ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾದ ವಿದ್ಯಾರ್ಥಿ; ಮಗನಿಗಾಗಿ ಪೋಷಕರ ಹುಡುಕಾಟ

ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಬೆಂ.ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾ. ಬೆಟ್ಟಹಳ್ಳಿಯಲ್ಲಿ ನಡೆದಿದೆ. ಮಂಡಿಗೆರೆ ಸರ್ಕಾರಿ ಶಾಲೆ ವಿದ್ಯಾರ್ಥಿ ಚಂದನ್​ ಗೌಡ(16) ರಿಸಲ್ಟ್​ಗೆ ಭಯಬಿದ್ದು ನಾಪತ್ತೆಯಾಗಿದ್ದಾನೆ.

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾದ ವಿದ್ಯಾರ್ಥಿ; ಮಗನಿಗಾಗಿ ಪೋಷಕರ ಹುಡುಕಾಟ
ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾದ ವಿದ್ಯಾರ್ಥಿ
Follow us
ಬಿ ಮೂರ್ತಿ, ನೆಲಮಂಗಲ
| Updated By: ಆಯೇಷಾ ಬಾನು

Updated on:May 09, 2024 | 11:48 AM

ನೆಲಮಂಗಲ, ಮೇ.09: ಇಂದು ಎಸ್​ಎಸ್​ಎಲ್​ಸಿ ಪರೀಕ್ಷೆ (SSLC Result) ಫಲಿತಾಂಶ ಪ್ರಕಟವಾಗಲಿದ್ದು ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ಯುವಕನೋರ್ವ ನಾಪತ್ತೆಯಾಗಿರುವ ಘಟನೆ ಬೆಂ.ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾ. ಬೆಟ್ಟಹಳ್ಳಿಯಲ್ಲಿ ನಡೆದಿದೆ. ಮಂಡಿಗೆರೆ ಸರ್ಕಾರಿ ಶಾಲೆ ವಿದ್ಯಾರ್ಥಿ ಚಂದನ್​ ಗೌಡ(16) ರಿಸಲ್ಟ್​ಗೆ ಭಯಬಿದ್ದು ನಾಪತ್ತೆಯಾಗಿದ್ದಾನೆ.

ಸುರೇಶ್​ ಮತ್ತು ರೂಪ ದಂಪತಿಗಳ ಪುತ್ರ ಚಂದನ್​ ಗೌಡ ಬೈರನಾಯಕನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದಾನೆ. ಮಗನ ಫೋಟೋ ಹಿಡಿದು ಪೋಷಕರು ಹುಡುಕಾಡುತ್ತಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಹೊರಬಿದ್ದಿದೆ. ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಬಾಗಲಕೋಟೆ ಜಿಲ್ಲೆಯ ಮುಧೋಳದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು ಟಾಪ್ ಆಗಿ ಹೊರಹೊಮ್ಮಿದ್ದಾಳೆ. 625ಕ್ಕೆ 625 ಅಂಕ ಪಡೆದಿದ್ದಾಳೆ. ಅಂಕಿತಾ ಕೊನ್ನೂರು ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ.

ಇದನ್ನೂ ಓದಿ: Karnataka SSLC District Wise Result 2024: ಉಡುಪಿಗೆ ಪ್ರಥಮ ಸ್ಥಾನ, ಯಾದಗಿರಿಗೆ ಕೊನೆಯ ಸ್ಥಾನ

ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಟಾಪರ್ ಆಗಿರೋ ಅಂಕಿತಾ ಕೊನ್ನೂರು ಟಿವಿ9ಗೆ ಮೊದಲ ಪ್ರತಿಕ್ರಿಯೆ ನೀಡಿದ್ದು ಪಿಯುಸಿಯಲ್ಲಿ ವಿಜ್ಞಾನ ವಿಭಾಗವನ್ನ ತೆಗೆದುಕೊಳ್ಳುತ್ತೇನೆ. ಭವಿಷ್ಯದಲ್ಲಿ ನಾನು IAS​ ಮಾಡುವ ಕನಸು ಹೊಂದಿದ್ದೇನೆ ಅಂತಾ ಪ್ರತಿಕ್ರೆಯೆ ನೀಡಿದ್ದಾಳೆ.

625ಕ್ಕೆ 625 ಅಂಕ ಪಡೆದಿರುವ ಅಂಕಿತಾ ಕೊನ್ನೂರು ತಂದೆ ಕೃಷಿಕರಾಗಿದ್ದಾರೆ. ಮೂಲತಃ ಮುಧೋಳ ತಾಲೂಕಿನ ವಜ್ರಮಟ್ಟಿ ಗ್ರಾಮದ ನಿವಾಸಿ ಆಗಿದ್ದಾಳೆ. ವಿದ್ಯಾರ್ಥಿನಿ ಅಂಕಿತಾ ಕೊನ್ನೂರು ತಂದೆ ಬಸಪ್ಪ ಕೃಷಿಕರು. ಅಂಕಿತಾಳ ಈ ಸಾಧನೆಗೆ ಪೋಷಕರು, ಶಿಕ್ಷಕರು ಖುಷ್ ಆಗಿದ್ದಾರೆ. ಅಂಕಿತಾಗೆ ಶುಭಾಶಯಗಳ ಮಹಾಪೂರ ಹರಿದು ಬರ್ತಿದೆ.

ಎಸ್​ಎಸ್​ಎಲ್​ಸಿ ಫಲಿತಾಂಶದಲ್ಲಿ 7 ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ ಸಿಕ್ಕಿದೆ. ಬೆಂಗಳೂರಿನ ವಿದ್ಯಾರ್ಥಿನಿ ಮೇಧಾ ಪಿ. ಶೆಟ್ಟಿ 625ಕ್ಕೆ 624 ಅಂಕ ಪಡೆದಿದ್ದಾಳೆ. ಮಧುಗಿರಿಯ ವಿದ್ಯಾರ್ಥಿನಿ ಡಿ.ಎಂ.ಹರ್ಷಿತಾ, ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿ ಚಿನ್ಮಯ್ 625ಕ್ಕೆ 624 ಅಂಕ ಪಡೆದಿದ್ದಾರೆ. ಚಿಕ್ಕೋಡಿಯ ವಿದ್ಯಾರ್ಥಿ ಸಿದ್ಧಾಂತ್, ಶಿರಸಿಯ ವಿದ್ಯಾರ್ಥಿ ದರ್ಶನ್, ಚಿನ್ಮಯ್, ಶ್ರೀರಾಮ್ 625ಕ್ಕೆ 624 ಪಡೆದಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:51 am, Thu, 9 May 24

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ