ದೇವನಹಳ್ಳಿ, ಅಕ್ಟೋಬರ್ 27: ಕಾರ್ ಶೋ ರೂಮ್ ಹಿಂಭಾಗದ ಗೋದಾಮಿನಲ್ಲಿ ಆಕಸ್ಮಿಕ ಅಗ್ನಿ (fire accident) ಕಾಣಿಕೊಂಡಿರುವಂತಹ ಘಟನೆ ಬೆಂಗಳೂರಿನ ಬ್ಯಾಟರಾಯನಪುರ ಬಳಿ ನಡೆದಿದೆ. ಆಕಸ್ಮಿಕ ಅಗ್ನಿ ಕಾಣಿಸಿಕೊಂಡ ಪರಿಣಾಮ ಗೋಡೌನ್ ಸಂಪೂರ್ಣ ಹೊತ್ತಿ ಉರಿದೆ. ಬೆಂಕಿಯ ಕೆನ್ನಾಲಿಗೆಗೆ ಕಾರ್ ಶೋ ರೂಂ ಮತ್ತು ಅಕ್ಕ ಪಕ್ಕದ ಮನೆ ಹಾಗೂ ಅಂಗಡಿ ಮಾಲೀಕರಿಗೆ ಆತಂಕ ಶುರುವಾಗಿದೆ. ಸದ್ಯ ಶೋ ರೂಂ ನಲ್ಲಿನ ಕಾರುಗಳನ್ನ ಸಿಬ್ಬಂದಿ ಹೊರ ತೆಗೆದಿದ್ದಾರೆ. ಸ್ಥಳಕ್ಕೆ 3 ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಘಟನೆಯಿಂದಾಗಿ ಹೆಬ್ಬಾಳ ಬಳಿಯ ಏರ್ಪೋರ್ಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ರಾಯಚೂರು: ಶಾರ್ಟ್ ಸರ್ಕ್ಯೂಟ್ನಿಂದ ಕಾರು ಹೊತ್ತಿ ಉರಿದಿರುವಂತಹ ಘಟನೆ ರಾಯಚೂರು ನಗರದ ರಿಮ್ಸ್ ಆಸ್ಪತ್ರೆಯ ಪಾರ್ಕಿಂಗ್ ಲಾಟ್ನಲ್ಲಿ ನಡೆದಿದೆ. ಈರಣ್ಣ ಎನ್ನುವವರ ಕಾರು ಬೆಂಕಿಗಾಹುತಿಯಾಗಿದೆ. ಈರಣ್ಣ ಕಾರು ಪಾರ್ಕ್ ಮಾಡಿ ಆಸ್ಪತ್ರೆಯೊಳಗೆ ತೆರಳಿದ್ದಾರೆ.
ಇದನ್ನೂ ಓದಿ: ತನ್ನ ವಿರುದ್ಧ ದೂರು ನೀಡಿದರೆಂದು ವಾಹನಗಳಿಗೆ ಬೆಂಕಿ ಹಚ್ಚಿದ ಶ್ವಾನ ಮಾಲೀಕ ಅರೆಸ್ಟ್
ಈ ವೇಳೆ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಕ್ಷಣಾರ್ಧದಲ್ಲಿ ಹೊತ್ತು ಉರಿದಿದೆ. ಬಳಿಕ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.
ಮೈಸೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಕಾಣಿಸಿಕೊಂಡಿರುವ ಬೆಂಕಿ ಕಾಣಿಸಿಕೊಂಡಿರುವಂತಹ ಘಟನೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಕೊಠಡಿಯ ಸಭಾಂಗಣದಲ್ಲಿ ನಡೆದಿದೆ. ಎಸಿ ಅಳವಡಿಸಿರುವ ಸ್ಥಳದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ದಟ್ಟವಾದ ಹೊಗೆ ಆವರಿಸಿದ್ದರಿಂದ ಆತಂಕ ಸೃಷ್ಟಿ ಆಗಿದ್ದು, ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಬೆಂಕಿ ನಂದಿಸಿದ್ದಾರೆ.
ಹುಬ್ಬಳ್ಳಿ: ಅಡುಗೆ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮನೆಯಲ್ಲಿನ ವಸ್ತುಗಳು ಧಗಧದಗನೆ ಹೊತ್ತಿ ಉರಿದಿರುವಂತಹ ಘಟನೆ ಹಳೇ ಹುಬ್ಬಳ್ಳಿಯ ಜಂಗ್ಲಿಪೇಟೆಯಲ್ಲಿ ನಡೆದಿದೆ. ಸುಮಿತ್ರಮ್ಮಾ ಹೊಸೂರ ಎಂಬುವವರ ಮನೆಯಲ್ಲಿ ದುರಂತ ಸಂಭವಿಸಿದೆ. ಸಿಲಿಂಡರ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.