Anekal: ಕಾಲೇಜಿನಲ್ಲಿ ಕಬಡ್ಡಿ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು

ಕಬಡ್ಡಿ ಆಡುತ್ತಿದ್ದ ವೇಳೆ ಹೃದಯಾಘಾತವಾಗಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ.

Anekal: ಕಾಲೇಜಿನಲ್ಲಿ ಕಬಡ್ಡಿ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ಕಬಡ್ಡಿ ಆಡುವಾಗ ಹೃದಯಾಘಾತದಿಂದ ಮೃತಪಟ್ಟ ಸಂಗೀತಾ
Follow us
ನಯನಾ ರಾಜೀವ್
|

Updated on: Feb 09, 2023 | 7:37 AM

ಕಬಡ್ಡಿ ಆಡುತ್ತಿದ್ದ ವೇಳೆ ಹೃದಯಾಘಾತವಾಗಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಧಾರವಾಡ ಮೂಲದ ವಿದ್ಯಾರ್ಥಿನಿ ಸಂಗೀತಾ(17) ಮೃತ ವಿದ್ಯಾರ್ಥಿನಿ, ಸಂಗೀತಾ ಪ್ರಥಮ ಪಿಯು ತಂಡದಲ್ಲಿ ಆಕೆ ಆಡುತ್ತಿದ್ದಳು. ಆನೇಕಲ್ ತಾಲೂಕಿನ ಬಳಗಾರನಹಳ್ಳಿಯಲ್ಲಿ ಸಂಗೀತಾ ವಾಸವಿದ್ದಳು. ಕಬಡ್ಡಿ ಆಡುತ್ತಿರುವಾಗಲೇ ಕುಸಿದುಬಿದ್ದ ಸಂಗೀತಾಳನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಸಂಗೀತಾ ಮೃತಪಟ್ಟಿದ್ದರು.

ಅತ್ತಿಬೆಲೆಯ ಸೆಂಟ್ ಫಿಲೋಮಿನಾ ಶಾಲೆ (St. Philomena School Attibele) ಯಲ್ಲಿ ಘಟನೆ ನಡೆದಿದೆ. ತಕ್ಷಣ ಆಕೆಯನ್ನು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಸಂಗೀತಾ ಸಾವನ್ನಪ್ಪಿದ್ದಾಳೆ. ಸಂಗೀತಾ ಧಾರವಾಡ (Dharwad) ಮೂಲದವಳಾಗಿದ್ದು ಆನೇಕಲ್ ತಾಲೂಕಿನ ಬಳಗಾರನಹಳ್ಳಿಯಲ್ಲಿ ವಾಸವಿದ್ದರು ಎನ್ನಲಾಗಿದೆ.

ಕ್ರೀಡಾ ಉತ್ಸವದಲ್ಲಿ ಮಹಿಳೆಯರ ತಂಡದ ಕಬಡ್ಡಿ ಕೂಡ ಇತ್ತು, ಸಂಗೀತಾ ತನ್ನ ತಂಡದ ಪರವಾಗಿ ರೈಡಿಂಗ್ ಹೋಗಿದ್ದಳು. ಆಗ ಎದುರಾಳಿ ತಂಡದವರು ಆಕೆಯನ್ನು ಹಿಡಿಯಲು ಮುಂದಾಗಿದ್ದರು. ಆಗ ಒಮ್ಮೆಗೆ ಹೃದಯಾಘಾತಗೊಂಡು ಸಂಗೀತಾ ಕುಸಿದುಬಿದ್ದಿದ್ದಳು. ಕೂಡಲೇ ಆಕೆಯನ್ನು ಶಾಲಾ ಆಡಳಿತ ಮಂಡಳಿ ಆಸ್ಪತ್ರೆಗೆ ಕರೆದೊಯ್ದಿದ್ದರು.

ಅತ್ತಿಬೆಲೆ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ಸಂಗೀತಾ ಮೃತದೇಹ ಸ್ಥಳಾಂತರಿಸಲಾಗಿದೆ. ವಿದ್ಯಾರ್ಥಿನಿ ಸಂಗೀತಾ ಸಾವು ಹಿನ್ನೆಲೆ ಇಂದು ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ. ಇತ್ತೀಚೆಗೆ ಹೃದಯಾಘಾತದಿಂದ (Heart Attack) ಸಾವನ್ನಪ್ಪುವ ಯುವಕರ ಸಂಖ್ಯೆ ಹೆಚ್ಚಾಗಿದೆ. 20-45ರವೊಳಗಿನ ಪುರುಷರು ಹೆಚ್ಚಾಗಿ ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ನಟ ಪುನೀತ್ ರಾಜ್ ಕುಮಾರ್ ನಿಧನದ ನಂತರ ಹೆಚ್ಚಿನ ಯುವಕರು ಹೃದಯ ತಪಾಸಣೆ ಒಳಗಾದರಾದರೂ, ಸಾವಿನ ಪ್ರಮಾಣ ತಗ್ಗಿಲ್ಲ.

ಮತ್ತಷ್ಟು ಓದಿ: Heart Attack: ನಿಮಗೆ ಹೃದಯಾಘಾತದ ಅಪಾಯ ಎದುರಾಗಬಾರದು ಎಂದಿದ್ದರೆ ಈ ಒಂದು ವಿಚಾರವನ್ನು ಸದಾ ನೆನಪಿನಲ್ಲಿಡಿ

ತೀವ್ರ ಹೃದಯಾಘಾತದಿಂದ 6ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರಿನಲ್ಲಿ ನಡೆದಿತ್ತು. 12 ವರ್ಷದ ಬಾಲಕ ಕೀರ್ತನ್​ ಮೃತ ವಿದ್ಯಾರ್ಥಿಯಾಗಿದ್ದಾನೆ. ರಾತ್ರಿ ಮನೆಯಲ್ಲಿದ್ದ ವೇಳೆ ಬಾಲಕ ಕಿರುಚಿಕೊಂಡಿದ್ದು, ಆತಂಕಗೊಂಡ ಪೋಷಕರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಮಾರ್ಗ ನಡುವೆಯೇ ಬಾಲಕ ಕೊನೆಯುಸಿರೆಳೆದಿದ್ದಾನೆ.

ಜನವರಿ 11 ರಂದು ಒಂದೇ ದಿನ ಇಬ್ಬರು ವಿದ್ಯಾರ್ಥಿಗಳು ಹೃದಯಾಘಾತದಿಂದ ಮೃತಪಟ್ಟಿದ್ದರು. ಶಿವಮೊಗ್ಗದಲ್ಲಿ 10ನೇ ತರಗತಿ ವಿದ್ಯಾರ್ಥಿ ಜಯಂತ್ ರಜದಾತ್ರಯ್ಯ ಶಾಲೆಗೆ ಹೋಗಲು ರೆಡಿಯಾಗುತ್ತಿದ್ದ ವೇಳೆ ಕುಸಿದು ಮೃತಪಟ್ಟಿದ್ದ. ದಕ್ಷಿಣ ಕನ್ನಡದ ಸೂರತ್ಕಲ್​ನ ಕೃಷ್ಣಾಪುರ ನಿವಾಸಿ ಅಬ್ದುಲ್ ರೆಹಮಾನ್ ಎಂಬುವವರ ಪುತ್ರ 8ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ಹಸೀನ್ (14) ಶಾಲೆಗೆ ಹೊರಡಲೆಂದು ರೆಡಿ ಆಗುತ್ತಿದ್ದ ಸಮಯದಲ್ಲಿ ಹೃದಯಾಘಾತವಾಗಿ ಮೃತಪಟ್ಟಿದ್ದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್