ಆನೇಕಲ್: ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು
ಬನ್ನೇರುಘಟ್ಟದ ಸುವರ್ಣಮುಖಿ ಕಲ್ಯಾಣಿಯಲ್ಲಿ ಈಜಲು ಹೋಗಿದ್ದ ಐವರು ವಿದ್ಯಾರ್ಥಿಗಳ ಪೈಕಿ ಇಬ್ಬರು ನೀರುಪಾಲಾದ ದುರ್ಘಟನೆ ನಡೆದಿದೆ. ಉಳಿದ ಮೂವರು ಸ್ನೇಹಿತರು ಕಣ್ಣ ಮುಂದೆಯೇ ತಮ್ಮ ಸ್ನೇಹಿತರನ್ನು ಕಳೆದುಕೊಂಡಿದ್ದಾರೆ. ಬೊಮ್ಮಸಂಸ್ರದ ಎಸ್ಎಫ್ಎಸ್ ಕಾಲೇಜಿನ ವಿಧ್ಯಾರ್ಥಿಗಳು. ಘಟನೆಯ ಸಂಪೂರ್ಣ ವಿಡಿಯೋ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.

ಆನೇಕಲ್, ಫೆಬ್ರವರಿ 09: ಈಜಲು ಹೋದ ಐವರ ಪೈಕಿ ಇಬ್ಬರು ವಿದ್ಯಾರ್ಥಿಗಳು (Students) ನೋಡನೋಡುತ್ತಿದಂತೆ ನೀರುಪಾಲಾಗಿರುವಂತಹ ಘಟನೆ ಬನ್ನೇರುಘಟ್ಟ ಸಮೀಪದ ಸುವರ್ಣಮುಖಿ ಕಲ್ಯಾಣಿಯಲ್ಲಿ ನಡೆದಿದೆ. ಬೊಮ್ಮನಹಳ್ಳಿ ಗಾರ್ವೇಬಾವಿ ಪಾಳ್ಯದ ದೀಪು (20) ಮತ್ತು ಯೋಗಿಶ್ವರನ್ (20) ಮೃತರು. ಮೊಬೈಲ್ ಕ್ಯಾಮರಾದಲ್ಲಿ ಇಬ್ಬರು ವಿದ್ಯಾರ್ಥಿಗಳ ಕೊನೆಯ ದೃಶ್ಯ ಸೆರೆಯಾಗಿದೆ.
ಬೊಮ್ಮಸಂಸ್ರದ ಎಸ್ಎಫ್ಎಸ್ ಕಾಲೇಜಿನ ಐವರು ವಿದ್ಯಾರ್ಥಿಗಳು ಬನ್ನೇರುಘಟ್ಟ ಸುವರ್ಣಮುಖಿಗೆ ತೆರಳಿದ್ದಾರೆ. ಬಳಿಕ ಕಲ್ಯಾಣಿಗೆ ಈಜಲು ಇಳಿದಿದ್ದಾರೆ. ಈ ಪೈಕಿ ದೀಪು, ಯೋಗೇಶ್ವರ್ಗೆ ಈಜಲು ಆಗದೆ ಪರದಾಡಿದ್ದಾರೆ. ಕೆಲ ಕಾಲ ಜೀವ ಉಳಿಸಿಕೊಳ್ಳಲು ಹೋರಾಟ ನಡೆಸಿದ್ದಾರೆ. ಇತ್ತ ರಕ್ಷಣೆ ಮಾಡಲು ಸಾಧ್ಯವಾಗದೆ ಉಳಿದ ಸ್ನೇಹಿತರು ಕಂಗಾಲಾಗಿದ್ದಾರೆ.
ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ ಅಡ್ಡಿ: ಪ್ರಿಯಕರನೊಂದಿಗೆ ಸೇರಿ ಗಂಡನನ್ನ ಹತ್ಯೆ ಮಾಡಿ ನದಿಗೆ ಎಸೆದ ಪತ್ನಿ
ಈಜಲು ಬಾರದೆ ಒಬ್ಬರಾದ ಮೇಲೆ ಒಬ್ಬರಂತೆ ಇಬ್ಬರು ಸ್ನೇಹಿತರು ಇನ್ನುಳಿದ ಸ್ನೇಹಿತರ ಕಣ್ಣೆದುರೇ ಮುಳುಗಿ ಪ್ರಾಣಬಿಟ್ಟಿದ್ದಾರೆ. ಘಟನೆಯ ಸಂಪೂರ್ಣ ವಿಡಿಯೋ ಅಲ್ಲಿದ್ದ ಯುವಕನ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಬೈಕ್‌ಗೆ ಲಾರಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು
ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಕಲಬುರಗಿ ನಗರದ ಹಾಗರಗಾ ಕ್ರಾಸ್ ಬಳಿ ನಡೆದಿದೆ. ನೂರಾನಿ ಮೊಹಲ್ಲಾ ನಿವಾಸಿ ಅಬ್ದುಲ್ ನಬಿ (65) ಮೃತ ದುರ್ದೈವಿ.
ಸಿಗ್ನಲ್ ದಾಟುವಾಗ ಲಾರಿ ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ ಸವಾರನ ಮೇಲೆ ಲಾರಿ ಹರಿದಿದೆ. ತಡರಾತ್ರಿ ಘಟನೆ ಸಂಭವಿಸಿದೆ. ಕಲಬುರಗಿ ಸಂಚಾರಿ ಠಾಣೆ-2 ರಲ್ಲಿ ಪ್ರಕರಣ ದಾಖಲಾಗಿದೆ.
ಮಕ್ಕಳು ಮಲಗಿರುವಾಗಲೇ ಪತಿ ಹತ್ಯೆಗೈದ ಪತ್ನಿ
ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಪತಿಯನ್ನು ಪತ್ನಿ ಹತ್ಯೆಗೈದಿರುವಂತಹ ಘಟನೆ ಬೆಳಗಾವಿಯ ರಾಮತೀರ್ಥ ನಗರದಲ್ಲಿ ಘಟನೆ ನಡೆದಿದೆ. ಪತಿ ಅಮಿತ್ ರಾಯಬಾಗ್ ಹತ್ಯೆಗೈದ ಪತ್ನಿ ಆಶಾ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ: ಕೇರಳ ಮೂಲದ ಕುಖ್ಯಾತ ಕಳ್ಳ ಬೆಂಗಳೂರಲ್ಲಿ ನಿಗೂಢ ಸಾವು: ಸುಳಿವು ನೀಡಿತು ಟ್ಯಾಟೂ
ಕ್ವಾಯಿಲ್ನಿಂದ ಅಮಿತ್ ಮೈಮೆಲೆ ಬರೆ ಹಾಕಿದ್ದ ಆಶಾ, ಬಳಿಕ ವೇಲ್ನಿಂದ ಕತ್ತುಬಿಗಿದು ಹತ್ಯೆಗೈದಿದ್ದಾರೆ. ಮನೆಯಲ್ಲಿ ಮಕ್ಕಳು ಮಲಗಿದ್ದಾಗ ಕೊಲೆ ಮಾಡಲಾಗಿದೆ. ಮನೆಯ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



