ಸಂಬಂಧಿ ಮನೆಯಲ್ಲಿ ಸ್ನಾನಕ್ಕೆಂದು ಹೋಗಿದ್ದ ಮಹಿಳೆ ಬಾತ್​ರೂಮ್​ನಲ್ಲಿ ನಿಗೂಢ ಸಾವು

ದೂರದ ಆಂಧ್ರದಿಂದ ಸಂಬಂಧಿಕರ ಮನೆಗೆ ಬಂದಿದ್ದ ಮಹಿಳೆ ನಿಗೂಢವಾಗಿ ಸಾವನ್ನಪ್ಪಿದ್ದಾಳೆ. ಸ್ನಾನಕ್ಕೆ ಹೋದಾಗ ಬಾತ್​ರೂಮ್​ನಲ್ಲೇ ಸಾವನ್ನಪ್ಪಿದ್ದಾರೆ. ಮನೆಗೆ ಯಾರೂ ಬಂದಿರಲಿಲ್ಲ, ಬಾತ್​ರೂಮ್​ನಲ್ಲಿ ಗ್ಯಾಸ್ ಗೀಸರ್ ಸಹ ಆನ್ ಆಗಿರಲಿಲ್ಲ. ಬಕೆಟ್‌ನಲ್ಲಿ ನೀರು ಸಹ ತುಂಬಿಸಿರಲಿಲ್ಲ, ಆದರೂ ಮಹಿಳೆ ಸ್ನಾನಗೃಹದಲ್ಲಿ ಬೆತ್ತಲೆಯಾಗಿ ಬಿದ್ದಿದ್ದಾರೆ.

ಸಂಬಂಧಿ ಮನೆಯಲ್ಲಿ ಸ್ನಾನಕ್ಕೆಂದು ಹೋಗಿದ್ದ ಮಹಿಳೆ ಬಾತ್​ರೂಮ್​ನಲ್ಲಿ ನಿಗೂಢ ಸಾವು
ಲಕ್ಷ್ಮೀ (25) ಮೃತ ಮಹಿಳೆ.
ಬಿ ಮೂರ್ತಿ, ನೆಲಮಂಗಲ Edited By:

Updated on: Nov 25, 2024 | 5:31 PM

ಬೆಂಗಳೂರು, (ನವೆಂಬರ್ 25): ಸ್ನಾನಕ್ಕೆ ಹೋಗಿದ್ದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಡೇಪೇಟೆಯಲ್ಲಿ ನಡೆದಿದೆ. ಲಕ್ಷ್ಮೀ (25) ಮೃತ ಮಹಿಳೆ. ಆಂಧ್ರದ ತಿರುಪತಿಯಿಂದ ಅಡೇಪೇಟೆಯಲ್ಲಿರುವ ಸಂಬಂಧಿಕರೊಬ್ಬರ ಮನೆಗೆ ಬಂದಿದ್ದ ಲಕ್ಷ್ಮೀ, ಇಂದು (ನವೆಂಬರ್ 25) ಸ್ನಾನಕ್ಕೆಂದು ಹೋಗಿದ್ದ ವೇಳೆ ಬಾತ್​ರೂಮ್​ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ.

ಆಂಧ್ರಪ್ರದೇಶದ ತಿರುಪತಿ ಮೂಲದ ಲಕ್ಷ್ಮೀ ತನ್ನ ಪತಿಯೊಂದಿಗೆ ಮಲ್ಲೇಶ್ವರಂನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದರು. ಅಡೇಪೇಟೆಯಲ್ಲಿರುವ ಸಂಬಂಧಿ ಸುಹಾಸಿನಿ ಎಂಬುವವರ ಮನೆಗೆ ಪತಿ ಜೊತೆ ಹೋಗಿದ್ದು, ಬೆಳಗ್ಗೆ ಸ್ನಾನ್ಕಕೆಂದು ಹೋದಾಗ ಬಾತ್​ರೂಮ್​ನಲ್ಲೇ ನಿಗೂಢವಾಗಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಪ್ರೀತಿಸಿ ಮದ್ವೆಯಾದ ಎರಡೇ ವರ್ಷಕ್ಕೆ ಮಹಿಳೆ ದುರಂತ ಸಾವು: ಅಣ್ಣನಿಗೆ ಸೆಂಡ್ ಮಾಡಿದ ಡೆತ್​ನೋಟ್​​ನಲ್ಲೇನಿದೆ?

ಮನೆಯಲ್ಲಿಯೇ ಎಲ್ಲರೂ ಇದ್ದರು. ಸ್ನಾನಕ್ಕೆ ಹೋಗುವ ಮುನ್ನ ಲಕ್ಷ್ಮೀ ಮುಖದ ಮೇಲೆ ಏನೂ ಆಗಿರಲಿಲ್ಲ. ಯಾವುದೇ ಗಾಯದ ಗುರುತುಗಳೂ ಇರಲಿಲ್ಲ. ಆದ್ರೆ, ಸ್ನಾನಕ್ಕೆ ಹೋದ ಕೆಲವೇ ನಿಮಿಷಗಳಲ್ಲಿ ಸಾವನ್ಪಪಿದ್ದು, ಮುಖದಲ್ಲಿ ಪರಚಿರುವ ಗಾಯಗಳಾಗಿರುವುದು ಕಂಡುಬಂದಿದೆ. ಮನೆಗೆ ಯಾರೂ ಬಂದಿರಲಿಲ್ಲ, ಬಾತ್​ರೂಮ್​ನಲ್ಲಿ ಗ್ಯಾಸ್ ಗೀಸರ್ ಸಹ ಆನ್ ಆಗಿರಲಿಲ್ಲ. ಬಕೆಟ್‌ನಲ್ಲಿ ನೀರು ಸಹ ತುಂಬಿಸಿರಲಿಲ್ಲ, ಆದರೂ ಮಹಿಳೆ ಸ್ನಾನಗೃಹದಲ್ಲಿ ಬೆತ್ತಲೆಯಾಗಿ ಬಿದ್ದಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಈ ಸಾವು ನೆಲಮಂಗಲ ಟೌನ್‌ ಪೊಲೀಸರಿಗೆ ತಲೆನೋವಾಗಿದೆ.

ಇನ್ನು ಈ ಸಾವಿನ ಸುತ್ತು ಅನುಮಾನಗಳು ಹುಟ್ಟಿಕೊಂಡಿದ್ದರಿಂದ ಪ್ರಕರಣ ದಾಖಲಿಸಿಕೊಂಡಿರುವ ನೆಲಮಂಗಲ ಟೌನ್​ ಪೊಲೀಸರು, ಹಲವು ಆಯಾಮಗಳಲ್ಲಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಆದರೂ ಸಹ ಪ್ರಾಥಮಿಕ ತನಿಖೆಯಲ್ಲಿ ಸಾವಿನ ಕಾರಣ ಗೊತ್ತಾಗ್ತಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಳಿಕ ಎಲ್ಲಾ ಗೊತ್ತಾಗಲಿದೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:30 pm, Mon, 25 November 24

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Loading...
Unable to load recommendations.
Follow Us