ಸ್ವಾತಂತ್ರ್ಯ ದಿನಾಚರಣೆಯಂದೇ ತಾಲ್ಲೂಕು ಕಚೇರಿ ಮೇಲಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕು ಕಛೇರಿ ಮೇಲಿಂದ ಬಿದ್ದು ಬಿಹಾರ ಮೂಲದ ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ವಾತಂತ್ರ್ಯ ದಿನಾಚರಣೆಯಂದೇ ತಾಲ್ಲೂಕು ಕಚೇರಿ ಮೇಲಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ
ಹೊಸಕೋಟೆ
Follow us
ನವೀನ್ ಕುಮಾರ್ ಟಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 15, 2023 | 1:23 PM

ಬೆಂಗಳೂರು ಗ್ರಾಮಾಂತರ, ಆ.15: ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಅದರಂತೆ ಇದೀಗ ಸ್ವಾತಂತ್ರ್ಯ ದಿನಾಚರಣೆಯಂದೆ ಹೊಸಕೋಟೆ (hosakote) ತಾಲ್ಲೂಕು ಕಛೇರಿ ಮೇಲಿಂದ ಬಿದ್ದು ಬಿಹಾರ(Bihar) ಮೂಲದ ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರೇಮ್ ಬಾಸ್ಕಿ, ತಾಲ್ಲೂಕು ಕಛೇರಿ ಮಹಡಿ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇನ್ನು ಇತನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಲಿಸುತ್ತಿದ್ದ ಕ್ರೇನ್​ನಿಂದ ಬಿದ್ದು ಕಾರ್ಮಿಕ ಸಾವು

ನೆಲಮಂಗಲ: ಚಲಿಸುತ್ತಿದ್ದ ಕ್ರೇನ್​ನಿಂದ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಅನುರಾಗ್(27)ಮೃತ ವ್ಯಕ್ತಿ. ಇತ SNC ಕನ್ಸ್ಟ್ರಕ್ಷನ್ ಹೆಸರಿನ ಗುತ್ತಿಗೆ ಕಂಪನಿಯಲ್ಲಿ, ದಾಬಸ್ ಪೇಟೆ-ದೇವನಹಳ್ಳಿ ರಸ್ತೆ ಕಾಮಗಾರಿ ಕೆಲಸ ಮಾಡುತ್ತಿರುವಾಗ ಈ ಅವಘಡ ನಡೆದಿದೆ. ಕಳೆದ5ತಿಂಗಳ ಹಿಂದೆಯಷ್ಟೇ ಕೆಲಸಕ್ಕೆ ಸೇರಿದ್ದನು. ಇದೀಗ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ತ್ಯಾಮಗೊಡ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಂಗಳೂರು ಗ್ರಾಮಾಂತರ: ಡಿಪೋದಲ್ಲಿ ನೇಣು ಬಿಗಿದುಕೊಂಡು ಬಿಎಂಟಿಸಿ ಡ್ರೈವರ್​ ಕಂ ಕಂಡಕ್ಟರ್​ ಆತ್ಮಹತ್ಯೆ

ಚಿತ್ರದುರ್ಗದಲ್ಲಿ ಬೀಗ ಮುರಿದು ಮನೆ ಕಳ್ಳತನ

ಚಿತ್ರದುರ್ಗ: ನಗರದ ಬ್ಯಾಂಕ್ ಕಾಲೋನಿಯಲ್ಲಿರುವ ನಿವೃತ್ತ ಉಪನ್ಯಾಸಕರ ಮನೆಯಲ್ಲಿ ಕಳ್ಳತನ ನಡೆದಿದೆ. ನಿವೃತ್ತ ಉಪನ್ಯಾಸಕ ರಂಗಪ್ಪ ಎಂಬುವವರ ಮನೆಯಲ್ಲಿಯೇ ಖದೀಮರು ಕೈ ಚಳಕ ತೋರಿಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ನಿನ್ನೆ(ಆ.14)ರ ರಾತ್ರಿ, ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಕಳ್ಳತನ ಮಾಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಬಡಾವಣೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್