ರಾಂಗ್ ರೂಟ್​ನಲ್ಲಿ ಬಂದ ಕಾರಿಗೆ ಮತ್ತೊಂದು ಕಾರು ಡಿಕ್ಕಿ; ಇಬ್ಬರು ದುರ್ಮರಣ

TV9 Digital Desk

| Edited By: sandhya thejappa

Updated on:Sep 26, 2021 | 10:40 AM

ಹೈವೇಯಲ್ಲಿ ಬರುತ್ತಿದ್ದ ಇಂಡಿಕಾ ಕಾರಿಗೆ ರಾಂಗ್ ರೂಟ್​ನಲ್ಲಿ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಸೂಳಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ರಾಂಗ್ ರೂಟ್​ನಲ್ಲಿ ಬಂದ ಕಾರಿಗೆ ಮತ್ತೊಂದು ಕಾರು ಡಿಕ್ಕಿ; ಇಬ್ಬರು ದುರ್ಮರಣ
ಎರಡು ಕಾರುಗಳ ನಡುವೆ ಅಪಘಾತ ನಡೆದಿದೆ, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow us on

ಆನೇಕಲ್: ರಾಂಗ್ ರೂಟ್ನಲ್ಲಿ ಬಂದ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಈ ಘಟನೆ ತಮಿಳುನಾಡಿನ ಹೊಸೂರು ಬಳಿಯ ಸೂಳಗಿರಿಯಲ್ಲಿ ನಡೆದಿದೆ. ಕಾರಿನಲ್ಲಿ ತೆರಳುತ್ತಿದ್ದ ಇಬ್ಬರು ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಬೆಂಗಳೂರಿನ ವೈಯಾಲಿಕಾವಲ್ ನಿವಾಸಿ ಸುಮಂತ್ (21) ಮತ್ತು ಕೋರಮಂಗಲ ನಿವಾಸಿ ವಿನ್ಸೆಂಟ್ ಗೋಪಿ (34) ಮೃತ ದುರ್ದೈವಿಗಳು. ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ತಮಿಳುನಾಡು ಹೊಸೂರು ಸಮೀಪದ ಸೂಳಗಿರಿ ಎಚ್.ಪಿ ಪೆಟ್ರೋಲ್ ಬಂಕ್ ಎದುರು ಬೀಕರ ಅಪಘಾತ ಸಂಭವಿಸಿದ್ದು, ಕಾರು ಚಾಲಕರು ಸಾವನ್ನಪ್ಪಿದ್ದಾರೆ.

ಹೈವೇಯಲ್ಲಿ ಬರುತ್ತಿದ್ದ ಇಂಡಿಕಾ ಕಾರಿಗೆ ರಾಂಗ್ ರೂಟ್​ನಲ್ಲಿ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಸೂಳಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಭತ್ತದ ಗದ್ದೆಗೆ ನುಗ್ಗಿದ ಸರ್ಕಾರಿ ಬಸ್​ ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್​ ಭತ್ತದ ಗದ್ದೆಗೆ ನುಗ್ಗಿದೆ. ಸರ್ಕಾರಿ ಬಸ್ ಚಾಲಕನ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದ ಬಳಿ ನಡೆದ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್ 25 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಉದ್ಯಮಿ ಮಗನ ಕಾರು ಕ್ಯಾಬ್‌ಗೆ ಡಿಕ್ಕಿ ಐಷಾರಾಮಿ ಕಾರಿನಲ್ಲಿ ತಡರಾತ್ರಿ ಜಾಲಿ ರೈಡ್ ಮಾಡುತ್ತಿದ್ದ ಉದ್ಯಮಿ ಕರೀಮ್ ಮೆವಾನಿ ಮಗ ಜವೇರ್‌ ಕಾರು ಕ್ಯಾಬ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕ್ಯಾಬ್ ಸಂಪೂರ್ಣ ಜಖಂ ಆಗಿದೆ. ಬೆಂಗಳೂರಿನ ಕಮಾಂಡೊ ಆಸ್ಪತ್ರೆಯ ಬಳಿ ಅಪಘಾತ ನಡೆದಿದೆ.

ಇಂದಿರಾನಗರದಲ್ಲಿ ಪಾರ್ಟಿ ಮಾಡಿದ್ದ ಜವೇರ್ ಮತ್ತು ಆತನ ಸ್ನೇಹಿತರು ರಾತ್ರಿ ಪಾರ್ಟಿ ಮಾಡಿ 3 ಐಷಾರಾಮಿ ಕಾರಿನಲ್ಲಿ ಜಾಲಿ ರೈಡ್ ಮಾಡುತ್ತಿದ್ದರು. ಉದ್ಯಮಿ ಕರೀಮ್ ಮೆವಾನಿ ಮಗ ಜವೇರ್, ಸೊಸೆ ಶ್ರೇಯಾ, ಜವೇರ್ ಸ್ನೇಹಿತರು 3 ಕಾರಿನಲ್ಲಿ ಜಾಲಿ ರೈಡ್‌ಗೆ ತೆರಳಿದ್ದರು. ಈ ವೇಳೆ ಜವೇರ್ ಚಲಾಯಿಸುತ್ತಿದ್ದ ಐಷಾರಾಮಿ ಕಾರು ಕೇಶವಮೂರ್ತಿ ಎಂಬುವರ ಕ್ಯಾಬ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕ್ಯಾಬ್ ಸಂಪೂರ್ಣ ಜಖಂ ಆಗಿದೆ.

ಇದನ್ನೂ ಓದಿ

Viral Video: ಫೋಟೋಕ್ಕೆ ಸಖತ್ ಪೋಸ್ ನೀಡೋ ಈ ಶ್ವಾನ ಈಗ ಸಿಕ್ಕಾಪಟ್ಟೆ ವೈರಲ್; ಎಲ್ಲರ ಮನಗೆದ್ದ ಈ ವಿಡಿಯೊ ನೋಡಿ

ಯುಎಸ್​ನಿಂದ 157 ಪುರಾತನ ಕಲಾಕೃತಿಗಳನ್ನು ವಾಪಸ್​ ಭಾರತಕ್ಕೆ ತಂದ ಪ್ರಧಾನಿ ಮೋದಿ; ಹಿಂದೆ ಕಳವಾಗಿದ್ದ ವಿಗ್ರಹಗಳೆಲ್ಲ ಮತ್ತೆ ದೇಶಕ್ಕೆ

ಐಷಾರಾಮಿ ಕಾರಿನಲ್ಲಿ ತಡರಾತ್ರಿ ಜಾಲಿ ರೈಡ್ ಮಾಡುತ್ತಿದ್ದವರಿಂದ ಕ್ಯಾಬ್‌ಗೆ ಡಿಕ್ಕಿ, ಉದ್ಯಮಿ ಕರೀಮ್ ಮೆವಾನಿ ಮಗ ಜವೇರ್‌ ವಶಕ್ಕೆ

(Accident between two cars and two driver death in Tamil Nadu)

ತಾಜಾ ಸುದ್ದಿ

Related Stories

Most Read Stories

Click on your DTH Provider to Add TV9 Kannada