Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident: ಶ್ರೀ ಕ್ಷೇತ್ರ ಘಾಟಿ ಬಳಿ ವೃದ್ಧೆಗೆ ಡಿಕ್ಕಿ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಮದುವೆ ಬಸ್

ವೃದ್ದೆಯೊಬ್ಬರಿಗೆ ಡಿಕ್ಕಿ ಹೊಡೆದು ತಪ್ಪಿಸಿಕೊಳ್ಳಲು ಅತಿವೇಗದಿಂದ ಬಸ್ ಚಲಾಯಿಸಿದ್ದು ಈ ವೇಳೆ ವಿದ್ಯುತ್ ಕಂಬಕ್ಕೆ ಗುದ್ದಿ ಏಕಾಏಕಿ ಮುಗುಚಿ ಬಿದ್ದಿದೆ.

Accident: ಶ್ರೀ ಕ್ಷೇತ್ರ ಘಾಟಿ ಬಳಿ ವೃದ್ಧೆಗೆ ಡಿಕ್ಕಿ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಮದುವೆ ಬಸ್
ಘಾಟಿ ಸುಬ್ರಹ್ಮಣ್ಯ ಬಳಿ ದಿಬ್ಬಣದ ಬಸ್ ಪಲ್ಟಿ
Follow us
ಆಯೇಷಾ ಬಾನು
|

Updated on:Jun 08, 2023 | 10:22 AM

ದೇವನಹಳ್ಳಿ; ಚಾಲಕನ ನಿಯಂತ್ರಣ ತಪ್ಪಿ ಮದುವೆ ಬಸ್ ಪಲ್ಟಿಯಾದ ಭೀಕರ(Bus Accident) ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸಮೀಪ ನಡೆದಿದೆ(Ghati Subrahmanya temple). ಮಧುಗಿರಿ ತಾಲೂಕಿನ ಐಡಿಹಳ್ಳಿ ಗ್ರಾಮದಿಂದ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯಕ್ಕೆ ಬಂದಿದ್ದ ಮದುವೆ ಬಸ್, ನಿನ್ನೆ(ಜೂನ್ 07) ರಾತ್ರಿ ಮದುವೆ ಮುಗಿಸಿಕೊಂಡು ತೆರಳುವಾಗ ಘಟನೆ ಸಂಭವಿಸಿದೆ. ಸದ್ಯ ಅದೃಷ್ಟವಶಾತ್ ದೊಡ್ಡ ದುರಂತದಿಂದ ಪ್ರಯಾಣಿಕರು ಪಾರಾಗಿದ್ದಾರೆ.

ವೃದ್ದೆಯೊಬ್ಬರಿಗೆ ಡಿಕ್ಕಿ ಹೊಡೆದು ತಪ್ಪಿಸಿಕೊಳ್ಳಲು ಅತಿವೇಗದಿಂದ ಬಸ್ ಚಲಾಯಿಸಿದ್ದು ಈ ವೇಳೆ ವಿದ್ಯುತ್ ಕಂಬಕ್ಕೆ ಗುದ್ದಿ ಏಕಾಏಕಿ ಮುಗುಚಿ ಬಿದ್ದಿದೆ. ಹನುಮಕ್ಕ(65), ಲಕ್ಷ್ಮೀದೇವಮ್ಮ (55), ಹನುಮಯ್ಯ (71) ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಇನ್ನೂ ಉಳಿದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಂಭೀರ ಗಾಯವಾದ ಪ್ರಯಾಣಿಕರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿಂತಿದ್ದ ಲಾರಿಗೆ ಌಂಬುಲೆನ್ಸ್ ಡಿಕ್ಕಿ, ಮೂವರು ಸಾವು

ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ಲಾರಿಗೆ ಡಿಕ್ಕಿಯಾಗಿ ಌಂಬುಲೆನ್ಸ್​ನಲ್ಲಿದ್ದ ಮೂವರು ಮೃತಪಟ್ಟ ಘಟನೆ ನಡೆದಿದೆ. ಌಂಬುಲೆನ್ಸ್​ನಲ್ಲಿದ್ದ ಕನಕಮಣಿ(72), ಆಕಾಶ್(17), ಚಾಲಕ ಮೃತರು. ಮತ್ತಿಬ್ಬರಿಗೆ ಗಾಯಗಳಾಗಿದ್ದು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗುಜರಾತ್​ನಿಂದ ತಮಿಳುನಾಡಿಗೆ ತೆರಳುತ್ತಿದ್ದ ಌಂಬುಲೆನ್ಸ್, ಅಹಮದಾಬಾದ್​ನಿಂದ ತಿರುನೆಲ್ವೇಲಿಗೆ ತೆರಳುತ್ತಿದ್ದಾಗ ಅಪಘಾತಕ್ಕೀಡಾಗಿದೆ. ಮಲ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದ್ದು ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸೈಬರಾಬಾದ್​ನಲ್ಲಿ ಹ್ಯಾಕರ್‌ಗಳ ಹುಚ್ಚುತನ: ಪೊಲೀಸ್ ಠಾಣೆಯ ಫೇಸ್‌ಬುಕ್ ಪೇಜ್ ನಲ್ಲಿ ಅಶ್ಲೀಲ ವಿಡಿಯೋಗಳು ತುಂಬಿತುಳುಕುತ್ತಿವೆ!

ಬೆಂಗಳೂರಿನಲ್ಲಿ ಬೆಳ್ಳಂಬೆಳ್ಳಗೆ ರೌಡಿ ಶೀಟರ್​ಗಳಿಗೆ ಶಾಕ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚಾಗಿರುವ ಕ್ರೈಂ ಚಟುವಟಿಕೆ ಹಾಗೂ ಗಾಂಜಾ ಪ್ರಕರಣಗಳ ಹಿನ್ನಲೆಯಲ್ಲಿ ಪೊಲೀಸರು ಬೆಳ್ಳಂ ಬೆಳ್ಳಗೆ ರೌಡಿಶೀಟರ್‌ಗಳಿಗೆ ಶಾಕ್ ನೀಡಿದ್ದಾರೆ. ನೂತನ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ಮೇರೆಗೆ ದಾಳಿ​​ ನಗರದ 8 ವಿಭಾಗದ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್​ಗಳ ಮನೆ ಮೇಲೆ ದಾಳಿ ಮಾಡಲಾಗಿದ್ದು, 1 ಸಾವಿರಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆಗಳಲ್ಲಿ ಪರಿಶೀಲನೆ ಮಾಡಲಾಗಿದೆ. ದಾಳಿ ವೇಳೆ ಹಲವರ ಮನೆಗಳಲ್ಲಿ ಮಾರಕಾಸ್ತ್ರಗಳು, ಗಾಂಜಾ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:37 am, Thu, 8 June 23