ಯುವತಿ ಜತೆ ಕಾರಿನಲ್ಲಿ ತೆರಳುವಾಗ ಇದ್ದಕ್ಕಿದ್ದಂತೆ ಕೆಳಗೆಬಿದ್ದ ಯುವಕ

ಕೆಲವೊಮ್ಮೆ ನಮ್ಮ ಸುತ್ತಮುತ್ತ ವಿಚಿತ್ರ ಘಟನೆಗಳು ನಡೆಯುತ್ತವೆ. ಅದರಂತೆ ಇದೀಗ ನೆಲಮಂಗಲ(Nelamangala) ತಾಲೂಕಿನ ಜಾಸ್ ಟೋಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇದ್ದಕ್ಕಿದ್ದಂತೆ ಚಲಿಸುತ್ತಿದ್ದ ಕಾರಿನ ಡೋರ್‌ ತೆಗೆದು ಯುವಕನೊಬ್ಬ ಕೆಳಗೆಬಿದ್ದಿರುವ ಘಟನೆ ನಡೆದಿದೆ. ಆದರೆ, ಕಾರು ಚಾಲನೆ ಮಾಡುತ್ತಿದ್ದ ಯುವತಿ, ‘ದೆವ್ವ ಹಿಡಿದು ಆತ ಕೆಳಗೆ ಬಿದ್ದಿದ್ದಾನೆ ಎನ್ನುತ್ತಿದ್ದು, ಅಚ್ಚರಿಗೆ ಕಾರಣವಾಗಿದೆ.

ಯುವತಿ ಜತೆ ಕಾರಿನಲ್ಲಿ ತೆರಳುವಾಗ ಇದ್ದಕ್ಕಿದ್ದಂತೆ ಕೆಳಗೆಬಿದ್ದ ಯುವಕ
ಯುವತಿ ಜತೆ ಕಾರಿನಲ್ಲಿ ತೆರಳುವಾಗ ಇದ್ದಕ್ಕಿದ್ದಂತೆ ಕೆಳಗೆಬಿದ್ದ ಯುವಕ
Follow us
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 08, 2024 | 10:40 PM

ಬೆಂಗಳೂರು ಗ್ರಾಮಾಂತರ, ಆ.08: ಯುವತಿ ಜೊತೆ ಕಾರಿನಲ್ಲಿ ಬರುವಾಗ ಇದ್ದಕ್ಕಿದ್ದಂತೆ ಚಲಿಸುತ್ತಿದ್ದ ಕಾರಿನ ಡೋರ್‌ ತೆಗೆದು ಯುವಕನೊಬ್ಬ ಕೆಳಗೆಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ(Nelamangala) ತಾಲೂಕಿನ ಜಾಸ್ ಟೋಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಇಸ್ಲಾಂಪುರದ ಸುಫಿಯಾನ್(20)ಕೆಳಗೆ ಬಿದ್ದ ಯುವಕ. ಸಧ್ಯ ಕೆಳಗೆ ಬಿದ್ದಿದ್ದರಿಂದ ಗಾಯವಾಗಿದ್ದು, ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದು ದೆವ್ವದ ಕೆಲಸ ಅಂತಿರೋ ಯುವತಿ

ಇನ್ನು ಈ ಘಟನೆ ಕುರಿತು ಕಾರು ಚಾಲನೆ ಮಾಡುತ್ತಿದ್ದ ಯುವತಿ ಅನಿಷಾ, ‘ಸುಫಿಯಾನ್ ಪಕ್ಕದಲ್ಲೇ ಕೂತಿದ್ದು, ದೆವ್ವ ಹಿಡಿದು ಆತ ಕೆಳಗೆ ಬಿದ್ದಿದ್ದಾನೆ ಎನ್ನುತ್ತಿದ್ದಾರೆ. ಕಾರಿನಿಂದ ಕೆಳಗೆ ಬಿದ್ದಿರುವುದರಿಂದ ಗಾಯಗೊಂಡ ಸುಫಿಯಾನ್​ಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಪೋಷಕರು ಕೂಡ ಮಗನಿಗೆ ಮಸೀದಿಯಲ್ಲಿ ತಾಯತ ಕಟ್ಟಿಸುವುದಾಗಿ ಹೇಳಿದ್ದಾರೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ನೆಲಮಂಗಲ ಭೀಕರ ಅಪಘಾತ: ಗರ್ಭಿಣಿ, ಹೊಟ್ಟೆಯಿಂದ ಹೊರ ಬಂದ ಮಗು ವಿಲ ವಿಲ ಒದ್ದಾಡಿ ಸಾವು

ಬೈಕ್​ಗೆ ಡಿಕ್ಕಿ ಹೊಡೆದ ಗೂಡ್ಸ್ ಲಾರಿ; ಸವಾರ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

ರಾಯಚೂರು: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಹೊರವಲಯದಲ್ಲಿ ಗೂಡ್ಸ್ ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದರೆ, ಹಿಂಬದಿ ಸವಾರನ ಸ್ಥಿತಿ ಗಂಭೀರವಾಗಿದೆ. ಬೈಕ್ ಸವಾರ ಶಾಕೀರ್ (25)ಮೃತ ರ್ದುದೈವಿ. ಲಾರಿ ಡಿಕ್ಕಿಯಾದ ರಭಸಕ್ಕೆ ಮೃತ ಶಾಕೀರ ದೇಹ ಛಿದ್ರ-ಛಿಧ್ರವಾಗಿದೆ. ಇನ್ನು ಗಾಯಾಳು ಸಾಬಣ್ಣನ ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ