ಬೆಂಗಳೂರಿನಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಪರಾರಿ

ಇತ್ತೀಚೆಗೆ ಲೈಗಿಂಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಚಿಕ್ಕಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಕಾಮುಕರ ಕಾಟ ಹೆಚ್ಚಾಗಿದೆ. ಇದೀಗ ಬೆಂಗಳೂರಿನ ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಆರೋಪಿ ಪರಾರಿಯಾದ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಪರಾರಿ
ಪರಾರಿಯಾದ ಆರೊಪಿ
Follow us
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 11, 2024 | 5:53 PM

ಬೆಂಗಳೂರು, ಸೆ.11: ರಾಜ್ಯ ರಾಜಧಾನಿ ಬೆಂಗಳೂರಿನ ಮಾದನಾಯಕನಹಳ್ಳಿ(Madanayakahalli) ಠಾಣಾ ವ್ಯಾಪ್ತಿಯಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಆರೋಪಿ ಪರಾರಿಯಾದ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿ ಬಟ್ಟೆ ಒಣಗಿ ಹಾಕುವ ಸಲುವಾಗಿ ಮಹಡಿ ಮೇಲೆ ತೆರಳಿದ್ದ ವೇಳೆ ಪೋಷಕರು ಇಲ್ಲದನ್ನು ಗಮನಿಸಿ ಮಹಡಿ ಮೇಲೆ ಹೋಗಿದ್ದ ದುರುಳ, ಬಾಲಕಿ ಕೂಗದಂತೆ ಬೆದರಿಕೆ ಹಾಕಿ ಕೃತ್ಯ ಎಸಗಿದ್ದಾನೆ. ಬಳಿಕ ಅಲ್ಲಿಂದ ಎಸ್ಕೇಪ್​ ಆಗಿದ್ದಾನೆ. ಇನ್ನು ಅತ್ಯಾಚಾರ ಆರೋಪಿಯ ಚಲನವಲನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಾದನಾಯಕನಹಳ್ಳಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಕೆಎಸ್​ಆರ್​ಟಿಸಿ ಬಸ್​ ಹರಿದು ಬೈಕ್​ ಸವಾರ ಸಾವು

ಮೈಸೂರು: ನಗರದ ಗಣಪತಿ ಸಚ್ಚಿದಾನಂದ ಆಶ್ರಮ ಬಳಿ ಕೆಎಸ್​ಆರ್​ಟಿಸಿ ಬಸ್​ ಹರಿದು ಬೈಕ್​ ಸವಾರ ಸಯ್ಯದ್ ನೌಮಾನ್(27) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಸು ಅಡ್ಡ ಬಂದಿದ್ದಕ್ಕೆ ಕೆಳಗೆ ಬಿದ್ದಿದ್ದ ಸವಾರ ಸಯ್ಯದ್ ಮೇಲೆ ಕೆಎಸ್​ಆರ್​ಟಿಸಿ ಬಸ್ ಹರಿದು ದುರ್ಘಟನೆ ನಡೆದಿದೆ. ಈ ಕುರಿತು ಕೆ.ಆರ್.ಸಂಚಾರಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ತುಮಕೂರು: ತಂದೆಯಿಂದಲೇ ನಿರಂತರ ಅತ್ಯಾಚಾರ, 3 ತಿಂಗಳ ಗರ್ಭಿಣಿಯಾದ 14 ವರ್ಷದ ಮಗಳು

ಟಿಪ್ಪರ್ ಲಾರಿ ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು ಗ್ರಾಮಾಂತರ: ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟಿಪ್ಪರ್ ಡಿಕ್ಕಿಯಾಗಿ ಬೈಕ್​ ಸವಾರ ಕೊನೆಯುಸಿರೆಳೆದಿದ್ದಾನೆ. ಟಿ.ಬೇಗೂರಿನ ಅರಸೇಗೌಡ(45) ಮೃತ ರ್ದುದೈವಿ. ಅಪಘಾತದ ಬಳಿಕ ಟಿಪ್ಪರ್ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದು, ಇನ್ನು ಅಪಘಾತದ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ