ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಯುವಕ ಆತ್ಮಹತ್ಯೆ, ಆಧಾರ ಸ್ತಂಭವನ್ನು ಕಳೆದುಕೊಂಡು ಕುಟುಂಬ ಕಂಗಾಲು

| Updated By: ರಮೇಶ್ ಬಿ. ಜವಳಗೇರಾ

Updated on: May 14, 2024 | 3:12 PM

ಪ್ರೀತಿಸಿದ ಹುಡುಗಿ ಕೈ ಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಯುವತಿ ಕೈಕೊಟ್ಟ ಪರಿಣಾಮ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಟುಂಬಕ್ಕೆ ಆಧಾರವಾಗಿದ್ದ ಬಾಲಾಜಿಯನ್ನು ಕಳೆದುಕೊಂಡು ಕುಟುಂಬ ಕಂಗಾಲಾಗಿದೆ.

ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಯುವಕ ಆತ್ಮಹತ್ಯೆ, ಆಧಾರ ಸ್ತಂಭವನ್ನು ಕಳೆದುಕೊಂಡು ಕುಟುಂಬ ಕಂಗಾಲು
Follow us on

ದೊಡ್ಡಬಳ್ಳಾಪುರ, (ಮೇ 14): ಪ್ರೀತಿಸಿದ ಹುಡುಗಿ (Love Failure) ಕೈ ಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ(doddaballapur) ತಾಲೂಕಿನ ಕೊಡಿಗೇಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಕಾಳುಮಾತ್ರೆ ಸೇವಿಸಿ ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ನಿವಾಸಿ ಬಾಲಾಜಿ (23) ಮೃತಪಟ್ಟಿದ್ದಾನೆ.

ಬಾಲಾಜಿಗೆ ಒಂದು ವರ್ಷದ ಹಿಂದೆ ಇನ್ಸ್ಟಾಗ್ರಾಮ್‌ನಲ್ಲಿ ಕನಕಪುರ ಮೂಲದ ಯುವತಿಯೋರ್ವಳು ಪರಿಚಯವಾಗಿದ್ದಳು. ಇಬ್ಬರ ಆತ್ಮೀಯತೆ, ಪರಿಚಯವು ಪ್ರೀತಿಗೆ ತಿರುಗಿತ್ತು. ಪ್ರೀತಿ- ಪ್ರೇ‌ಮದ ಗುಂಗಿನಲ್ಲಿ ಇಬ್ಬರು ಒಟ್ಟೊಟ್ಟಿಗೆ ಸುತ್ತಾಡಿದ್ದಾರೆ. ಎಲ್ಲ ಕಡೆ ಜತೆಯಾಗಿ ಸುತ್ತಾಡಿ ಕೊನೆಗೆ ಬೇರೊಬ್ಬನ ಜತೆ ಲವ್‌ನಲ್ಲಿರುವುದಾಗಿ ಹೇಳಿ ಕೈಕೊಟ್ಟಿದ್ದಾಳೆ ಎನ್ನಲಾಗಿದೆ. ಮದುವೆ ಮಾಡಿಕೊಳ್ಳೋಣ ಅಂದಿದ್ದಕ್ಕೆ ಮನೆಯಲ್ಲಿ ಒಪ್ಪಲ್ಲ ಎಂದಿದ್ದಾಳಂತೆ. ಜತೆಗೆ ಬೇರೆ ಯುವಕನ ಜತೆ ಲವ್‌ನಲ್ಲಿರುವುದಾಗಿ ಹೇಳಿದ್ದಳಂತೆ. ಈ ಹಿನ್ನೆಲೆಯಲ್ಲಿ ಮನನೊಂದು ಬಾಲಾಜಿ ಕಾಳುಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ಬ್ಬಳ್ಳಿ: ಮಗು ಆಗುತ್ತಿದ್ದಂತೆ ಪತ್ನಿ ಬಿಟ್ಟು ಪರಾರಿಯಾದ ಪತಿ; ಅನೇಕ ಹೆಣ್ಮಕ್ಕಳಿಗೆ ಮೋಸ ಮಾಡಿರುವ ಆರೋಪ

ಆಮೆಜಾನ್‌ನಲ್ಲಿ ಡೆಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಬಾಲಾಜಿ , ಬಡ ಕುಟುಂಬಕ್ಕೆ ಆಧಾರವಾಗಿದ್ದ. ಆದರೆ ಇದೀಗ ಮಗನ ದುರಂತ ಅಂತ್ಯ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯುವತಿ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಮೃತ ಕುಟುಂಬಸ್ಥರು ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ