ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ನಡುವೆ ಅಪಘಾತ: ಕಿಲೋ ಮೀಟರ್‌ಗಟ್ಟಲೆ ಟ್ರಾಫಿಕ್‌ಜಾಮ್
ನೆಲಮಂಗಲ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ನಡುವೆ ಅಪಘಾತವಾಗಿದ್ದು, ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್‌ಜಾಮ್ ಉಂಟಾಗಿದೆ.
ತುಮಕೂರು: ರಾಷ್ಟ್ರೀಯ ಹೆದ್ದಾರಿಯ ದಾಬಸ್ ಪೇಟೆ ಸಮೀಪದ ಹನುಮಂತಪುರ ಗೇಟ್ ಬಳಿ ಎರಡು ಲಾರಿಗಳ ನಡುವೆ ಇಂದು ಬೆಳಿಗ್ಗೆ ಅಪಘಾತ ಸಂಭವಿಸಿದೆ. ತಮಿಳುನಾಡು ಮೂಲದ ಪೇಂಟ್ ಸಾಗಿಸುತ್ತಿದ್ದ ಲಾರಿ ಇದಾಗಿದ್ದು ರಸ್ತೆ ಮಧ್ಯೆದಲ್ಲಿ ಬಿದ್ದಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋ ಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಗಂಟೆಗಟ್ಟಲೆ ನಿಂತಲ್ಲೆ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಹಿಂದಿನಿಂದ ಗುದ್ದಿದ ರಭಸಕ್ಕೆ ಲಾರಿ ರಸ್ತೆ ಮಧ್ಯೆಯೇ ಪಲ್ಟಿಯಾಗಿದೆ. ಸಧ್ಯ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ದೌಡಾಯಿಸಿದ್ದಾರೆ. ಮಧ್ಯೆ ರಸ್ತೆಯಲ್ಲಿ ವಾಹನ ಪಲ್ಟಿಯಾಗಿದ್ದರಿಂದ ಕಿಲೋ ಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಗಿದ್ದು, ನಿಧಾನಗತಿಯಲ್ಲಿ ವಾಹನ ಸಂಚಾರ ಶುರುವಾಗಿದೆ.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:27 am, Fri, 9 December 22