AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ನಿಲ್ದಾಣಗಳಲ್ಲಿ ಕಳ್ಳತನ ಪ್ರಕರಣ: ಬೆಂಗಳೂರಿಗೆ ದೇಶದಲ್ಲೇ ಮೊದಲನೇ ಸ್ಥಾನ!

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಬಿ) ಕಳ್ಳತನ ಪ್ರಕರಣಗಳಲ್ಲಿ ದೇಶದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಈ ವರ್ಷ ದೇಶದ ವಿಮಾನ ನಿಲ್ದಾಣಗಳಲ್ಲಿ ವರದಿಯಾದ ಒಟ್ಟು ಪ್ರಕರಣಗಳಲ್ಲಿ ಕೆಐಎಬಿಯಲ್ಲಿಯೇ ಹೆಚ್ಚು ಕೇಸ್​ ನಡೆದಿವೆ. ನಾಗರಿಕ ವಿಮಾನಯಾನ ರಾಜ್ಯ ಖಾತೆ ಸಚಿವರು ಲೋಕಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ವಿಮಾನ ನಿಲ್ದಾಣಗಳಲ್ಲಿ ಕಳ್ಳತನ ಪ್ರಕರಣ: ಬೆಂಗಳೂರಿಗೆ ದೇಶದಲ್ಲೇ ಮೊದಲನೇ ಸ್ಥಾನ!
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ಪ್ರಸನ್ನ ಹೆಗಡೆ
|

Updated on: Dec 12, 2025 | 6:43 PM

Share

ಬೆಂಗಳೂರು, ಡಿಸೆಂಬರ್​​ 12: ಇಂಡಿಗೋ ವಿಮಾನಗಳ ಹಾರಾಟದಲ್ಲಿನ ವ್ಯತ್ಯ ಮತ್ತು ಹೊಸ ಪಾರ್ಕಿಂಗ್​​ ನಿಯಮಗಳಿಂದ ಇತ್ತೀಚೆಗೆ ಸುದ್ದಿಯಲ್ಲಿದ್ದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಳ್ಳತನ ಕೇಸ್​​ಗಳ ವಿಚಾರವಾಗಿಯೂ ಸದ್ದು ಮಾಡಿದೆ. ಈ ವರ್ಷ ಭಾರತದಲ್ಲಿನ ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಪ್ರಕ್ರಿಯೆಯ ವೇಳೆ 9 ಕಳ್ಳತನ ಪ್ರಕರಣಗಳು ವರದಿಯಾಗಿದ್ದು, ಆ ಪೈಕಿ ನಾಲ್ಕು ಪ್ರಕರಣಗಳು ಕೆಐಎಬಿಯಲ್ಲೇ ನಡೆದಿವೆ. ಈ ಮೂಲಕ ಬೆಂಗಳೂರು ಏರ್​​ಪೋರ್ಟ್​​ ಪಟ್ಟಿಯಲ್ಲಿ ದೇಶದಲ್ಲೇ ಮೊದಲ ಸ್ಥಾನ ಪಡೆದಿದೆ.

ಜನವರಿ 1ರಿಂದ ನವೆಂಬರ್ 27ರವರೆಗೆ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಲ್ಕು ಕಳ್ಳತನ ಪ್ರಕರಣಗಳು ನಡೆದಿದ್ದು, ದೆಹಲಿ, ಹೈದರಾಬಾದ್, ಮುಂಬೈ, ನಾಗಪೂರ್ ಮತ್ತು ರಾಜ್ಕೋಟ್ ವಿಮಾನ ನಿಲ್ದಾಣಗಳಲ್ಲಿ ತಲಾ ಒಂದು ಪ್ರಕರಣ ವರದಿಯಾಗಿದೆ ಎಂದು ವಿಮಾನಯಾನ ರಾಜ್ಯ ಖಾತೆ ಸಚಿವ ಮುರಳೀಧರ ಮೊಹೊಲ್ ಲೋಕಸಭೆಗೆ ತಿಳಿಸಿದ್ದಾರೆ. ಕಾಂಗ್ರೆಸ್ ಸಂಸದ ಗುರುಜೀತ್ ಸಿಂಗ್ ಔಜ್ಲಾ ಅವರ ಪ್ರಶ್ನೆಗೆ ಉತ್ತರಿಸಿರುವ ಅವರು, ಇಂತಹ ಘಟನೆಗಳು ಗಮನಕ್ಕೆ ಬಂದ ತಕ್ಷಣ ದೂರುಗಳು ದಾಖಲಾಗುತ್ತಿವೆ. ಸ್ಥಳೀಯ ಪೊಲೀಸರು ಮುಂದಿನ ಕ್ರಮವನ್ನುಕೈಗೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: 9 ಗಂಟೆ ವಿಳಂಬ ಮಾಡಿ ಪ್ರಯಾಣಿಕರ ಬಳಿ ಕ್ಷಮೆ ಕೇಳಿ ಉಡುಗರೆ ನೀಡಿದ ಇಂಡಿಗೋ

ವಿಮಾನ ನಿಲ್ದಾಣಗಳ ಟರ್ಮಿನಲ್ ಕಟ್ಟಡದ ಎಲ್ಲಾ ಪ್ರದೇಶಗಳು ಸಿಸಿಟಿವಿ ಕಣ್ಗಾವಲಿನಲ್ಲಿ ಇರಬೇಕು ಎಂದು ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಕಡ್ಡಾಯ ಮಾಡಿದೆ. ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಲು CISF ಮತ್ತು ಏರ್‍ಲೈನ್ ಭದ್ರತಾ ಸಿಬ್ಬಂದಿಗಳ ನಡುವೆ ನಿಕಟ ಸಹಕಾರ ಇದೆ. ಆ ಮೂಲಕ ವಿಮಾನ ನಿಲ್ದಾಣಗಳಲ್ಲಿ ಕಳ್ಳತನ ಘಟನೆಗಳನ್ನು ತಡೆಯಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮೊಹೊಲ್ ಹೇಳಿದ್ದಾರೆ.

ಪ್ರಯಾಣಿಕರಿಂದ ಕಳ್ಳತನದ ದೂರುಗಳನ್ನು ಸ್ವೀಕರಿಸಲು CISF ಸಹಾಯ ಕೌಂಟರ್‌ಗಳನ್ನು ಸ್ಥಾಪಿಸಿರುವುದಲ್ಲದೆ, ಸಿಸಿಟಿವಿ ಮೂಲಕ ನಿಗಾವಹಿಸಲು ತರಬೇತಿ ಪಡೆದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೇಂದ್ರದ CPGRAMS ಪೋರ್ಟಲ್, INGRAM ಪೋರ್ಟಲ್ ಮತ್ತು ಏರ್ ಸೇವಾ ಮೊಬೈಲ್ ಅಪ್/ವೆಬ್ ಪೋರ್ಟಲ್‌ಗಳು ಪ್ರಯಾಣಿಕರಿಗೆ ದೂರುಗ/ಅರ್ಜಿಗಳನ್ನು ಸಲ್ಲಿಸಲು ಅವಕಾಶ ಒದಗಿಸಿವೆ. ಇದರಲ್ಲಿ ಲಗೇಜ್​​ಗಳ ತಪ್ಪು ನಿರ್ವಹಣೆ ಕುರಿತ ದೂರುಗಳನ್ನೂ ಸಲ್ಲಿಸಬಹುದು ಎಂದು ಅವರು ತಿಳಿಸಿರೋದಾಗಿ ಡೆಕ್ಕನ್​​ ಹೆರಾಲ್ಡ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?