AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತಿ ಎಕ್ಸಪ್ರೇಸ್ ರೈಲಿನ ಡೆಸ್ಟ್ ಬಿನ್​ನಲ್ಲಿ ನವಜಾತ ಗಂಡು ಮಗು ಪತ್ತೆ

ಭುವನೇಶ್ವರದಿಂದ ಯಲಹಂಕಕ್ಕೆ ಬಂದ ಪ್ರಶಾಂತಿ ಎಕ್ಸಪ್ರೇಸ್ ರೈಲಿನ ಡೆಸ್ಟ್ ಬಿನ್​ನಲ್ಲಿ ನವಜಾತ ಗಂಡು ಮಗು ಪತ್ತೆಯಾಗಿದೆ. ರೈಲಿನಲ್ಲೇ ಹೆರಿಗೆಯಾಗಿದ್ದು ತಾಯಿ ಮಗುವನ್ನು ಡಸ್ಟ್ ಬಿನ್​ಗೆ ಎಸೆದು ಹೋಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ನವಜಾತ ಶಿಶುವನ್ನ ಶವಾಗಾರಕ್ಕೆ ರವಾನಿಸಿ ತನಿಖೆ ನಡೆಸಲಾಗುತ್ತಿದೆ.

ಪ್ರಶಾಂತಿ ಎಕ್ಸಪ್ರೇಸ್ ರೈಲಿನ ಡೆಸ್ಟ್ ಬಿನ್​ನಲ್ಲಿ ನವಜಾತ ಗಂಡು ಮಗು ಪತ್ತೆ
ಪ್ರಶಾಂತಿ ಎಕ್ಸಪ್ರೇಸ್ ರೈಲಿನ ಡೆಸ್ಟ್ ಬಿನ್​ನಲ್ಲಿ ನವಜಾತ ಗಂಡು ಮಗು ಪತ್ತೆ
ನವೀನ್ ಕುಮಾರ್ ಟಿ
| Edited By: |

Updated on: Jun 27, 2024 | 12:04 PM

Share

ದೇವನಹಳ್ಳಿ, ಜೂನ್.27: ಭುವನೇಶ್ವರದಿಂದ ಬೆಂಗಳೂರಿಗೆ ಬಂದ ಪ್ರಶಾಂತಿ ಎಕ್ಸಪ್ರೇಸ್ ರೈಲಿನ ಡೆಸ್ಟ್ ಬಿನ್​ನಲ್ಲಿ ನವಜಾತ (Enfant) ಗಂಡು ಮಗು ಪತ್ತೆಯಾಗಿದೆ. ನಿನ್ನೆ ಮುಂಜಾನೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಿಳಿ ಬಟ್ಟೆಯಲ್ಲಿ ಸುತ್ತಿ ಡಸ್ಟ್ ಬಿನ್​ಗೆ ಶಿಶುವನ್ನು ಹಾಕಲಾಗಿತ್ತು. ಯಲಹಂಕಕ್ಕೆ ರೈಲು (Yelahanka Railway Station) ಬಂದ ವೇಳೆ ಡಸ್ಟ್ ಬಿನ್ ನಲ್ಲಿ ಶಿಶು ಪತ್ತೆಯಾಗಿದೆ. ರೈಲಿನಲ್ಲೇ ಹೆರಿಗೆಯಾಗಿದ್ದು ತಾಯಿ ಮಗುವನ್ನು ಡಸ್ಟ್ ಬಿನ್​ಗೆ ಎಸೆದು ಹೋಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ನವಜಾತ ಶಿಶುವನ್ನ ಶವಾಗಾರಕ್ಕೆ ರವಾನಿಸಿ ಯಶವಂತಪುರ ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಕ್ಕಳ ಮಾರಾಟ ಜಾಲ ಪತ್ತೆ

ಕಿಡ್ನಾಪ್ ಮಾಡಿ ಮಾರಾಟ ಮಾಡುತ್ತಿದ್ದ ಮಕ್ಕಳ ಮಾರಾಟ ಜಾಲವನ್ನು ತುಮಕೂರು ಪೊಲೀಸರು ಭೇದಿಸಿದ್ದಾರೆ. ಅಲ್ದೇ ಮಾರಾಟವಾಗಿದ್ದ 9 ಮಕ್ಕಳನ್ನು ಪತ್ತೆಹಚ್ಚಿದ್ದಾರೆ. ಗುಬ್ಬಿಯಲ್ಲಿ 11 ತಿಂಗಳ ಮಗು ಕಿಡ್ನಾಪ್ ಕೇಸ್ ಬೆನ್ನತ್ತಿದಾಗ ಈ ಜಾಲ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ 5 ಮಂದಿ ಮಕ್ಕಳನ್ನು ರಕ್ಷಣೆ ಮಾಡಲಾಗಿದ್ದು, 1 ಮಗು ಸಾವನ್ನಪ್ಪಿದೆ. ಜೊತೆಗೆ ಇನ್ನೂ 3 ಮಕ್ಕಳಿಗಾಗಿ ಶೋಧ ನಡೆಸಲಾಗ್ತಿದೆ.

ಇದನ್ನೂ ಓದಿ: ಬೆಂಗಳೂರು ಗಡಿಭಾಗದ ಹೊಸೂರಿನಲ್ಲಿ ಹೊಸ ಏರ್ಪೋರ್ಟ್ ನಿರ್ಮಾಣಕ್ಕೆ ತಮಿಳುನಾಡು ಸರ್ಕಾರ ನಿರ್ಧಾರ

2ರಿಂದ 3 ಲಕ್ಷ ರೂಪಾಯಿಗೆ ಮಾರಾಟ

ಗರ್ಭ ಧರಿಸಿದ ಅವಿವಾಹಿತ ಮಹಿಳೆಯರು ಹಾಗೂ ಅನೈತಿಕ ಗರ್ಭ ಧರಿಸಿದವರಿಂದ ಮಕ್ಕಳನ್ನು ಖರೀದಿ ಮಾಡಿ 2ರಿಂದ 3 ಲಕ್ಷ ರೂ.ಗೆ ಮಾರಾಟ ಮಾಡಲಾಗುತ್ತಿತ್ತು. ನರ್ಸ್​ಗಳಾದ ಎನ್​​.ಪೂರ್ಣಿಮಾ, ಸೌಜನ್ಯ, ಯು.ಡಿ.ಮಹೇಶ್​​​​​​​, ಮಹಬೂಬ್​ ಪಾಷಾ, ಕೆ.ಎನ್​​.ರಾಮಕೃಷ್ಣ, ಹನುಮಂತರಾಜು, ಮುಬಾರಕ್​ ಪಾಷಾನನ್ನ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಗೊಲ್ಲಹಳ್ಳಿ, ದಾವಣಗೆರೆ, ಮಂಡ್ಯ ಸೇರಿ ಹಲವೆಡೆ ಈ ಬಂಧಿತರು ಮಕ್ಕಳನ್ನು ಮಾರಾಟ ಮಾಡಿದ್ದಾರೆ ಅಂತಾ ಬಯಲಾಗಿದೆ.

‘ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ನಿಗಾ’

ಮಕ್ಕಳ ಮಾರಾಟ ಜಾಲ ಬಗ್ಗೆ ಮಾಹಿತಿ ನೀಡಿದ ತುಮಕೂರು ಎಸ್ಪಿ ಅಶೋಕ್​, ಬಂಧಿತ ಆರೋಪಿಗಳು ಖಾಸಗಿ ನರ್ಸಿಂಗ್ ಹೋಮ್, ಖಾಸಗಿ ಆಸ್ಪತ್ರೆ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದರು ಅಂತಾ ಹೇಳಿದ್ರು. ಅಲ್ದೇ ಆರೋಪಿಗಳ ಜತೆ ನಂಟಿದ್ದ ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ನಿಗಾ ಇಡಲಾಗಿದ್ದು, ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ ಅಂತಾ ಹೇಳಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!