ಸ್ವಾತಂತ್ರ್ಯ ದಿನಾಚರಣೆಯಂದೇ ತಾಲ್ಲೂಕು ಕಚೇರಿ ಮೇಲಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕು ಕಛೇರಿ ಮೇಲಿಂದ ಬಿದ್ದು ಬಿಹಾರ ಮೂಲದ ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ವಾತಂತ್ರ್ಯ ದಿನಾಚರಣೆಯಂದೇ ತಾಲ್ಲೂಕು ಕಚೇರಿ ಮೇಲಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ
ಹೊಸಕೋಟೆ
Edited By: ಕಿರಣ್ ಹನುಮಂತ್​ ಮಾದಾರ್

Updated on: Aug 15, 2023 | 1:23 PM

ಬೆಂಗಳೂರು ಗ್ರಾಮಾಂತರ, ಆ.15: ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಅದರಂತೆ ಇದೀಗ ಸ್ವಾತಂತ್ರ್ಯ ದಿನಾಚರಣೆಯಂದೆ ಹೊಸಕೋಟೆ (hosakote) ತಾಲ್ಲೂಕು ಕಛೇರಿ ಮೇಲಿಂದ ಬಿದ್ದು ಬಿಹಾರ(Bihar) ಮೂಲದ ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರೇಮ್ ಬಾಸ್ಕಿ, ತಾಲ್ಲೂಕು ಕಛೇರಿ ಮಹಡಿ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇನ್ನು ಇತನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಲಿಸುತ್ತಿದ್ದ ಕ್ರೇನ್​ನಿಂದ ಬಿದ್ದು ಕಾರ್ಮಿಕ ಸಾವು

ನೆಲಮಂಗಲ: ಚಲಿಸುತ್ತಿದ್ದ ಕ್ರೇನ್​ನಿಂದ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಅನುರಾಗ್(27)ಮೃತ ವ್ಯಕ್ತಿ. ಇತ SNC ಕನ್ಸ್ಟ್ರಕ್ಷನ್ ಹೆಸರಿನ ಗುತ್ತಿಗೆ ಕಂಪನಿಯಲ್ಲಿ, ದಾಬಸ್ ಪೇಟೆ-ದೇವನಹಳ್ಳಿ ರಸ್ತೆ ಕಾಮಗಾರಿ ಕೆಲಸ ಮಾಡುತ್ತಿರುವಾಗ ಈ ಅವಘಡ ನಡೆದಿದೆ. ಕಳೆದ5ತಿಂಗಳ ಹಿಂದೆಯಷ್ಟೇ ಕೆಲಸಕ್ಕೆ ಸೇರಿದ್ದನು. ಇದೀಗ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ತ್ಯಾಮಗೊಡ್ಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ
ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಂಗಳೂರು ಗ್ರಾಮಾಂತರ: ಡಿಪೋದಲ್ಲಿ ನೇಣು ಬಿಗಿದುಕೊಂಡು ಬಿಎಂಟಿಸಿ ಡ್ರೈವರ್​ ಕಂ ಕಂಡಕ್ಟರ್​ ಆತ್ಮಹತ್ಯೆ

ಚಿತ್ರದುರ್ಗದಲ್ಲಿ ಬೀಗ ಮುರಿದು ಮನೆ ಕಳ್ಳತನ

ಚಿತ್ರದುರ್ಗ: ನಗರದ ಬ್ಯಾಂಕ್ ಕಾಲೋನಿಯಲ್ಲಿರುವ ನಿವೃತ್ತ ಉಪನ್ಯಾಸಕರ ಮನೆಯಲ್ಲಿ ಕಳ್ಳತನ ನಡೆದಿದೆ. ನಿವೃತ್ತ ಉಪನ್ಯಾಸಕ ರಂಗಪ್ಪ ಎಂಬುವವರ ಮನೆಯಲ್ಲಿಯೇ ಖದೀಮರು ಕೈ ಚಳಕ ತೋರಿಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ನಿನ್ನೆ(ಆ.14)ರ ರಾತ್ರಿ, ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಕಳ್ಳತನ ಮಾಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಬಡಾವಣೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us