣೆಗೆ ಯತ್ನಿಸಿದ್ದರು. ಹೊಸಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 6:48 am, Mon, 22 August 22