ದೊಡ್ಡಬಳ್ಳಾಪುರ, ಜ.16: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಘಾಟಿ ಸುಬ್ರಹ್ಮಣ್ಯದಲ್ಲಿ (Ghati Subramanya) ಇಂದು ಬ್ರಹ್ಮ ರಥೋತ್ಸವದ ವೇಳೆ ಭಾರೀ ಅನಾಹುತವೊಂದು ತಪ್ಪಿತ್ತು. ರಥದಡಿ ಬಿದ್ದ ಮಹಿಳೆಯನ್ನು ಪೊಲೀಸರು ಹಾಗೂ ಜನರು ಕೂಡಲೇ ಎಳೆದಿದ್ದರಿಂದ ಜೀವ ಉಳಿದಿತ್ತು. ಆದರೆ, ಈ ರಥೋತ್ಸವ ನೋಡಲೆಂದು ತರಾತುರಿಯಲ್ಲಿ ಬಸ್ನಿಂದ ಕೆಳಗೆ ಇಳಿಯುತ್ತಿದ್ದಾಗ ಆಯತಪ್ಪಿ ಚಕ್ರದಡಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಘಾಟಿ ಸಮೀಪದ ವಿಶ್ವೇಶ್ವರಯ್ಯ ಪಿಕಪ್ ಡ್ಯಾಮ್ ಬಳಿ ಬಸ್ನಿಂದ ತರಾತುರಿಯಲ್ಲಿ ಇಳಿಯಲು ಮುಂದಾದಾಗ ಆಯತಪ್ಪಿ ಬಸ್ ಅಡಿ ಬಿದ್ದಿದ್ದಾರೆ. ಈ ವೇಳೆ ಹಿಂಬದಿ ಚಕ್ರ ವ್ಯಕ್ತಿ ಮೇಲೆ ಹರಿದಿದ್ದು, ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿ ಘಾಟಿ ಸುಬ್ರಹ್ಮಣ್ಯದಲ್ಲಿ ಬ್ರಹ್ಮ ರಥೋತ್ಸವ ನೋಡಲು ಬಂದಿದ್ದ ಎಂದು ತಿಳಿದುಬಂದಿದೆ. ಮೃತನ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ.
ಇದನ್ನೂ ಓದಿ: ದೊಡ್ಡಬಳ್ಳಾಪುರ: ಘಾಟಿ ಸುಬ್ರಹ್ಮಣ್ಯ ರಥೋತ್ಸವದಲ್ಲಿ ತಪ್ಪಿದ ಅನಾಹುತ: ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ
ಪುಷ್ಯ ಶುದ್ದ ಷಷ್ಟಿ ಹಿನ್ನೆಲೆಯಲ್ಲಿ ಇಂದು ಘಾಟಿ ಸುಬ್ರಮಣ್ಯದಲ್ಲಿ ಬ್ರಹ್ಮ ರಥೋತ್ಸವ ನಡೆಯಿತು. ಮದ್ಯಾಹ್ನ 12.15ಕ್ಕೆ ರಥೋತ್ಸವಕ್ಕೆ ಚಾಲನೆ ನೀಡಲಾಗಿತ್ತು. ಅದರಂತೆ ರಥ ಎಳೆಯುವ ವೇಳೆ ಭಾರೀ ಜನಜಂಗುಳಿಯಿಂದ ಮಹಿಳೆಯೊಬ್ಬರು ರಥದ ಚಕ್ರದಡಿ ಬಿದಿದ್ದು, ಕೂಡಲೇ ಎಚ್ಚೆತ್ತ ಪೊಲೀಸರು ಹಾಗೂ ಸ್ಥಳೀಯರು ಮಹಿಳೆಯನ್ನು ಎಳೆದಿದ್ದರು. ಪರಿಣಾಮ ಕೂದಲೆಳೆ ಅಂತರದಲ್ಲಿ ಮಹಿಳೆ ಅಪಾಯದಿಂದ ಪಾರಾಗಿದ್ದರು.
ರಾಮನಗರ: ಮಕ್ಕಳನ್ನು ಮನೆಗೆ ಕೊಂಡೊಯ್ಯುತ್ತಿದ್ದ ಶಾಲಾವಾಹನ ಅಪಘಾತಕ್ಕೀಡಾದ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೆಂಗಲ್ ಬಳಿ ನಡೆದಿದೆ. ಟಾಟಾ ಏಸ್ ವಾಹನಕ್ಕೆ ಶಾಲಾ ವಾಹನ ಡಿಕ್ಕಿ ಹೊಡೆದಿದ್ದು, ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದ ಬಳಿಕ ಮಕ್ಕಳು ಶಾಕ್ಗೆ ಒಳಗಾಗಿದ್ದಾರೆ. ಶಾಲಾ ವಾಹನ ಚಾಲ ಕುಡಿದಿರುವ ಆರೋಪ ಕೇಳಿಬಂದಿದ್ದು, ಚನ್ನಪಟ್ಟಣ ಗ್ರಾಮಾಂತರ ಠಾಣಾ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ