ಕರ್ನಾಟಕದಲ್ಲಿಂದು ಹಲವೆಡೆ ಸಂಭವಿಸಿದ ರಸ್ತೆ ಅಪಘಾತಗಳು: ಇಲ್ಲಿದೆ ಸಾವು ನೋವಿನ ವಿವರ

ಭಾನುವಾರ ಅನೇಕ ಕಡೆ ಭೀಕರ ರಸ್ತೆ ಅಪಘಾತಗಳು ಸಂಭವಿಸಿದ್ದು ಸಾವು-ನೋವು ಕಂಡು ಬಂದಿದೆ. ಮತ್ತೊಂದ್ಕಡೆ ಸರಣಿ ಅಪಘಾತ ಸಂಭವಿಸಿ ಕಾರುಗಳಿಗೆ ಹಾನಿಯಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿ ಭಾನುವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ರಸ್ತೆ ದಾಟುತ್ತಿದ್ದ ವೇಳೆ ಕ್ಯಾಂಟರ್​ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.

ಕರ್ನಾಟಕದಲ್ಲಿಂದು ಹಲವೆಡೆ ಸಂಭವಿಸಿದ ರಸ್ತೆ ಅಪಘಾತಗಳು: ಇಲ್ಲಿದೆ ಸಾವು ನೋವಿನ ವಿವರ
ಹುಬ್ಬಳ್ಳಿ ಹಿಟ್ ಆ್ಯಂಡ್ ರನ್
Follow us
TV9 Web
| Updated By: ಆಯೇಷಾ ಬಾನು

Updated on: Nov 05, 2023 | 1:20 PM

ಹುಬ್ಬಳ್ಳಿ, ನ.05: ಕರ್ನಾಟಕ ರಾಜ್ಯದ ಹಲವು ಕಡೆಗಳಲ್ಲಿ ಇಂದು ರಸ್ತೆ ಅಪಘಾತಗಳು (Accident) ಸಂಭವಿಸಿವೆ. ಹುಬ್ಬಳ್ಳಿ, ನೆಲಮಂಗಲ, ದೇವನಹಳ್ಳಿಯಲ್ಲಿ ನಡೆದ ಅಪಘಾತದಲ್ಲಿ ಓರ್ವರು ಪ್ರಾಣ (Death) ಕಳೆದುಕೊಂಡಿದ್ದಾರೆ. ಮತ್ತೊಂದ್ಕಡೆ ಸರಣಿ ಅಪಘಾತ ಸಂಭವಿಸಿ ಕಾರುಗಳಿಗೆ ಹಾನಿಯಾಗಿದೆ. ಹುಬ್ಬಳ್ಳಿಯಲ್ಲಿ ಹಿಟ್ ಆ್ಯಂಡ್ ರನ್​ಗೆ ವಿಜಯ ಪವಾರ (58) ಎಂಬ ವ್ಯಕ್ತಿಯ ದಾರುಣ ಸಾವಾಗಿದೆ. ಹುಬ್ಬಳ್ಳಿಯ ಸಿಮ್ಲಾನಗರ ಬೈಪಾಸ್ ಬಳಿ ಘಟನೆ ನಡೆದಿದ್ದು ವಾಹನ ಹರಿದು, ಮೃತದೇಹ ಛಿದ್ರವಾಗಿದೆ. ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಸ್ತೆ ದಾಟುತ್ತಿದ್ದ ವೇಳೆ ಕ್ಯಾಂಟರ್​ ಡಿಕ್ಕಿ, ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿ ಭಾನುವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ರಸ್ತೆ ದಾಟುತ್ತಿದ್ದ ವೇಳೆ ಕ್ಯಾಂಟರ್​ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಇವತ್ತು ಬೆಳಗ್ಗೆ ರಾಯಚೂರು ಮೂಲದ ಮಲ್ಲಮ್ಮ ಅನ್ನೋರು ಮಾದನಾಯಕನಹಳ್ಳಿ ಬಳಿ ರಸ್ತೆ ದಾಟುತ್ತಿದ್ರು. ಈ ವೇಳೆ ಕ್ಯಾಂಟರ್​ ಮಹಿಳೆಗೆ ಡಿಕ್ಕಿ ಹೊಡೆದಿದೆ. ನಂತರ ಮಹಿಳೆಯ ತಲೆ ಮೇಲೆ ಕ್ಯಾಂಟರ್ ಹರಿದಿದೆ. ಸ್ಥಳದಲ್ಲೇ ಮಲ್ಲಮ್ಮ ಪ್ರಾಣ ಬಿಟ್ಟಿದ್ದಾರೆ. ಘಟನೆ ಬಳಿಕ ಕ್ಯಾಂಟರ್ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ಅಪಘಾತದಿಂದ ಮಾದನಾಯಕನಹಳ್ಳಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಇದನ್ನೂ ಓದಿ: ತುಮಕೂರು: ನಿಧಿ ಆಸೆ ತೋರಿಸಿ 16 ಲಕ್ಷ ಹಣ ಪಡೆದಿದ್ದ ಜ್ಯೋತಿಷಿ; ಹಣ ಕೊಟ್ಟವರಿಂದಲೇ ಕಿಡ್ನಾಪ್, ಮುಂದೇನಾಯ್ತು?​

ಕೆಎಸ್​ಆರ್​ಟಿಸಿ ಬಸ್​ಗೆ ಬೈಕ್​ ಡಿಕ್ಕಿ, ಹಿಂಬದಿ ಸವಾರ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವೆಂಕಟಗಿರಿಕೋಟೆ ಗ್ರಾಮದ ಬಳಿ ಕೆಎಸ್​ಆರ್​ಟಿಸಿ ಬಸ್​ಗೆ ಬೈಕ್​ ಡಿಕ್ಕಿ ಹೊಡೆದಿದ್ದು, ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೆಂಗಳೂರು ಮೂಲದ ವಡಿವೇಲು‌‌(45) ಮೃತ ದುರ್ದೈವಿ. ಬೈಕ್ ಓಡಿಸುತ್ತಿದ್ದ ಮಧುಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾನುವಾರ ಹಿನ್ನೆಲೆ ಈಶಾ ಹಾಗೂ ನಂದಿ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದೊಡ್ಡಪೈಲಗುರ್ಕಿ ಬಳಿ 4 ಕಾರುಗಳ ನಡುವೆ ಸರಣಿ ಅಪಘಾತ

ಇದಿಷ್ಟು ಒಂದ್ಕಡಯಾದ್ರೆ, ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಪೈಲಗುರ್ಕಿ ಬಳಿ ಸರಣಿ ಅಪಘಾತ ನಡೆದಿದೆ. 4 ಕಾರುಗಳ ನಡುವೆ ಸರಣಿ ಆ್ಯಕ್ಸಿಡೆಂಟ್ ಆಗಿದೆ. ಮುಂದಿನ ಕಾರು ಸಡನ್ ಬ್ರೇಕ್ ಹಾಕಿದ್ರಿಂದಲೇ ಸರಣಿ ಅಪಘಾತವಾಗಿದೆ ಅಂತ ಹೇಳಲಾಗ್ತಿದೆ. ಎಲ್ಲಾ ಕಾರುಗಳಿಗೆ ಸ್ವಲ್ಪ ಹಾನಿಯಾಗಿದೆ. ಅದೃಷ್ಟವಶಾತ್​ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ