ಬೆಂಗಳೂರು, ಆ.28: ಸಾಲಕ್ಕೆ ಹೆದರಿದ ಯುವಕನೊಬ್ಬ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ(Dasanapura) ಎಪಿಎಂಸಿ ಬಳಿ ನಡೆದಿದೆ. ದಾಸನಪುರದ ವಿಕ್ರಂ ಸಿಂಹ(28) ಮೃತ ವ್ಯಕ್ತಿ. ಅಪ್ಪ, ಅಮ್ಮನಿಗೆ ಕ್ಷಮೆ ಕೋರಿ ಡೆತ್ ನೋಟ್ ಬರೆದಿಟ್ಟು ಕೊನೆಯುಸಿರೆಳೆದಿದ್ದಾನೆ. ಇದೀಗ ಅರ್ಧದಷ್ಟು ಭಾಗ ಮಾತ್ರ ಪತ್ತೆಯಾಗಿದ್ದು, ಇನ್ನೂಳಿದ ಅರ್ಧ ಭಾಗಕ್ಕಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.
ಇನ್ನು ಮೃತ ಯುವಕ ವಿಕ್ರಂ ಸಿಂಹ, ಐಡಿಎಫ್ಸಿ ಬ್ಯಾಂಕ್ನಲ್ಲಿ ಲೋನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಮಾಡಿದ ಸಾಲಕ್ಕೆ ಬ್ಯಾಂಕ್ ಇಎಂಐ ಜೊತೆಗೆ ಸಾಲಗಾರರ ಕಿರುಕುಳದಿಂದಾಗಿ ಬೇಸತ್ತಿದ್ದ ವಿಕ್ರಂ, ಇಂದು(ಬುಧವಾರ) ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಪ್ರಿನ್ಸಿಪಾಲ್ ಬೈದರೆಂದು ಶಾಲೆ ಮೇಲಿಂದಲೇ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
ಚಿತ್ರದುರ್ಗ: ತಾಲೂಕಿನಲ್ಲಿರುವ ಬೆಟ್ಟದ ನಾಗೇನಹಳ್ಳಿ ಬಳಿ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು 35 ವರ್ಷದ ಭೀಮಸಮುದ್ರ ಗ್ರಾಮದ ನಿತಿನ್ ತೋಟದ್ ಎಂದು ಗುರುತಿಸಲಾಗಿದೆ. ಮೇಲ್ನೋಟಕ್ಕೆ ರೈಲು ಹಳಿ ಮೇಲೆ ಮಲಗಿ ಆತ್ಮಹತ್ಯೆಗೆ ಶರಣಾದ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಚಿತ್ರದುರ್ಗ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಧಾರವಾಡ: ಕಲಘಟಗಿಯ ತಡಸ ಕ್ರಾಸ್ ಬಳಿ ಟಾಟಾ ಏಸ್ಗೆ ಲಾರಿ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದರೆ, ಐವರ ಸ್ಥಿತಿ ಗಂಭೀರವಾದ ಘಟನೆ ನಡೆದಿದೆ. ಬಸಮ್ಮ(38) ಮೃತ ರ್ದುದೈವಿ. ಗಂಭೀರ ಗಾಯಗೊಂಡ ಐವರು ಮಹಿಳೆಯರಿಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇವರೆಲ್ಲರೂ ಗಾರ್ಮೆಂಟ್ ಕೆಲಸಕ್ಕೆ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಈ ಕುರಿತು ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:51 pm, Wed, 28 August 24