AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘಾಟಿ ಸುಬ್ರಹ್ಮಣ್ಯ: ರಥೋತ್ಸವ ನೋಡಲು ಬಂದ ವ್ಯಕ್ತಿ ಬಸ್​ ಅಡಿ ಬಿದ್ದು ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯದಲ್ಲಿ ಇಂದು ಬ್ರಹ್ಮ ರಥೋತ್ಸವದ ವೇಳೆ ಅನಾಹುತವೊಂದು ತಪ್ಪಿತ್ತು. ರಥದಡಿ ಬಿದ್ದ ಮಹಿಳೆಯನ್ನು ಪೊಲೀಸರು ಹಾಗೂ ಜನರು ಕೂಡಲೇ ಎಳೆದಿದ್ದರಿಂದ ಜೀವ ಉಳಿದಿತ್ತು. ಆದರೆ, ಈ ರಥೋತ್ಸವ ನೋಡಲೆಂದು ತರಾತುರಿಯಲ್ಲಿ ಬಸ್​ನಿಂದ ಕೆಳಗೆ ಇಳಿಯುತ್ತಿದ್ದಾಗ ಆಯತಪ್ಪಿ ಚಕ್ರದಡಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ಘಾಟಿ ಸುಬ್ರಹ್ಮಣ್ಯ: ರಥೋತ್ಸವ ನೋಡಲು ಬಂದ ವ್ಯಕ್ತಿ ಬಸ್​ ಅಡಿ ಬಿದ್ದು ಸಾವು
ಘಾಟಿ ಸುಬ್ರಹ್ಮಣ್ಯದಲ್ಲಿ ರಥೋತ್ಸವ ನೋಡಲು ಬಂದ ವ್ಯಕ್ತಿ ಬಸ್​ ಅಡಿ ಬಿದ್ದು ಸಾವು
ನವೀನ್ ಕುಮಾರ್ ಟಿ
| Edited By: Rakesh Nayak Manchi|

Updated on: Jan 16, 2024 | 5:04 PM

Share

ದೊಡ್ಡಬಳ್ಳಾಪುರ, ಜ.16: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಘಾಟಿ ಸುಬ್ರಹ್ಮಣ್ಯದಲ್ಲಿ (Ghati Subramanya) ಇಂದು ಬ್ರಹ್ಮ ರಥೋತ್ಸವದ ವೇಳೆ ಭಾರೀ ಅನಾಹುತವೊಂದು ತಪ್ಪಿತ್ತು. ರಥದಡಿ ಬಿದ್ದ ಮಹಿಳೆಯನ್ನು ಪೊಲೀಸರು ಹಾಗೂ ಜನರು ಕೂಡಲೇ ಎಳೆದಿದ್ದರಿಂದ ಜೀವ ಉಳಿದಿತ್ತು. ಆದರೆ, ಈ ರಥೋತ್ಸವ ನೋಡಲೆಂದು ತರಾತುರಿಯಲ್ಲಿ ಬಸ್​ನಿಂದ ಕೆಳಗೆ ಇಳಿಯುತ್ತಿದ್ದಾಗ ಆಯತಪ್ಪಿ ಚಕ್ರದಡಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ಘಾಟಿ ಸಮೀಪದ ವಿಶ್ವೇಶ್ವರಯ್ಯ ಪಿಕಪ್ ಡ್ಯಾಮ್​ ಬಳಿ ಬಸ್​ನಿಂದ ತರಾತುರಿಯಲ್ಲಿ ಇಳಿಯಲು ಮುಂದಾದಾಗ ಆಯತಪ್ಪಿ ಬಸ್ ಅಡಿ ಬಿದ್ದಿದ್ದಾರೆ. ಈ ವೇಳೆ ಹಿಂಬದಿ ಚಕ್ರ ವ್ಯಕ್ತಿ ಮೇಲೆ ಹರಿದಿದ್ದು, ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿ ಘಾಟಿ ಸುಬ್ರಹ್ಮಣ್ಯದಲ್ಲಿ ಬ್ರಹ್ಮ ರಥೋತ್ಸವ ನೋಡಲು ಬಂದಿದ್ದ ಎಂದು ತಿಳಿದುಬಂದಿದೆ. ಮೃತನ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ: ದೊಡ್ಡಬಳ್ಳಾಪುರ: ಘಾಟಿ ಸುಬ್ರಹ್ಮಣ್ಯ ರಥೋತ್ಸವದಲ್ಲಿ ತಪ್ಪಿದ ಅನಾಹುತ: ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ

ಪುಷ್ಯ ಶುದ್ದ ಷಷ್ಟಿ ಹಿನ್ನೆಲೆಯಲ್ಲಿ ಇಂದು ಘಾಟಿ ಸುಬ್ರಮಣ್ಯದಲ್ಲಿ ಬ್ರಹ್ಮ ರಥೋತ್ಸವ ನಡೆಯಿತು. ಮದ್ಯಾಹ್ನ 12.15ಕ್ಕೆ ರಥೋತ್ಸವಕ್ಕೆ ಚಾಲನೆ ನೀಡಲಾಗಿತ್ತು. ಅದರಂತೆ ರಥ ಎಳೆಯುವ ವೇಳೆ ಭಾರೀ ಜನಜಂಗುಳಿಯಿಂದ ಮಹಿಳೆಯೊಬ್ಬರು ರಥದ ಚಕ್ರದಡಿ ಬಿದಿದ್ದು, ಕೂಡಲೇ ಎಚ್ಚೆತ್ತ ಪೊಲೀಸರು ಹಾಗೂ ಸ್ಥಳೀಯರು ಮಹಿಳೆಯನ್ನು ಎಳೆದಿದ್ದರು. ಪರಿಣಾಮ ಕೂದಲೆಳೆ ಅಂತರದಲ್ಲಿ ಮಹಿಳೆ ಅಪಾಯದಿಂದ ಪಾರಾಗಿದ್ದರು.

ಶಾಲಾವಾಹನ‌ ಅಪಘಾತ; ಮಕ್ಕಳಿಗೆ ಗಾಯ

ರಾಮನಗರ: ಮಕ್ಕಳನ್ನು ಮನೆಗೆ ಕೊಂಡೊಯ್ಯುತ್ತಿದ್ದ ಶಾಲಾವಾಹನ‌ ಅಪಘಾತಕ್ಕೀಡಾದ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೆಂಗಲ್ ಬಳಿ ನಡೆದಿದೆ. ಟಾಟಾ‌ ಏಸ್ ವಾಹನಕ್ಕೆ ಶಾಲಾ ವಾಹನ ಡಿಕ್ಕಿ ಹೊಡೆದಿದ್ದು, ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದ ಬಳಿಕ ಮಕ್ಕಳು ಶಾಕ್​ಗೆ ಒಳಗಾಗಿದ್ದಾರೆ. ಶಾಲಾ ವಾಹನ ಚಾಲ ಕುಡಿದಿರುವ ಆರೋಪ ಕೇಳಿಬಂದಿದ್ದು, ಚನ್ನಪಟ್ಟಣ ಗ್ರಾಮಾಂತರ ಠಾಣಾ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು