ದಾಸರಹಳ್ಳಿಲ್ಲೊಬ್ಬ ಸೈಕೋಪಾತ್‌ ತಂದೆ: ಬಿಸಿ ನೀರು ಕಾಯಿಸುವ ಹೀಟರ್‌ನಿಂದ ಪುಟ್ಟ ಮಕ್ಕಳಿಗೆ ಬರೆ

ಬೆಂಗಳೂರಿನ ದಾಸರಹಳ್ಳಿಯಲ್ಲಿ ಓರ್ವ ಮಲ ತಂದೆ ತನ್ನ 9 ಮತ್ತು 6 ವರ್ಷದ ಮಕ್ಕಳಿಗೆ ಬಿಸಿನೀರಿನ ಹೀಟರ್‌ನಿಂದ ಬರೆ ಎಳೆದಿರುವ ಘಟನೆ ಬೆಳಕಿಗೆ ಬಂದಿದೆ. ಮಕ್ಕಳು ತೀಟೆ ಮಾಡುತ್ತಾರೆ ಎಂದು ಆರೋಪಿಸಿ ಈ ಕೃತ್ಯ ಎಸಗಿದ್ದಾರೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಮಕ್ಕಳನ್ನು ರಕ್ಷಿಸಿ ತಾಯಿಗೆ ತಿಳಿಸಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾಸರಹಳ್ಳಿಲ್ಲೊಬ್ಬ ಸೈಕೋಪಾತ್‌ ತಂದೆ: ಬಿಸಿ ನೀರು ಕಾಯಿಸುವ ಹೀಟರ್‌ನಿಂದ ಪುಟ್ಟ ಮಕ್ಕಳಿಗೆ ಬರೆ
ದಾಸರಹಳ್ಳಿಲ್ಲೊಬ್ಬ ಸೈಕೋಪಾತ್‌ ತಂದೆ: ಬಿಸಿ ನೀರು ಕಾಯಿಸುವ ಹೀಟರ್‌ನಿಂದ ಪುಟ್ಟ ಮಕ್ಕಳಿಗೆ ಬರೆ
Follow us
ಬಿ ಮೂರ್ತಿ, ನೆಲಮಂಗಲ
| Updated By: ಗಂಗಾಧರ​ ಬ. ಸಾಬೋಜಿ

Updated on:Jan 26, 2025 | 6:14 PM

ನೆಲಮಂಗಲ, ಜನವರಿ 26: ಬೆಳಗಾವಿಯಲ್ಲಿ ಇತ್ತೀಚೆಗೆ ತನ್ನ 4 ವರ್ಷದ ಮಗಳಿಗೆ ಮಲತಾಯಿ ಚಿತ್ರಹಿಂಸೆ ನೀಡಿದ್ದ ಘಟನೆ ನಡೆದಿತ್ತು. ಇದೀಗ ಇಂತಹದ್ದೇ ಘಟನೆಯೊಂದು ಬೆಂಗಳೂರಿನ ದಾಸರಹಳ್ಳಿಯ ಮಲ್ಲಸಂದ್ರದಲ್ಲಿ ನಡೆದಿದೆ. ಆದರೆ ಇಲ್ಲಿ ಮಲ ತಂದೆ (Father) ತನ್ನ ಮಕ್ಕಳನ್ನು ಮನೆಯಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡಿದ್ದಾರೆ. ಸದ್ಯ ಬಾಗಲಗುಂಟೆ ಠಾಣೆಯ ಪೊಲೀಸರು ಮಕ್ಕಳನ್ನು ರಕ್ಷಿಸಿದ್ದಾರೆ. ರಾಕ್ಷಸ ಅಪ್ಪನ ಕ್ರೂರತನವನ್ನು ಎಳೆಎಳೆಯಾಗಿ ಮಕ್ಕಳು ಬಿಚ್ಚಿಟ್ಟಿದ್ದಾರೆ.

ಬೆಂಗಳೂರಿನ ದಾಸರಹಳ್ಳಿಯ ಮಲ್ಲಸಂದ್ರದ ನಿವಾಸಿಯಾಗಿರುವ ಸಂತೋಷ್‌ನಿಂದ ಕೃತ್ಯವೆಸಗಲಾಗಿದೆ. ಮಕ್ಕಳು ಹೇಳಿದ ಮಾತು ಕೇಳಲ್ಲ ಎಂದು ತನ್ನ 9 ವರ್ಷದ ಹೆಣ್ಣು ಮಗು ಮತ್ತು 6 ವರ್ಷದ ಗಂಡು ಮಗುವಿಗೆ ನೀರು ಬಿಸಿ ಮಾಡುವ ಹೀಟರ್‌ನಿಂದ ಬರೆ ಎಳೆದಿದ್ದಾರೆ. ಹೀಟರ್‌ನಿಂದ ಬರೆ ಹಾಕಿದ್ದರಿಂದ ಪುಟ್ಟ ಮಕ್ಕಳು ಗಾಯಗೊಂಡಿದ್ದಾರೆ. ಸಪ್ತಗಿರಿ ಆಸ್ಪತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: ಬೆಳ್ಳಿ ಅಂಗಡಿಗೆ ಬರ್ತಿದ್ದ ವ್ಯಾಪಾರಿಯಿಂದ ಕಳ್ಳತನ: ಇಬ್ಬರ ಬಂಧನ, 12 ಕೆಜಿ ಬೆಳ್ಳಿ ವಶಕ್ಕೆ

ಮಧುಗಿರಿ ಮೂಲದ ಸಂತೋಷ್ ಬಾಡಿಗೆ ಮನೆಯಲ್ಲಿ ವಾಸವಿದ್ದು, ಖಾಸಗಿ ಕಂಪನಿಯ ಮೊಬೈಲ್‌ ಟವರ್‌ ಮೆಕ್ಯಾನಿಕ್‌ ಆಗಿದ್ದಾರೆ. ಯಶವಂತಪುರದ ಮೊಬೈಲ್ ಶಾಪ್‌ನಲ್ಲಿ ಪತ್ನಿ ಅಂಜಲಿ ಕೂಡ ಕೆಲಸ ಮಾಡುತ್ತಾರೆ. ದಿನ ನಿತ್ಯ ಮಕ್ಕಳನ್ನು ಶಾಲೆಗೆ ಕಳಿಸದೆ ಮನೆಯಲ್ಲಿ ತಂದೆ ಸಂತೋಷ್‌ ಕೂಡಿ ಹಾಕುತ್ತಿದ್ದರು.

ಮಕ್ಕಳ ಕಿರುಚಾಟ ಕೇಳಿ ಪೊಲೀಸರಿಗೆ ಸ್ಥಳೀಯರಿಂದ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಬಾಗಲಗುಂಟೆ ಠಾಣೆಯ ಪೊಲೀಸರು ಮಕ್ಕಳು ರಕ್ಷಣೆ ಮಾಡಿದ್ದರೆ. ಬಳಿಕ ತಾಯಿಗೆ ಕರೆ ಮಾಡಿ ತಿಳಿಸಿದ್ದಾರೆ. ಸದ್ಯ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೊದಲನೇ ಪತಿಗೆ ಡಿವೋರ್ಸ್ ನೀಡಿದ್ದ ಅಂಜಲಿ

ಅಂಜಲಿಗೆ 10 ವರ್ಷಗಳ ಹಿಂದೆ ಬಿಎಂಟಿಸಿ ಚಾಲಕ ಮುರಳಿ ಜೊತೆಗೆ ವಿವಾಹವಾಗಿತ್ತು. ಬಳಿಕ ಪತಿಯ ಅನೈತಿಕ ಸಂಬಂಧ ಹಾಗೂ ವರದಕ್ಷಿಣೆ ಕಿರುಕುಳ ಆರೋಪದ ಮೇರೆಗೆ ಡಿವೋರ್ಸ್ ಪ್ರಕರಣದಲ್ಲಿ ಕೋರ್ಟ್ ಮೆಟ್ಟಿಲೇರಿದ್ದರು. ಮೂರ್ನಾಲ್ಕು ತಿಂಗಳಿಂದ ಅಂಜಲಿ ಸಂತೋಷ್ ಜೊತೆಗೆ ಊರಿನಲ್ಲಿದ್ದರು. ಈ ನಡುವೆ ಮಕ್ಕಳು ತೀಟೆ ಮಾಡುತ್ತಾರೆ, ಹೇಳಿದ ಮಾತು ಕೇಳಲ್ಲ ಅಂತ ಸಂತೋಷ್ ಘೋರ ಶಿಕ್ಷೆ ನೀಡಿದ್ದಾರೆ.

ನೆಲಮಂಗಲದ ಶ್ರೀ ಲಕ್ಷ್ಮೀವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಕಳ್ಳತನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ 600 ಕೆಜಿ ಪಂಚಲೋಹದ ವಿವಿಧ ದೇವರ ಆಭರಣವನ್ನು ಖದೀಮರು ಕಳವು ಮಾಡಿರುವಂತಹ ಘಟನೆ ನಡೆದಿದೆ. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಯಚೂರಿನಲ್ಲಿ ಜೆಡಿಎಸ್ ಶಾಸಕಿ ಮನೆಗೆ ನುಗ್ಗಿದ್ದ ಅಪರಿಚಿತರ ಗ್ಯಾಂಗ್​​: ಕ್ರಮಕ್ಕೆ ಪೊಲೀಸರಿಗೆ ಸೂಚನೆ

ವಿಷಯ ತಿಳಿದು ಸ್ಥಳಕ್ಕೆ ಬಂದ ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ದೇವಾಲಯದ ಕಮಿಟಿ ಸದಸ್ಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಪೊಲೀಸರಿಂದ ಸಿಸಿ ಕ್ಯಾಮರಾ ಪರಿಶೀಲನೆ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:58 pm, Sun, 26 January 25

ರನ್ನಿಂಗ್ ಕ್ಯಾಚ್ ಹಿಡಿದು ಎಲ್ಲರನ್ನು ಚಕಿತರನ್ನಾಗಿಸಿದ ಡೊನೊವನ್ ಫೆರೇರಾ
ರನ್ನಿಂಗ್ ಕ್ಯಾಚ್ ಹಿಡಿದು ಎಲ್ಲರನ್ನು ಚಕಿತರನ್ನಾಗಿಸಿದ ಡೊನೊವನ್ ಫೆರೇರಾ
‘ಭವ್ಯಾ ಗೌಡ ಪರಿಚಯ ಮೊದಲೇ ಇತ್ತು’; ಕೊನೆಗೂ ಒಪ್ಪಿಕೊಂಡ ತ್ರಿವಿಕ್ರಮ್
‘ಭವ್ಯಾ ಗೌಡ ಪರಿಚಯ ಮೊದಲೇ ಇತ್ತು’; ಕೊನೆಗೂ ಒಪ್ಪಿಕೊಂಡ ತ್ರಿವಿಕ್ರಮ್
ನಂಜನಗೂಡು: ಹುಲಿ ವಿಡಿಯೋ ವೈರಲ್ ಬಗ್ಗೆ ಅರಣ್ಯ ಇಲಾಖೆ ಹೇಳಿದ್ದೇನು?
ನಂಜನಗೂಡು: ಹುಲಿ ವಿಡಿಯೋ ವೈರಲ್ ಬಗ್ಗೆ ಅರಣ್ಯ ಇಲಾಖೆ ಹೇಳಿದ್ದೇನು?
ಒಡಿಶಾದಲ್ಲಿ ಬಸ್ ಪಲ್ಟಿ, ಇಬ್ಬರು ಸಾವು, 30ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ
ಒಡಿಶಾದಲ್ಲಿ ಬಸ್ ಪಲ್ಟಿ, ಇಬ್ಬರು ಸಾವು, 30ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ
ನೈಜೀರಿಯಾದಲ್ಲಿ ತೈಲ ಟ್ಯಾಂಕರ್ ಸ್ಫೋಟ, 18 ಮಂದಿ ಸಾವು
ನೈಜೀರಿಯಾದಲ್ಲಿ ತೈಲ ಟ್ಯಾಂಕರ್ ಸ್ಫೋಟ, 18 ಮಂದಿ ಸಾವು
’ಹನುಮಂತ ಗೆದ್ದಿದ್ದು ಬೇಸರ ಇಲ್ಲ’: ತ್ರಿವಿಕ್ರಂ ಫಸ್ಟ್ ರಿಯಾಕ್ಷನ್
’ಹನುಮಂತ ಗೆದ್ದಿದ್ದು ಬೇಸರ ಇಲ್ಲ’: ತ್ರಿವಿಕ್ರಂ ಫಸ್ಟ್ ರಿಯಾಕ್ಷನ್
ತಾಳಿ ಕಟ್ಟುವಾಗ ಮೂರು ಗಂಟು ಹಾಕುವುದು ಏಕೆ? ಅದರ ಮಹತ್ವ ತಿಳಿಯಿರಿ
ತಾಳಿ ಕಟ್ಟುವಾಗ ಮೂರು ಗಂಟು ಹಾಕುವುದು ಏಕೆ? ಅದರ ಮಹತ್ವ ತಿಳಿಯಿರಿ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ
Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ
ಬಿಗ್ ಬಾಸ್ ಮನೆ ಎದುರು ಹನುಮಂತನ ಅಭಿಮಾನಿಗಳ ಸಂಭ್ರಮಾಚರಣೆ
ಬಿಗ್ ಬಾಸ್ ಮನೆ ಎದುರು ಹನುಮಂತನ ಅಭಿಮಾನಿಗಳ ಸಂಭ್ರಮಾಚರಣೆ
ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ, ಠೇವಣಿ ಉಚಿತ ಎಂದ ಶಾಸಕ ಯತ್ನಾಳ್
ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ, ಠೇವಣಿ ಉಚಿತ ಎಂದ ಶಾಸಕ ಯತ್ನಾಳ್